ವಿಹಿಪಂ – ಬಜರಂಗದಳ ಬೈಂದೂರು ಪ್ರಖಂಡದ ಅಭ್ಯಾಸ ವರ್ಗ ಉದ್ಘಾಟನೆ

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: ವಿಶ್ವ ಹಿಂದೂ ಪರಿಷತ್ ಬಜರಂಗದಳ ವತಿಯಿಂದ ಹೋಟೆಲ್ ಅಂಬಿಕಾ ಇಂಟರ್‌ನ್ಯಾಶನಲ್ ಸಭಾಗಂಣದಲ್ಲಿ ಪ್ರಖಂಡದ ಅಭ್ಯಾಸ ವರ್ಗ ನಡೆಯಿತು.

ಮಂಗಳೂರು ವಿಭಾಗದ ಕಾರ್ಯದರ್ಶಿ ಚರಣ ಪಂಪ್‌ವೆಲ್ ಅಭ್ಯಾಸ ವರ್ಗ ಉದ್ಘಾಟಿಸಿದರು.

Call us

ವಿಶ್ವ ಹಿಂದೂ ಪರಿಷತ್ ಜಿಲ್ಲಾ ಉಪಾಧ್ಯಕ್ಷ ಶ್ರೀಧರ್ ಬಿಜೂರು ಪ್ರಾಸ್ತಾವಿಕವಾಗಿ ಮಾತನಾಡಿ, ಸಂಘಟನೆಯ ಮಹತ್ವ, ಉದ್ದೇಶ, ಜವಾಬ್ದಾರಿ ಕುರಿತು ಮಾಹಿತಿ ನೀಡಿದರು.

ಉದ್ಯಮಿ ಭೀಮೇಶ್ ಕುಮಾರ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ಸಂಘ ಹಾಗೂ ಸಂಘಟನೆಗೆ ಅಗತ್ಯವಿರುವ ಎಲ್ಲ ಸಹಕಾರವನ್ನು ಮಾಡುವುದಾಗಿ ಹೇಳಿದರು.

ಈ ಸಂದರ್ಭ ಜಿಲ್ಲಾ ಸಂಚಾಲಕ ಸುರೇಂದ್ರ ಕೋಟೇಶ್ವರ, ಜಿಲ್ಲಾ ಧರ್ಮ ಪ್ರಚಾರಕ್ ಗುರುರಾಜ್, ಬೈಂದೂರು ತಾಲೂಕು ಕಾರ್ಯದರ್ಶಿ ಪ್ರಶಾಂತ್, ವಿಶ್ವ ಹಿಂದೂ ಪರಿಷತ್ ಸಂಘಟನ ಕಾರ್ಯದರ್ಶಿ ಜಗದೀಶ್ ಕೊಲ್ಲೂರು ಉಪಸ್ಥಿತರಿದ್ದರು. ಶ್ರೀನಿವಾಸ್ ಮುದೂರು ಸ್ವಾಗತಿಸಿದರು. ನಿತ್ಯಾನಂದ ಗೀತೆ ಹಾಡಿದರು ಶರತ್ ಮೊವಾಡಿ ವಂದಿಸಿದರು.

Leave a Reply

Your email address will not be published. Required fields are marked *

seventeen − seven =