ಶಿಶು ಮತ್ತು ತಾಯಿ ಮರಣ ನಿಯಂತ್ರಣಕ್ಕೆ ಕ್ರಮ ವಹಿಸಿ: ಜಿಲ್ಲಾಧಿಕಾರಿ ಸೂಚನೆ

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಉಡುಪಿ:
ಶಿಶು ಮತ್ತು ತಾಯಿ ಮರಣ ಸಂಖ್ಯೆಯನ್ನು ನಿಯಂತ್ರಿಸಲು ಜಿಲ್ಲೆಯಲ್ಲಿ ಪ್ರಾರಂಭಿಕ ಹಂತದಲ್ಲಿಯೇ ಗರ್ಭಿಣಿ ಸ್ತ್ರೀಯರಿಗೆ ತಾಯಿ ಕಾರ್ಡ್ ನೀಡುವುದರೊಂದಿಗೆ, ಉತ್ತಮ ಆರೋಗ್ಯ ಸೇವೆಯನ್ನು ಒದಗಿಸಬೇಕು ಎಂದು ಜಿಲ್ಲಾಧಿಕಾರಿ ಜಿ. ಜಗದೀಶ್ ಆರೋಗ್ಯ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದರು.

Call us

Call us

Call us

ಅವರು ತಮ್ಮ ಕಚೇರಿ ಸಭಾಂಗಣದಲ್ಲಿ, ಶಿಶು ಮತ್ತು ತಾಯಿ ಮರಣ ನಿಯಂತ್ರಣ ಹಾಗೂ ಲಸಿಕಾ ಕಾರ್ಯಪಡೆ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು.

Call us

Call us

ಸರ್ಕಾರ ಶಿಶು ಹಾಗೂ ತಾಯಿ ಮರಣ ಪ್ರಮಾಣ ತಡೆಗಟ್ಟಲು ಅನೇಕ ಯೋಜನೆಗಳು ಹಾಗೂ ಕಾರ್ಯಕ್ರಮಗಳನ್ನು ಹಾಕಿಕೊಂಡಿದ್ದರೂ ಸಹ ಲಾಕ್ಡೌನ್ ಅವಧಿಯಲ್ಲಿ ಶಿಶು ಮತ್ತು ತಾಯಿ ಮರಣ ಪ್ರಮಾಣವು ಸ್ವಲ್ಪ ಪ್ರಮಾಣದಲ್ಲಿ ಹೆಚ್ಚಾಗಿರುವುದು ಕಂಡುಬಂದಿದೆ, ಕೊರೋನಾ ಸೋಂಕಿಗೆ ಚಿಕಿತ್ಸೆ ನೀಡುವುದರ ಜೊತೆಗೆ ಇತರೆ ಸಾಮಾನ್ಯ ಕಾಯಿಲೆ ಹಾಗೂ ಗರ್ಭಿಣಿ ಸ್ತ್ರೀಯರ ಪರೀಕ್ಷೆಗೆ ಒತ್ತು ನೀಡಬೇಕು ಎಂದರು.

ಜಿಲ್ಲೆಯಲ್ಲಿ ಮಾರ್ಚಿನಿಂದ ಜೂನ್ವರೆಗೆ 8 ತಾಯಿ ಮರಣ ಹಾಗೂ ಫೆಬ್ರವರಿಯಿಂದ ಜೂನ್ವರೆಗೆ 52 ಶಿಶು ಮರಣ ಪ್ರಕರಣಗಳು ಆಗಿವೆ ಎಂದವರು ಅರಿವಿನ ಕೊರತೆ, ಸಮಯಕ್ಕೆ ಸರಿಯಾಗಿ ಸಿಗದ ಅರೋಗ್ಯ ವೈದ್ಯಕೀಯ ಸೇವೆ, ಕಡಿಮೆ ತೂಕ, ಅಪೌಷ್ಠಿಕತೆ, ಹೃದಯ ಸಂಬಂಧಿ ಸಮಸ್ಯೆ, ಅವಧಿಗೆ ಮುಂಚೆ ಹೆರಿಗೆ ಸೇರಿದಂತೆ ಮತ್ತಿತರ ಕಾರಣದಿಂದ ತಾಯಿ ಮತ್ತು ಶಿಶು ಮರಣಗಳು ಹೆಚ್ಚಾಗುವ ಸಾಧ್ಯತೆ ಇವೆ ಹೀಗಾಗದಂತೆ ಅಗತ್ಯ ಕ್ರಮ ವಹಿಸಬೇಕು ಎಂದರು.

ತಾಯಿ ಮಗು ಮರಣವು ಆಕಸ್ಮಿಕವಲ್ಲದೇ, ವೈದ್ಯರುಗಳ ನಿರ್ಲಕ್ಷö್ಯದಿಂದ ಉಂಟಾಗಿದ್ದರೆ ಅಂತಹವುಗಳಲ್ಲಿ ಪ್ರಾರಂಭದಿಂದ ಕೊನೆಯ ತನಕ ನೀಡಿರುವ ಚಿಕಿತ್ಸೆಯ ಬಗ್ಗೆ ತನಿಖೆ ಕೈಗೊಂಡು ಅಂತಹವರ ಮೇಲೆ ಕ್ರಮ ಕೈಗೊಳ್ಳಲಾಗುವುದು ಎಂದರು.

ಆರೋಗ್ಯ ಇಲಾಖೆ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಗರ್ಭಿಣಿ ಮಹಿಳೆಯರಿಗೆ ನೀಡುವ ಸರ್ಕಾರದ ಯೋಜನೆಗಳನ್ನು ತಲುಪಿಸುವ ಕಾರ್ಯವನ್ನು ಆಶಾ ಮತ್ತು ಅಂಗನವಾಡಿ ಕಾರ್ಯಕರ್ತರು ಮಾಡಬೇಕು, ಜೊತೆಗೆ ಅವರಿಗೆ ಉತ್ತಮ ಆರೋಗ್ಯವನ್ನು ಕಾಪಾಡಲು ಸಲಹೆ ನೀಡಬೇಕು ಎಂದರು.

ಮಕ್ಕಳಿಗೆ ನಿಗಧಿತ ಕಾಲಾವಧಿಯಲ್ಲಿ ಸಾಮಾನ್ಯ ಚುಚ್ಚುಮದ್ದು ನೀಡುವ ಕಾರ್ಯಕ್ರಮಗಳನ್ನು ತಪ್ಪದೇ ಅನುಷ್ಠಾನಗೊಳಿಸಬೇಕು ಎಂದು ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.

ಕೋವಿಡ್ ಲಸಿಕೆಯನ್ನು ಹೆಚ್ಚು ಕೋವಿಡ್ ಪ್ರಕರಣಗಳು ಕಂಡುಬರುತ್ತಿರುವ ಪ್ರದೇಶಗಳಲ್ಲಿನ ಜನರಿಗೆ, ಗರ್ಭಿಣಿ ಸ್ತ್ರೀಯರಿಗೆ, ಅಪೌಷ್ಠಿಕತೆ ಹೊಂದಿರುವವರಿಗೆ, ಎಂಡೋ ಸಲ್ಫಾನ್ ಪೀಡಿತರಿಗೆ ಆದ್ಯತೆ ಮೇಲೆ ನೀಡಬೇಕೆಂದು ಸೂಚನೆ ನೀಡಿದರು.

ಮಕ್ಕಳನ್ನು ಕೋವಿಡ್ 3ನೇ ಅಲೆಯಿಂದ ತಡೆಯುವ ನಿಟ್ಟಿನಲ್ಲಿ ಮಾನ್ಯ ಮುಖ್ಯಮಂತ್ರಿಗಳ ಮಹತ್ವಕಾಂಕ್ಷೆಯ ಕಾರ್ಯಕ್ರಮವಾದ ವಾತ್ಸಲ್ಯ ಯೋಜನೆಯಡಿ, ಮಕ್ಕಳ ಆರೋಗ್ಯ ತಪಾಸಣೆಯನ್ನು ಜಿಲ್ಲೆಯ ಪ್ರತಿಯೊಬ್ಬ ಮಕ್ಕಳಿಗೂ ಮಾಡುವ ಕಾರ್ಯವನ್ನು ಶೀಘ್ರದಲ್ಲಿ ಪೂರ್ಣಗೊಳಿಸಬೇಕು, ಶಿಕ್ಷಣ ಇಲಾಖೆ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದಿ ಇಲಾಖೆ ಅಗತ್ಯ ಸಹಕಾರ ನೀಡಬೇಕೆಂದು ಸೂಚನೆ ನೀಡಿದರು.

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ನವೀನ್ ಭಟ್ ಮಾತನಾಡಿ, ಗರ್ಭಿಣಿ ಸ್ತ್ರೀಯರನ್ನು ನಿಯಮಿತವಾಗಿ ಪರೀಕ್ಷೆ ಮಾಡುವಾಗ ಅವರಿಗೆ ರಕ್ತದೊತ್ತಡ, ಮಾನಸಿಕ ಒತ್ತಡ ಸೇರಿದಂತೆ ಮತ್ತಿತರ ಕಾಯಿಲೆಗಳು ಇರುವ ಬಗ್ಗೆ ತಪ್ಪದೇ ಪರಿಶೀಲಿಸಬೇಕು, ಒಂದೊಮ್ಮೆ ಇದ್ದಲ್ಲಿ ಅವರಿಗೆ ಪ್ರಾರಂಭಿಕ ಹಂತದಿಂದಲೇ ಚಿಕಿತ್ಸೆ ಹಾಗೂ ಸಮಾಲೋಚನೆಗಳನ್ನು ಕೈಗೊಳ್ಳುವುದರಿಂದ ಕೊನೆಯ ಹಂತದಲ್ಲಿ ಆರೋಗ್ಯ ತೊಂದರೆ ಉಂಟಾಗುವುದನ್ನು ತಡೆಯಲು ಸಾಧ್ಯವಾಗುತ್ತದೆ ಎಂದರು.

ವಾತ್ಸಲ್ಯ ಯೋಜನೆಯಡಿ ಮಕ್ಕಳ ತಪಾಸಣಾ ಕಾರ್ಯಕ್ರಮವು ಜಿಲ್ಲೆಯಲ್ಲಿ ಶೇ. 65.73 ರಷ್ಟು ಶಾಲೆಗಳು, 77.31 ರಷ್ಟು ಅಂಗನವಾಡಿಗಳಲ್ಲಿ ಆರೋಗ್ಯ ತಪಾಸಣೆಯನ್ನು ಕೈಗೊಳ್ಳಲಾಗಿದೆ ಎಂದ ಅವರು, ಪೋಷಕರುಗಳು ಮಕ್ಕಳನ್ನು ಆರೋಗ್ಯ ತಪಾಸಣೆಗೆ ತಪ್ಪದೇ ಕರೆ ತರಬೇಕೆಂದು ತಿಳಿಸಿದರು.

ಸಭೆಯಲ್ಲಿ ನಗರಸಭೆ ಅದ್ಯಕ್ಷೆ ಸುಮಿತ್ರಾ ನಾಯಕ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ನಾಗಭೂಷಣ ಉಡುಪ, ಜಿಲ್ಲಾ ಲಸಿಕೆ ಅಧಿಕಾರಿ ಡಾ. ಎಂ.ಜಿ.ರಾಮ, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ. ನಾಗರತ್ನ, ಉಡುಪಿ ತಾಲೂಕು ಆರೋಗ್ಯಾಧಿಕಾರಿ ಡಾ. ವಾಸುದೇವ ಉಪಾಧ್ಯಾಯ ಮತ್ತಿತರರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

13 − 9 =