ಶೇಡಿಮನೆ: ಕಿರುಕುಳಕ್ಕೆ ಹೆದರಿ ಯುವತಿ ಆತ್ಮಹತ್ಯೆಗೆ ಯತ್ನ, ಆಸ್ಪತ್ರೆಗೆ ದಾಖಲು

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಯುವಕರ ನೀಡುತ್ತಿದ್ದ ಕಿರುಕುಳದಿಂದ ಬೇಸತ್ತ ಯುವತಿಯೋರ್ವಳು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದ್ದು, ಗಂಭೀರ ಸ್ಥಿತಿಯಲ್ಲಿರುವ ಆಕೆ ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ.

Call us

Call us

ಎಸೆಸೆಲ್ಸಿ ಓದಿನ ಬಳಿ ಹೆಬ್ರಿಯಲ್ಲಿ ಹೊಲಿಗೆ ತರಬೇತಿಗೆ ಹೋಗುತ್ತಿದ್ದ ಯುವತಿಗೆ ಮೊಬೈಲ್ ಕರೆಯಲ್ಲಿ ಹಾಗೂ ಎದುರಿನಲ್ಲಿ ಸಿಕ್ಕಾಗ ಕಳೆದ ಮೂರು ತಿಂಗಳಿನಿಂದ ಈ ಮೂವರು ಯುವಕರು ಅಸಭ್ಯವಾಗಿ ವರ್ತಿಸುತ್ತಿದ್ದರು. ಆಕೆಯನ್ನು ತಾವು ಹೇಳಿದ ಸ್ಥಳಕ್ಕೆ ಬರುವಂತೆ ಒತ್ತಾಯಿಸಿ ಬೆದರಿಕೆ ಹಾಕಿದ್ದರು ಎನ್ನುವ ಎಂದು ಯುವತಿ ಆರೋಪಿಸಿದ್ದಾಳೆ.

ಈ ಬಗ್ಗೆ ಶೇಡಿಮನೆಯ ಪ್ರಸಾದ್ ಹೆಗ್ಡೆ, ಪ್ರಶಾಂತ್ ಹೆಗ್ಡೆ ಮತ್ತು ವಿನಯ ಶೆಟ್ಟಿ ವಿರುದ್ಧ ಪೋಕೊÕà ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಯುವಕರ ಬೆದರಿಕೆಯಿಂದ ಹೆದರಿದ ಯುವತಿ ಅದೇ ದಿನ ಮನೆಯಲ್ಲಿ ವಿಷ ಪದಾರ್ಥ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಳು. ಅಸ್ವಸ್ಥಗೊಂಡ ಯುವತಿಯನ್ನು ಮನೆಯವರು ಮಣಿಪಾಲ ಆಸ್ಪತ್ರೆಗೆ ದಾಖಲಿಸಿದ್ದು, ಗಂಭೀರ ಸ್ಥಿತಿಯಲ್ಲಿರುವ ಆಕೆಗೆ ಚಿಕಿತ್ಸೆ ಮುಂದುವರಿದಿದೆ.

Call us

Call us

ಆಸ್ಪತ್ರೆಗೆ ತೆರಳಿರುವ ಅಮಾಸೆಬೈಲು ಪೊಲೀಸರು ಯುವತಿಯಿಂದ ಹೇಳಿಕೆ ಪಡೆದುಕೊಂಡು ಮೂವರ ವಿರುದ್ಧ ಪೋಕೊÕ ಕಾಯಿದೆಯಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಪ್ರಕರಣದ ಆರೋಪಿಗಳನ್ನು ಬಂಧಿಸಲು ಎರಡು ವಿಶೇಷ ತಂಡಗಳನ್ನು ರಚಿಸಲಾಗಿದೆ. ಶೀಘ್ರವೇ ಆರೋಪಿಗಳನ್ನು ಬಂಧಿಸಲಾಗುವುದು ಎಂದು ಎಸ್ಪಿ ಕೆ.ಟಿ. ಬಾಲಕೃಷ್ಣ ತಿಳಿಸಿದ್ದಾರೆ.

One thought on “ಶೇಡಿಮನೆ: ಕಿರುಕುಳಕ್ಕೆ ಹೆದರಿ ಯುವತಿ ಆತ್ಮಹತ್ಯೆಗೆ ಯತ್ನ, ಆಸ್ಪತ್ರೆಗೆ ದಾಖಲು

Leave a Reply

Your email address will not be published. Required fields are marked *

three + 1 =