ವ್ಯವಸ್ಥಾಪನಾ ಸಮಿತಿ ರಚನೆ: ಅರ್ಜಿ ಆಹ್ವಾನ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಉಡುಪಿ:  ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ಕಾಯ್ದೆ ಅಧಿನಿಯಮದನ್ವಯ ಜಿಲ್ಲೆಯಲ್ಲಿರುವ ಬಿ ಪ್ರವರ್ಗದ 8 ಮತ್ತು ಸಿ ಪ್ರವರ್ಗದ 44 ಅಧಿಸೂಚಿತ ಸಂಸ್ಥೆಗಳು/ದೇವಸ್ಥಾನಗಳಿಗೆ ವ್ಯವಸ್ಥಾಪನಾ ಸಮಿತಿಯನ್ನು ಮೂರು ವರ್ಷದ ಅವಧಿಗೆ ರಚಿಸಲು ಆಸಕ್ತ ಭಕ್ತಾಧಿಗಳು/ಸಾರ್ವಜನಿಕರಿಂದ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ನಮೂನೆಯನ್ನು ಜಿಲ್ಲಾಧಿಕಾರಿಗಳ ಕಚೇರಿ ಅಥವಾ ಸಹಾಯಕ ಆಯುಕ್ತರ ಕಛೇರಿ ಯಿಂದ ಪಡೆದು ಭರ್ತಿ ಮಾಡಿ ಅಕ್ಟೋಬರ್ 21 ರ ಒಳಗೆ ಸಹಾಯಕ ಆಯುಕ್ತರು, ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ಇಲಾಖೆ ಉಡುಪಿ ಇವರಿಗೆ ಸಲ್ಲಿಸುವಂತೆ ಇಲಾಖೆಯ ಪ್ರಕಟಣೆ ತಿಳಿಸಿದೆ.

Leave a Reply

Your email address will not be published. Required fields are marked *

2 × five =