ಶಿಕ್ಷಕರ ವಿವಿಧ ಬೇಡಿಕೆ ಈಡೇರಿಸಲು ತಾಲೂಕು ಶಿಕ್ಷಕರ ಸಂಘದಿಂದ ಮನವಿ

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು:
ತಾಲೂಕು ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ವತಿಯಿಂದ ರಾಜ್ಯ ಶಿಕ್ಷಕರ ಸಂಘದ ನಿರ್ದೇಶನದಂತೆ ಶಿಕ್ಷಕರ ವಿವಿಧ ಬೇಡಿಕೆಗಳನ್ನು ಈಡೇರಿಸುವ ಸಲುವಾಗಿ ಮಾನ್ಯ ಶಿಕ್ಷಣ ಸಚಿವರಿಗೆ/ ಪ್ರಧಾನ ಕಾರ್ಯದರ್ಶಿಗಳು ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ / ಆಯುಕ್ತರು ಸಾರ್ವಜನಿಕ ಶಿಕ್ಷಣ ಇಲಾಖೆ ಅವರಿಗೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ಮುಖಾಂತರ ಮನವಿಯನ್ನು ಕಚೇರಿಯ ಮುಖ್ಯಾಧಿಕಾರಿ ಹಾಗೂ ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿಗಳ ಮೂಲಕ ಇಂದು ಸಲ್ಲಿಸಲಾಯಿತು.

Click here

Click Here

Call us

Call us

Visit Now

Call us

Call us

ಈ ಸಂದರ್ಭ ತಾಲೂಕು ಶಿಕ್ಷಕ ಸಂಘದ ಅಧ್ಯಕ್ಷರಾದ ಶೇಖರ್ ಹೋರಾಟದ ರೂಪುರೇಷೆಗಳನ್ನು ಸವಿಸ್ತಾರವಾಗಿ ಹಾಗೂ ತರಬೇತಿ ಬಹಿಷ್ಕಾರ ಕಪ್ಪುಪಟ್ಟಿ ಧರಿಸಿ ಮಕ್ಕಳೊಂದಿಗೆ ಇದ್ದು ನಿರಂತರ ಹೋರಾಟ ಮಾಡಲು ಶಿಕ್ಷಕ ರ ಸಹಕಾರ ಕೋರಿ ಮನವಿ ಸಲ್ಲಿಸಿದರು.

ತಾಲೂಕು ಸಂಘದ ಪ್ರಧಾನ ಕಾರ್ಯದರ್ಶಿಗಳಾದ ಗಣಪತಿ ಹೋಬಳಿದಾರ್ ಪದವೀಧರ ಶಿಕ್ಷಕರ ಸಮಸ್ಯೆ ವ್ರಂದ ಮತ್ತು ನೇಮಕಾತಿ ನಿಯಮಗಳ ತಿದ್ದುಪಡಿ ಮುಖ್ಯೋಪಾಧ್ಯಾಯರ ವೇತನ ಬಡ್ತಿ ಸಮಸ್ಯೆ ನೂತನ ಪಿಂಚಣಿ ರದ್ದತಿ ಕುರಿತು ಗ್ರಾಮೀಣ ಕೃಪಾಂಕದ ಶಿಕ್ಷಕರ ಸಮಸ್ಯೆ ದೈಹಿಕ ಶಿಕ್ಷಕರ ಹಾಗೂ ಹಿಂದಿ ಶಿಕ್ಷಕರ ಸಮಸ್ಯೆಗಳ ಬಗ್ಗೆ ಮನವಿ ನೀಡಲಾಗಿದೆ ಎಂದರು

ತಾಲೂಕು ಸಂಘದ ಉಪಾಧ್ಯಕ್ಷರುಗಳಾದ ಸುನಿಲ್ ಶೆಟ್ಟಿ, ಗಿರಿಜಾ ಮೊಗವೀರ ಖಜಾಂಚಿ ಗಳಾದ ಅಚ್ಯುತ ಬಿಲ್ಲವ, ಸಹಕಾರ್ಯದರ್ಶಿ ಗಳಾದ ನಾಗರತ್ನ ಬಿ., ಮಂಜುನಾಥ ದೇವಾಡಿಗ ಸಂಘಟನಾ ಕಾರ್ಯದರ್ಶಿಗಳಾದ ಸುಬ್ರಹ್ಮಣ್ಯ ಗಾಣಿಗ, ನಾಗರತ್ನ ಮತ್ತು ಶಿಕ್ಷಕ ಸಂಘದ ಸದಸ್ಯರು ಹಾಗೂ ವಿವಿಧ ಶಾಲಾ ಶಿಕ್ಷಕರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

five × two =