ಶಿಕ್ಷಣದಿಂದ ಸಂಸ್ಕಾರ ಹಾಗೂ ಸ್ವಾಭಿಮಾನ: ಶಾಸಕ ಬಿ. ಎಂ ಸುಕುಮಾರ ಶೆಟ್ಟಿ

Click Here

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: ಶಿಕ್ಷಣ ವ್ಯಕ್ತಿಯಲ್ಲಿ ಸಂಸ್ಕಾರ ಹಾಗೂ ಸ್ವಾಭಿಮಾನವನ್ನು ಬೆಳೆಸುತ್ತದೆ. ಶಿಕ್ಷಣದ ಜೊತೆಗೆ ಕಲಾಚಟುವಟಿಕೆಗಳಲ್ಲಿ ತೊಡಗಿಕೊಳ್ಳುವುದರಿಂದ ಆತ ಮತ್ತಷ್ಟು ಕ್ರೀಯಾಶೀಲನಾಗುತ್ತಾನೆ. ಕಲೆ, ಶಿಕ್ಷಣ ಎಲ್ಲದರ ಮೂಲ ಉದ್ದೇಶ ಸಮಾಜವನ್ನು ಪ್ರಗತಿಯತ್ತ ಕೊಂಡೊಯ್ಯುವುದಾಗಿದೆ ಎಂದು ಶಾಸಕ ಬಿ. ಎಂ. ಸುಕುಮಾರ ಶೆಟ್ಟಿ ಹೇಳಿದರು.

Call us

Call us

Visit Now

ಅವರು ಪರಿಶಿಷ್ಟ ಪಂಗಡದ ರಂಗತಂಡ ಸಂಚಲನ ರಿ. ಹೊಸೂರು ಆಶ್ರಯದಲ್ಲಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದೊಂದಿಗೆ ಭಾನುವಾರ ಹೊಸೂರಿನ ಕೆ.ವಿ ಸುಬ್ಬಣ್ಣ ವನರಂಗದಲ್ಲಿ ಆಯೋಜಿಸಲಾದ ಹನ್ನೆರಡನೇ ವರ್ಷದ ವಾರ್ಷಿಕ ಸಂಭ್ರಮ ವನಸಿರಿಯಲ್ಲೊಂದು ರಂಗಸುಗ್ಗಿ ಕಾರ್ಯಕ್ರಮವನ್ನು ದೀಪ ಬೆಳಗಿ, ಮಡಿಕೆಗೆ ಹಾಲೆರೆದು ಉದ್ಘಾಟಿಸಿ ಮಾತನಾಡಿದರು.

Click here

Click Here

Call us

Call us

ಪರಿಶಿಷ್ಟ ಪಂಗಡ ಸಮುದಾಯದ ಅಭ್ಯುದಯಕ್ಕೆ ಬದ್ಧನಾಗಿದ್ದು, ಸಮುದಾಯಕ್ಕೆ ಅಗತ್ಯವಾದ ಎಲ್ಲಾ ಸೌಕರ್ಯಗಳನ್ನು ಒದಗಿಸಿಕೊಡಲಾಗುವುದು. ತೂದಳ್ಳಿ ಕಿಂಡಿ ಅಣೆಕಟ್ಟಿಗೆ 3.75 ಲಕ್ಷ ರೂ., ಅತ್ಯಾಡಿ ತೂದಳ್ಳಿ ರಸ್ತೆಗೆ 1.64 ಲಕ್ಷ ರೂ. ಅನುದಾನ ಬಿಡುಗಡೆಗೊಂಡಿದ್ದು ಯಡ್ತರೆ ಗ್ರಾಮಕ್ಕೆ ಒಟ್ಟು8 ಕೋಟಿ ಅನುದಾನ ಈಗಾಗಲೇ ಬಿಡುಗಡೆಯಾಗಿದೆ ಎಂದರು.

Click Here

ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಕಾರ್ಯದರ್ಶಿ ಕೆ. ಸುಬ್ರಹ್ಮಣ್ಯ ಶೆಟ್ಟಿ ಅವರು ಮಾತನಾಡಿ ಮನುಷ್ಯ ಸಹಜತೆಯಿಂದ ದೂರವಾದಂತೆ ಅಲ್ಲಿ ದುರದೃಷ್ಟಕರ ಘಟನೆಗಳು ನಡೆದಿವೆ. ಸಮಾಜ ಸಹಜತೆಯಿಂದ ದೂರವಾದಂತೆ ರಂಗಚಟುವಟಿಕೆಗಳು ಎಲ್ಲರನ್ನೂ ಎಚ್ಚರಿಸುವ ಕೆಲಸ ಮಾಡುತ್ತವೇ ಬಂದಿವೆ ಎಂದರು.

ಸಂಚಲನ ರಿ. ಹೊಸೂರು ಅಧ್ಯಕ್ಷ ಮಹದೇವ ಮರಾಠಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಯಡ್ತರೆ ಗ್ರಾಮ ಪಂಚಾಯತ್ ಸದಸ್ಯೆ ಲಲಿತಾ ನಾಗಪ್ಪ ಮರಾಠಿ, ಪತ್ರಕರ್ತ ಅರುಣಕುಮಾರ್ ಶಿರೂರು, ಬೈಂದೂರು ಸಿಟಿ ಜೆಸಿಐ ಅಧ್ಯಕ್ಷೆ ಪ್ರಿಯದರ್ಶಿನಿ ಕಮಲೇಶ್, ಮರಾಠಿ ಸಮುದಾಯದ ಗುರಿಕಾರ ಗಣೇಶ ಮರಾಠಿ, ಮುಲ್ಲಿಬಾರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯೋಪಧ್ಯಾಯ ಮಹಾಬಲೇಶ್ವರ ಎಸ್. ಮೊದಲಾದವರು ಉಪಸ್ಥಿತರಿದ್ದರು.

ಬೈಂದೂರು ಸರಕಾರಿ ಪ್ರಥಮದರ್ಜೆ ಕಾಲೇಜಿನ ಪ್ರಭಾರ ಪ್ರಾಂಶುಪಾಲರಾದ ಡಾ. ರಘು ನಾಯ್ಕ್ ಅವರನ್ನು ಸನ್ಮಾನಿಸಲಾಯಿತು.

ಸಂಸ್ಥೆಯ ಖಜಾಂಚಿ ನಾಗಪ್ಪ ಮರಾಠಿ ಸ್ವಾಗತಿಸಿದರು. ಕಾರ್ಯದರ್ಶಿ ರಾಜು ಮರಾಠಿ ವಂದಿಸಿದರು. ಶಿಕ್ಷಕ ಸುಧಾಕರ ಪಿ. ಕಾರ್ಯಕ್ರಮ ನಿರೂಪಿಸಿದರು. ಬಳಿಕ ಕೆ. ವಿ. ಸುಬ್ಬಣ್ಣ ರಂಗಸಮೂಹ ಹೆಗ್ಗೋಡು ಪ್ರಸ್ತುತಿಯ ಸಂದೇಹ ಸಾಮ್ರಾಜ್ಯ ನಾಟಕ ಪ್ರದರ್ಶನಗೊಂಡಿತು.

Leave a Reply

Your email address will not be published. Required fields are marked *

one × four =