ಶಿರೂರು: ಕಾರು-ಬೊಲೆರೊ ಢಿಕ್ಕಿ. ಪ್ರಯಾಣಿಕರು ಪಾರು

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: ಇಲ್ಲಿಗೆ ಸಮೀಪದ ಶಿರೂರು ರಾಹೆ-66ರ ಸೇತುವೆಯಲ್ಲಿ ಮಾರುತಿ ಸ್ವಿಫ್ಟ್ ಡಿಸೈರ್ ಹಾಗೂ ಮಹಿಂದ್ರಾ ಬೊಲೆರೊ ನಡೆದ ಸಂಭವಿಸಿದ ಅಪಘಾತದಲ್ಲಿ ವಾಹಗಳು ನುಜ್ಜುಗುಜ್ಜಾಗಿ, ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾದ ಘಟನೆ ವರದಿಯಾಗಿದೆ.

Call us

Call us

Call us

ಧರ್ಮಸ್ಥಳದಿಂದ ಹುಬ್ಬಳ್ಳಿಯ ಕಡೆಗೆ ಹೊರಟಿದ್ದ ಕಾರಿಗೆ ಎದುರಿನಿಂದ ಬಂದ ಬೊಲೆರೊ ವಾಹನ ಡಿಕ್ಕಿಯಾಗಿ ವಾಹನಗಳು ಜಖಂಗೊಂಡಿದ್ದವು. ಕಾರಿನಲ್ಲಿದ್ದ ಪ್ರಯಾಣಿಸುತ್ತಿದ್ದವರಿಗೆ ಗಾಯಗಳಾಗಿದ್ದು ಆಸ್ಪತ್ರೆಗೆ ದಾಖಲಿಸಲಾಯಿತು. ಡಿಕ್ಕಿಯ ರಭಸಲ್ಲಿ ಕೂದಲೆಳೆ ಅಂತರದಲ್ಲಿ ಸೇತುವೆ ಕೆಳಗೆ ಬೀಳದೇ ಬಚಾವಾಗಿದೆ. ಈ ಅಪಘಾತಕ್ಕೆ ಬೊಲಿರೊ ವಾಹನದ ಚಾಲಕನ ನಿರ್ಲಕ್ಷವೇ ಕಾರಣವೆಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ವಾಹನದ ಚಾಲಕ ಮದ್ಯಪಾನ ಮಾಡಿ ವಾಹನ ಚಲಾಯಿಸಿದ್ದು, ಭಟ್ಕಳದಲ್ಲಿಯೂ ಕೂಡಾ ಕೆಲವು ವಾಹನಗಳಿಗೆ ಜಖಂ ಮಾಡಿ ಅಲ್ಲಿಂದ ಪಾರಾಗಿ ಬಂದಿದ್ದ ಎನ್ನಲಾಗಿದೆ. ಈ ಘಟನೆಯಿಂದ ಕೆಲಕಾಲ ಹೆದ್ದಾರಿಯಲ್ಲಿ ವಾಹನ ಸಂಚಾರ ಅಸ್ತವ್ಯಸಗೊಂಡಿತ್ತು. ಬೈಂದೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Call us

Call us

Leave a Reply

Your email address will not be published. Required fields are marked *

10 + four =