ಶಾಲಾ ವಿದ್ಯಾರ್ಥಿಗಳಿಗೆ ನೋಟ್ ಬುಕ್ ಹಸ್ತಾಂತರ

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕೋಟ:
ಸುವರ್ಣ ಇಂಡಸ್ಟ್ರೀಸ್ ಯಡ್ತಾಡಿ ಹಾಗೂ ಶ್ರೀವಿನಾಯಕ ಯುವಕ ಮಂಡಲ(ರಿ) ಸಾಬ್ರಕಟ್ಟೆ-ಯಡ್ತಾಡಿ ಇವರ ಸಂಯುಕ್ತ ಆಶ್ರಯದಲ್ಲಿ ಮಹಾತ್ಮ ಗಾಂಧಿ ಫ್ರೌಡಶಾಲೆ ಸಾಬ್ರಕಟ್ಟೆ ಇದರ ವಿದ್ಯಾರ್ಥಿಗಳಿಗೆ ನೋಟ್ ಪುಸ್ತಕಗಳನ್ನು ಕೊಡುಗೆ ರೂಪದಲ್ಲಿ ಶಾಲೆಯ ಮುಖ್ಯೋಪಾಧ್ಯಾಯರಿಗೆ ಹಸ್ತಾಂತರಿಸಿದರು.

Call us

Call us

Call us

ಈ ಸಂದರ್ಭದಲ್ಲಿ ಪುಸ್ತಕವನ್ನು ಸ್ವೀಕರಿಸಿ ಮಾತಾನಾಡಿದ ಮುಖ್ಯೋಪಾಧ್ಯಾಯರಾದ ಶ್ರೀ ಸತೀಶ್ ನಾಯ್ಕ್ ರವರು ವಿದ್ಯಾರ್ಥಿಗಳ ಬಗ್ಗೆ ವಿಶೇಷ ಕಾಳಜಿ ವಹಿಸಿ ಪುಸ್ತಕವನ್ನು ಕೊಡುಗೆ ನೀಡಿರುವುದು ಶ್ಲಾಘನೀಯ, ಕನ್ನಡ ಶಾಲೆಗಳ ಅಭಿವೃದ್ಧಿ ಇಂತಹ ಸಂಸ್ಥೆಗಳ ಸಹಕಾರದಿಂದ ಸಾಧ್ಯ, ನಿಮ್ಮ ಸಂಸ್ಥೆಯಿಂದ ಇನ್ನಷ್ಟೂ ಸಮಾಜಮುಖಿ ಕಾರ್ಯ ನಡೆದು ವಿದ್ಯಾರ್ಥಿಗಳ ಬದುಕಿಗೆ ಆಶಾಕಿರಣವಾಗಲಿ ಎಂದು ಹಾರೈಸಿದರು.

Call us

Call us

ಕಾರ್ಯಕ್ರಮದಲ್ಲಿ ಸುವರ್ಣ ಇಂಡಸ್ಟ್ರೀಸ್‌ನ ಮಾಲಕರಾದ ಶ್ರೀ ಜಯಕರ್ ಸುವರ್ಣ, ಯುವಕ ಮಂಡಲದ ಪೂರ್ವಾಧ್ಯಕ್ಷ ಶ್ರೀ ಶಿವರಾಮ ಪೂಜಾರಿ, ಶಾಲಾ ಶಿಕ್ಷಕ ವೃಂದದವರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

five × 5 =