ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಸಾಮಾಜಿಕ ಸಮಾನತೆಗೆ ಶಿಕ್ಷಣವೇ ಮೂಲ ವೇದಿಕೆ, ಆಸ್ಪೃಶ್ಯತೆ ಕಾಲಘಟ್ಟದಲ್ಲಿ ಶಿಕ್ಷಣ ಮೂಲಕ ಸಮಾನತೆ ಸಾಧ್ಯ ಎನ್ನುವುದು ಅಂಬೇಡ್ಕರ್ ನಂಬಿಕೆಯಾಗಿತ್ತು. ಮೇಲೂ, ಕೀಳು ಭಾವನೆ ತೊಳೆದ ಹಾಕಲು ಶಿಕ್ಷಣ ಒಂದೇ ಮಾರ್ಗ. ಪ್ರಸಕ್ತ ಕಾಲಘಟ್ಟದಲ್ಲಿ ಅಲ್ಪಸ್ವಲ್ಪ ಅಸ್ಪೃಶ್ಯತೆ ಇದ್ದರೂ, ಅದನ್ನು ಶಿಕ್ಷಣದ ಮೂಲಕ ನಿವಾರಣೆ ಮಾಡಿಕೊಳ್ಳಬೇಕು ಎಂದು ಕುಂದಾಪುರ ಉಪವಿಭಾಗಾಧಿಕಾರಿ ಶಿಲ್ಪಾ ನಾಗ್ ಸಿ.ಟಿ. ಅಭಿಪ್ರಾಯಪಟ್ಟರು.
ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ಕುಂದಾಪುರ ಶಾಖೆ ಆಶ್ರಯದಲ್ಲಿ ಡಾ.ಬಾಬಾ ಸಾಹೇಬ್ ಆಂಬೇಡ್ಕರ್ ಜನ್ಮ ದಿನಾಚರಣೆ ನಿಮಿತ್ತ ಶುಕ್ರವಾರ ಕುಂದಾಪುರ ಶಾಸ್ತ್ರಿ ವೃತ್ತದಲ್ಲಿ ಹಮ್ಮಿಕೊಂಡ ನಮ್ಮ ಭೂಮಿ, ನಮ್ಮ ಹಕ್ಕು ಜಾಗೃತೆಗಾಗಿ ಹೊರಟ ಜೈ ಭೀಮ್ ರ್ಯಾಲಿ ಉದ್ಘಾಟಿಸಿ ಮಾತನಾಡುತ್ತಿದ್ದರು.
ಅಂಬೇಡ್ಕರ್ ಶ್ರೇಷ್ಠ ಸಂವಿಧಾನದ ಮೂಲಕ ಸಮಾಜಿಕ ಪರಿರ್ವತೆ ಹರಿಕಾರರಾಗಿದ್ದು, ಪರಿಶಷ್ಟ ಜಾತಿ ಮತ್ತು ಪಂಗಡದ ಮೀಸಲು ಭೂಮಿ ಹಕ್ಕು ನೀಡಲು ತಾಲೂಕ್ ಆಡಳಿತ ಬದ್ದವಾಗಿದೆ ಎಂದು ಹೇಳಿದರು.
ಕುಂದಾಪುರ ಪುರಸಭೆ ಉಪಾಧ್ಯಕ್ಷ ರಾಜೇಶ್ ಕಾವೇರಿ, ನಗರಾಭಿವೃದ್ಧಿ ಪ್ರಾಧಿಕಾರಿ ಅಧ್ಯಕ್ಷ ವಿಕಾಸ್ ಹೆಗ್ಡೆ, ಕುಂದಾಪುರ ತಹಸೀಲ್ದಾರ್ ಜಿ,ಎಂ.ಬೋರ್ಕರ್, ಡಿಎಸ್ಪಿ ಪ್ರವೀಣ್ ಹೆಚ್.ನಾಯ್ಕ್, ಮಂಜುನಾಥ ಆಸ್ಪತ್ರೆ ವೈದ್ಯಕೀಯ ನಿರ್ದೇಶಕ ಎಂ.ವಿ.ಕುಲಾಲ್, ನೂತನ್ ಮೆಡಿಕಲ್ ಸೆಂಟರ್ ವೈದ್ಯಕೀಯ ನಿರ್ದೇಶಕ ಡಾ.ರಂಜನ್ ಕುಮಾರ್ ಶೆಟ್ಟಿ, ಕೋಟೇಶ್ವರ ಎನ್.ಆರ್.ಆಚಾರ್ಯ ಆಸ್ಪತ್ರೆ ವೈದ್ಯಕೀಯ ನಿರ್ದೇಶಕ ಡಾ.ಭಾಸ್ಕರ್ ಆಚಾರ್ಯ, ವಕೀಲ ಸತೀಶ್ ಕಾಳಾವರ್ಕರ್, ಉದ್ಯಮಿ ಇಬ್ರಾಹಿಂ ಸಾಹೇಬ್ ಕೋಟ, ಕುಂದಾಪುರ ತಾಪಂ ಇಒ ಚೆನ್ನಪ್ಪ ಮೋಯಿಲಿ, ಪುರಸಭೆ ಮುಖ್ಯಾಧಿಕಾರಿ ಗೋಪಾಲಕೃಷ್ಣ ಶೆಟ್ಟಿ, ಜಿಲ್ಲಾ ಸಂಘಟನಾ ಸಂಚಾಲಕ ವಾಸುದೇವ ಮುದೂರು, ತಾಲೂಕ್ ಮಹಿಳಾ ಒಕ್ಕೂಟ ಸಂಚಾಲಕಿ ಗೀತಾ ಸುರೇಶ್ ಕುಮಾರ್, ಜಿಲ್ಲಾ ಸಮಿತಿ ಸದಸ್ಯ ಚಂದ್ರ ಹಳಗೇರಿ, ಉಡುಪಿ ದಲಿತ ಸಂಘರ್ಷ ಸಮಿತಿ ಸುರೇಶ್ ಬೈಂದೂರು, ತಾಲೂಕ್ ಕಾರ್ಮಿಕ ಘಟಕ ಧರ್ಮರಾಜ್ ಮೂದಲಿಯಾರ್ ಇದ್ದರು. ವಕೀಲ ಮಂಜುನಾಥ ಗಿಳಿಯಾರು ಪ್ರಾಸ್ತಾವಿಕ ಮಾತನಾಡಿ, ಸ್ವಾಗತಿಸಿದರು. ದಲಿತ ಸಂಘರ್ಷ ಸಮಿತಿ ಕುಂದಾಪುರ ತಾಲೂಕ್ ಅಧ್ಯಕ್ಷ ರಾಜು ಬೆಟ್ಟಿನಮನೆ ಅತಿಥಿಗಳ ಗೌರವಿಸಿದರು.