ಶುದ್ಧಹಸ್ತದ ರಾಜಕಾರಣಿ ಹಾಲಾಡಿ ತಾರಾನಾಥ ಶೆಟ್ಟಿ

Call us

Call us

ಕುಂದಾಪ್ರ ಡಾಟ್ ಕಾಂ
ಕುಂದಾಪುರ: ಪ್ರತಿಷ್ಠಿತ ಸಿದ್ಧಾಪುರ ಜಿಲ್ಲಾ ಪಂಚಾಯತ್ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಹಾಲಾಡಿ ತಾರಾನಾಥ ಶೆಟ್ಟಿ ಕಣದಲ್ಲಿದ್ದಾರೆ. ರಾಜಕೀಯ, ಸಾಮಾಜಿಕ, ಧಾರ್ಮಿಕ ಹಾಗೂ ಶೈಕ್ಷಣಿಕ ರಂಗದಲ್ಲಿ ತೊಡಗಿಸಿಕೊಂಡಿರುವ ತಾರನಾಥ ಶೆಟ್ಟಿ ಅವರು ನಾಲ್ಕು ದಶಕಗಳ ರಾಜಕಾರಣದಲ್ಲಿ ತೊಡಗಿಸಿಕೊಂಡು ಸೋಲು-ಗೆಲುವನ್ನು ಸಮಾನವಾಗಿ ಸ್ವೀಕರಿಸಿ, ನಿರಂತರವಾಗಿ ಸಮಾಜಸೇವೆಯಲ್ಲಿ ತೊಡಗಿಸಿಕೊಂಡು ತಾರ, ತಾರಣ್ಣ ಎಂದೇ ಸಿದ್ಧಾಪುರ ಭಾಗದಲ್ಲಿ ಚಿರಪರಿಚಿತರಾಗಿದ್ದಾರೆ.

Call us

Call us

Visit Now

ಪಂಚಾಯತ್‌ರಾಜ ವ್ಯವಸ್ಥೆಯ ಬಗ್ಗೆ ಸಾಕಷ್ಟು ಅನುಭವವಿರುವ ಹಾಲಾಡಿ ತಾರಾನಾಥ  ಶೆಟ್ಟಿ ಅವರು ಹಾಲಾಡಿ ಗ್ರಾಮ ಪಂಚಾಯತ್ ಸದಸ್ಯರಾಗಿ, ಒಂದು ಅವಧಿಗೆ ಸಿದ್ಧಾಪುರ ಜಿಪಂ ಸದಸ್ಯರಾಗಿ, ಹಾಲಾಡಿ ಮರ್ಲಚಿಕ್ಕು ದೈವಸ್ಥಾನದ ಆಡಳಿತ ಮೊಕ್ತೇಸರರಾಗಿ, ಹಾಲಾಡಿ ಯಕ್ಷಗಾನ ಮೇಳದ ಸಂಚಾಲಕಾಗಿ ಎಲ್ಲಾ ಕ್ಷೇತ್ರದಲ್ಲಿಯೂ ತೊಡಗಿಸಿಕೊಂಡವರು.

Click here

Call us

Call us

ಬಿದ್ಕಲ್‌ಕಟ್ಟೆ ಮಂಡಲ ಪಂಚಾಯತ್ ಸದಸ್ಯರಾಗಿ, ಕೆಎಂಎಫ್ ಮಣಿಪಾಲದ ನಿರ್ದೇಶಕರಾಗಿ, ಕುಂದಾಪುರ ಭಂಡಾರ್‌ಕಾರ‍್ಸ್ ಕಾಲೇಜಿನ ವಿಧಾರ್ಥಿ ಸಂಘದ ಉಪಾಧ್ಯಕ್ಷರಾಗಿ, ಹಾಲಾಡಿ ಯುವಕ ಮಂಡಲದ ಅಧ್ಯಕ್ಷರಾಗಿ, ಹೊಸಂಗಡಿ ಪದವಿಪೂರ್ವ ಕಾಲೇಜಿನ ಅಭಿವೃದ್ಧಿ ಸಮಿತಿ ಸದಸ್ಯರಾಗಿ ಎಲ್ಲಾ ಕ್ಷೇತ್ರದಲ್ಲಿಯೂ ತೊಡಗಿಸಿಕೊಂಡವರು.

Leave a Reply

Your email address will not be published. Required fields are marked *

8 + 2 =