ಶಿರೂರು ದಾಸನಾಡಿ ಶ್ರೀವೆಂಕಟರಮಣ ದೇವಸ್ಥಾನದಲ್ಲಿ ಅಷ್ಟಬಂಧ ಬ್ರಹ್ಮಕಲಶ

Click Here

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ
ಬೈಂದೂರು: ಶಿರೂರು ದಾಸನಾಡಿ ಶ್ರೀವೆಂಕಟರಮಣ ದೇವಸ್ಥಾನದಲ್ಲಿ ಅಷ್ಟಬಂಧ, ಬ್ರಹ್ಮಕಲಶ ಕಾರ್ಯಕ್ರಮ ವೈಭವದಿಂದ ನಡೆಯಿತು.. ವಿಘ್ನೇಶ್ವರ ಭಟ್ ಕತ್‌ಗಾಲ್ ಇವರ ನೇತ್ರತ್ವದಲ್ಲಿ ಹಾಗೂ ದೇವಸ್ಥಾನದ ಅರ್ಚಕರಾದ ರವೀಂದ್ರ ಅಯ್ಯಂಗಾರ್ ಸಹಯೋಗದಲ್ಲಿ ಶ್ರೀ ದೇವತಾ ಪ್ರಾರ್ಥನೆಯೊಂದಿಗೆ ಆರಂಭಗೊಂಡ ಧಾರ್ಮಿಕ ವಿಧಿಗಳು ಬ್ರಹ್ಮಕಲಶಾಭಿಷೇಕ, ಮಹಾವಿಷ್ಣುಯಾಗ ಅವಭೃತ, ಪೂರ್ಣಾಹುತಿ, ಮಹಾಪೂಜೆ ಮಹಾಪ್ರಾರ್ಥನೆ, ಬ್ರಾಹ್ಮಣ ಸುಹಾಸಿನಿ ಆರಾಧನೆ, ತೀರ್ಥ ಪ್ರಸಾದ ವಿತರಣೆಯೊಂದಿಗೆ ಸಂಪನ್ನಗೊಂಡಿತು. ಹಾಗೂ ಮದ್ಯಾಹ್ನ ಮಹಾಅನ್ನಸಂತರ್ಪಣೆ ನಡೆಯಿತು. ಸಂಜೆ ಸಾಂಸ್ಕೃತಿಕ ವೈವಿಧ್ಯ ಮತ್ತು ಶ್ರೀ ವೆಂಕಟೇಶ್ವರ ಭಜನಾ ಮಂಡಳಿಯವರಿಂದ ಭಜನಾ ಕಾರ್ಯಕ್ರಮ ಜರುಗಿತು. ಈ ಸಂದರ್ಭ ಸತತ ಮೂರು ದಿನಗಳಿಂದ ನಡೆದ ಈ ದೇವತಾ ಕಾರ್ಯದ ಯಶಸ್ಸಿಗೆ ಸಹಕರಿಸಿದ ದೇವಳದ ಆಡಳಿತ ಮಂಡಳಿಯ ಸದಸ್ಯರು, ಅರ್ಚಕವೃಂದ, ಗ್ರಾಮಸ್ಥರು ದಾನಿಗಳು ಹಾಗೂ ಭಕ್ತಾದಿಗಳಿಗೆ ದೇವಳದ ಆಡಳಿತ ಮೊಕ್ತೇಸರ ಎಸ್. ನಾಗಯ್ಯ ಶೆಟ್ಟಿ ಹೊಸ್ಮನೆ ಕೃತಜ್ಞತೆ ಸಲ್ಲಿಸಿದ್ದಾರೆ.

Click Here

Call us

Call us

Visit Now

 

Click here

Click Here

Call us

Call us

Leave a Reply

Your email address will not be published. Required fields are marked *

nine + ten =