ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ರಾಮ್ಸನ್ ಸರ್ಕಾರಿ ಪ್ರೌಢಶಾಲೆ ಕಂಡ್ಲೂರು ಹಾಗೂ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಜಿಲ್ಲಾ ಪಂಚಾಯತ್ ಉಡುಪಿ ಇವರ ಸಹಯೋಗದೊಂದಿಗೆ ರಾಮ್ಸನ್ ಸರ್ಕಾರಿ ಪ್ರೌಢಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಶುದ್ಧ ಕುಡಿಯುವ ನೀರು ಮತ್ತು ಸ್ವಚ್ಚತೆಯ ಅರಿವು ಕಾರ್ಯಕ್ರಮ ನಡೆಯಿತು.
ಪ್ರಭಾರ ಮುಖ್ಯೋಪಾಧ್ಯಾಯರಾದ ನಾಗಮ್ಮ ನಾಯಕ್ ಅಧ್ಯಕ್ಷತೆ ವಹಿಸಿದ್ದರು . ಸಂಪನ್ಮೂಲ ವ್ಯಕ್ತಿಗಳಾಗಿ ದಿವಾಕರ್ ಮಾಹಿತಿ ಶಿಕ್ಷಣ ಮತ್ತು ಸಂವಹನ ವಿಭಾಗ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಜಿಲ್ಲಾ ಪಂಚಾಯತ್ ಉಡುಪಿ ಇವರು ವಿದ್ಯಾರ್ಥಿಗಳಿಗೆ ಜಲವೆಂದರೆ ಬರೀ ನೀರಲ್ಲ ಅದು ಪಾವನ ತೀರ್ಥ ಜೀವಜಲದ ಮಹತ್ವತಿಳಿಸಿ ನೀರು ಕಲುಷಿತಗೊಳ್ಳುವ ಕುರಿತು ಸವಿಸ್ತಾರ ಮಾಹಿತಿನೀಡಿ ಕಿರು ಚಿತ್ರ ಪ್ರದರ್ಶನದ ಮೂಲಕ ಅರಿವು ಮೂಡಿಸಿದರು .
ಮುಖ್ಯ ಅತಿಥಿಗಳಾಗಿ ರಜನಿ ಎಸ್ ಹೆಗಡೆ ಹಿರಿಯ ಸಹ ಶಿಕ್ಷಕರು ಅಜಯ್ ಕುಮಾರ್ ಶೆಟ್ಟಿ ಸಹ ಶಿಕ್ಷಕರು ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು . ಕಾರ್ಯಕ್ರಮದಲ್ಲಿ ಎಲ್ಲಾ ಶಿಕ್ಷಕರು ವಿದ್ಯಾರ್ಥಿಗಳು ಭಾಗವಹಿಸಿದ್ದರು.