ಶಿಕ್ಷಣ ಸಂಸ್ಥೆಯ ಬಳಿ ತಂಬಾಕು ಮಾರಬೇಡಿ: ವಿದ್ಯಾರ್ಥಿಗಳಿಂದಲೇ ವರ್ತಕರಿಗೆ ಮನವಿ

Click Here

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಗಂಗೊಳ್ಳಿ: ಶಿಕ್ಷಣ ಸಂಸ್ಥೆಯ ೧೦೦ ಗಜದ ಅಂತರದಲ್ಲಿ ತಂಬಾಕು ಉತ್ಪನ್ನಗಳ ಮಾರಾಟವನ್ನು ಸಂಪೂರ್ಣ ಸ್ಥಗಿತಗೊಳಿಸುವಂತೆ ಆಗ್ರಹಿಸಿ ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ವಿದ್ಯಾ ಸಂಸ್ಥೆಗಳ ವಿದ್ಯಾರ್ಥಿಗಳು ಬುಧವಾರ ವಿದ್ಯಾಸಂಸ್ಥೆಗಳ ಸಮೀಪವಿರುವ ಅಂಗಡಿ, ವ್ಯಾಪಾರ ಕೇಂದ್ರಗಳಿಗೆ ತೆರಳಿ ಮನವಿ ಮಾಡಿಕೊಂಡರು.

Click Here

Call us

Call us

Visit Now

ಶಿಕ್ಷಣ ಸಂಸ್ಥೆಗಳ ೧೦೦ ಗಜದ ಅಂತರದಲ್ಲಿ ತಂಬಾಕು ಉತ್ಪನ್ನಗಳ ಮಾರಾಟ ಕಾಯ್ದೆಯಂತೆ ನಿಷೇಧಿಸಿದ್ದರೂ ಸಹ ವಿದ್ಯಾರ್ಥಿಗಳನ್ನೇ ಗುರಿಯನ್ನಾಗಿಸಿ ತಂಬಾಕು ಉತ್ಪನ್ನಗಳ ಮಾರಾಟವನ್ನು ಅವ್ಯಾಹತವಾಗಿ ನಡೆಸಲಾಗುತ್ತಿದೆ. ಆದ್ದರಿಂದ ಯಾವುದೇ ಕಾರಣಕ್ಕೂ ಶಿಕ್ಷಣ ಸಂಸ್ಥೆಯ ೧೦೦ ಗಜದ ಅಂತರದಲ್ಲಿ ತಂಬಾಕು ಉತ್ಪನ್ನಗಳ ಮಾರಾಟ ಮಾಡಬಾರದು. ಇಂದಿನಿಂದಲೇ ತಂಬಾಕು ಉತ್ಪನ್ನಗಳ ಮಾರಾಟವನ್ನು ಸಂಪೂರ್ಣ ಸ್ಥಗಿತಗೊಳಿಸಿ ಮುಗ್ಧ ಜೀವಗಳನ್ನು ಉಳಿಸಿ ತಂಬಾಕು ರಹಿತ ಶೈಕ್ಷಣಿಕ ಸಂಸ್ಥೆಗಳ ನವನಿರ್ಮಾಣದಲ್ಲಿ ಕೈಜೋಡಿಸಬೇಕೆಂದು ಶಾಲಾ ಕಾಲೇಜಿನ ವಿದ್ಯಾರ್ಥಿಗಳು ವ್ಯಾಪಾರಸ್ಥರಲ್ಲಿ ಮನವಿ ಮಾಡಿದರು.

Click here

Click Here

Call us

Call us

ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜು, ಸರಸ್ವತಿ ವಿದ್ಯಾಲಯ ಆಂಗ್ಲ ಮಾಧ್ಯಮ ಶಾಲೆ ಹಾಗೂ ಸರಸ್ವತಿ ವಿದ್ಯಾಲಯ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದ ಉಪಪ್ರಾಂಶುಪಾಲ ವಾಮನದಾಸ ಭಟ್, ದೈಹಿಕ ಶಿಕ್ಷಣ ಶಿಕ್ಷಕ ಕೆ.ಸದಾನಂದ ವೈದ್ಯ, ಸಹಶಿಕ್ಷಕರಾದ ಉಮೇಶ್ ಕರ್ಣಿಕ್, ಶ್ರೀಲತಾ, ಸರಸ್ವತಿ ವಿದ್ಯಾಲಯ ಆಂಗ್ಲ ಮಾಧ್ಯಮ ಶಾಲೆಯ ಮುಖ್ಯಶಿಕ್ಷಕ ರಾಘವೇಂದ್ರ ಶೇರುಗಾರ್, ದೈಹಿಕ ಶಿಕ್ಷಣ ಶಿಕ್ಷಕ ಸಂತೋಷ ಖಾರ್ವಿ, ಸರಸ್ವತಿ ವಿದ್ಯಾಲಯ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯಶಿಕ್ಷಕಿ ಸುಮನಾ ಪಡಿಯಾರ್, ಸಹಶಿಕ್ಷಕರಾದ ವಿಶ್ವನಾಥ ಭಟ್, ಸುಭಾಶ್ಚಂದ್ರ ನಾಯಕ್, ಶಿಕ್ಷಕ ರಕ್ಷಕ ಸಮಿತಿಯ ಕಾರ್ಯದರ್ಶಿ ಪ್ರಕಾಶ ಶೆಣೈ ಮೊದಲಾದವರು ವಿದ್ಯಾರ್ಥಿಗಳೊಂದಿಗೆ ಇದ್ದರು.

Leave a Reply

Your email address will not be published. Required fields are marked *

three + seven =