ಶಿಕ್ಷಕ ಗೋವಿಂದ ಬಿಲ್ಲವ ಅವರಿಗೆ ಜಿಲ್ಲಾ ಆದರ್ಶ ಶಿಕ್ಷಕ ಪ್ರಶಸ್ತಿ

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: ಸಾರ್ವಜನಿಕ ಶಿಕ್ಷಣ ಇಲಾಖೆ, ಆದರ್ಶ ಆಸ್ಪತ್ರೆ ಉಡುಪಿ ಸಹಯೋಗದಲ್ಲಿ ನೀಡಲಾಗುತ್ತಿರುವ ಜಿಲ್ಲಾ ಆದರ್ಶ ಶಿಕ್ಷಕ ಪ್ರಶಸ್ತಿಯು ಕಿರಿಮಂಜೇಶ್ವರ ಸರ್ಕಾರಿ ಪ್ರೌಢಶಾಲಾ ಶಿಕ್ಷಕ ಗೋವಿಂದ ಬಿಲ್ಲವ ಕೆ. ಇವರಿಗೆ ದೊರೆತಿದೆ.

Call us

Call us

ಕ್ರೀಯಾಶೀಲ ಶಿಕ್ಷಕರಾಗಿರುವ ಗೋವಿಂದ ಬಿಲ್ಲವ ಅವರು ೧೯೮೨ರಲ್ಲಿ ಶಿಕ್ಷಕರಾಗಿ ನೇಮಕಗೊಂಡು ವಿವಿಧ ಶಾಲೆಗಳಲ್ಲಿ ಸೇವೆ ಸಲ್ಲಿಸಿ ನಂತರ ಪ್ರೌಢಶಾಲೆ ಶಿಕ್ಷಕರಾಗಿ ಬಡ್ತಿಹೊಂದಿದರು. ಅಕ್ಷರ ದಾಸೋಹ ಸಹಾಯಕ ನಿರ್ದೇಶಕರಾಗಿಯೂ ಕಾರ್ಯ ನಿರ್ವಹಿಸಿದ ಇವರು ಸಂಪನ್ಮೂಲ ವ್ಯಕ್ತಿಯಾಗಿ ಶಿಕ್ಷಕರಿಗೆ ವಿವಿಧ ತರಬೇತಿಗಳನ್ನು ನೀಡಿದ್ದಾರೆ. ಮುಖ್ಯೋಪಾಧ್ಯಾಯರಾಗಿಯೂ ಶಾಲಾಡಳಿತದ ಅನುಭವ ಹೊಂದಿದ್ದು, ಪ್ರಸ್ತುತ ಕಿರಿಮಂಜೇಶ್ವರ ಶಾಲೆಯಲ್ಲಿ ಒಂಭತ್ತು ವರ್ಷಗಳಿಂದ ಸೇವೆ ಸಲ್ಲಿಸುತ್ತಿದ್ದಾರೆ. ಒಟ್ಟು ೩೫ ವರ್ಷ ಸೇವಾ ಅನುಭವ ಹೊಂದಿದ ಇವರು ಇಲಾಖೆ ನೀಡುತ್ತಿರುವ ತರಬೇತಿಗಳನ್ನು ಪಡೆದು ಅದನ್ನು ತರಗತಿಯಲ್ಲಿ ಬೋಧನಾ ಕಲಿಕಾ ಪ್ರಕ್ರೀಯೇಯಲ್ಲಿ ಅಳವಡಿಸಿಕೊಂಡಿದ್ದಾರೆ. ಸಾರ್ವಜನಿಕ ಜೀವನದಲ್ಲಿಯೂ ಕ್ರೀಯಾಶೀಲರಾಗಿರುವ ಇವರು ವಿವಿಧ ಸಂಘ-ಸಂಸ್ಥೆಗಳಲ್ಲಿ ಸಕ್ರೀಯರಾಗಿದ್ದಾರೆ.

Leave a Reply

Your email address will not be published. Required fields are marked *

5 × three =