ಶಿರೂರು: ಟ್ಯಾಂಕರ್ ಡಿಕ್ಕಿಯಾಗಿ ಬೈಕ್ ಸವಾರನ ಸಾವು

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: ಇಲ್ಲಿನ ಶಿರೂರು ಮಾರ್ಕೆಟ್ ಬಳಿ ಟ್ಯಾಂಕರ್ ಹಾಗೂ ಬೈಕ್ ನಡುವೆ ನಡೆದ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲಿಯೇ ಮೃತಪಟ್ಟ ದಾರುಣ ಘಟನೆ ವರದಿಯಾಗಿದೆ. ಮೃತ ಯುವಕನನ್ನು ಭಟ್ಕಳದ ಗಣೇಶ್ ನಾಯ್ಕ್ (23) ಎಂದು ಗುರುತಿಸಲಾಗಿದೆ.

Call us

Call us

Call us

ಶಿರೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ತೆರಳುತ್ತಿದ್ದ ಟ್ಯಾಂಕ್‌ರ್ ಬೈಕಿನಲ್ಲಿ ತೆರಳುತ್ತಿದ್ದ ಗಣೇಶ್ ನಾಯ್ಕ್‌ಗೆ ಡಿಕ್ಕಿ ಹೊಡಿದು, ಅವರ ತಲೆಯ ಮೇಲೆಯೇ ಹಿಂದಿನ ಚಕ್ರಗಳು ಹಾದುಹೋದ ಪರಿಣಾಮ ಬೈಕ್ ಸವಾರ ಸ್ಥಳದಲ್ಲಿಯೇ ಮೃತಪಟ್ಟಿದ್ದರು. ದಾಂಡೆಲಿಯವರಾದ ಗಣೇಶ್ ಖಾಸಗಿ ಕಂಪೆನಿಯಲ್ಲಿ ಉದ್ಯೋಗಿಯಾಗಿದ್ದು, ಭಟ್ಕಳದ ತನ್ನ ಸಂಬಂಧಿಯ ಮನೆಯಲ್ಲಿ ವಾಸವಾಗಿದ್ದರು. ಬೈಂದೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

Leave a Reply

Your email address will not be published. Required fields are marked *

7 + 11 =