ಶ್ರೀರಾಮ್ ಸೌಹಾರ್ದ ಕ್ರೆಡಿಟ್ ಕೋ-ಅಪರೇಟಿವ್: ದಿ. ಜಿ.ಎಸ್.ಆಚಾರ್ ಭಾವಚಿತ್ರ ಅನಾವರಣ

Call us

ಬೈಂದೂರು: ಶ್ರೀರಾಮ್ ಸೌಹಾರ್ದ ಕ್ರೆಡಿಟ್ ಕೋ-ಅಪರೇಟಿವ್ ನಿಯಮಿತ ಬೈಂದೂರು ಇದರ ನೂತನ ನಾಗೂರು ಶಾಖೆಯ ಉದ್ಘಾಟನಾ ಸಮಾರಂಭದ ಪ್ರಯುಕ್ತ ಸಹಕಾರಿ ಧುರೀಣ, ಬೈಂದೂರು ಕ್ಷೇತ್ರದ ಮಾಜಿ ಶಾಸಕ ದಿ. ಜಿ.ಎಸ್.ಆಚಾರ್ ಅವರ ಭಾವಚಿತ್ರ ಅನಾವರಣಗೊಳಿಸಲಾಯಿತು.

ರಾಜ್ಯಸಭಾ ಸದಸ್ಯ, ಮಾಜಿ ಕೇಂದ್ರ ಸಚಿವ ಆಸ್ಕರ್ ಫೆನಾಂಡೀಸ್ ಭಾವಚಿತ್ರ ಅನಾವರಣಗೊಳಿಸಿ ಮಾತನಾಡಿ, ಸಹಕಾರಿ ಕ್ಷೇತ್ರ ಮುನ್ನೆಡೆಯಲು ಭದ್ರ ಬುನಾದಿ ಹಾಕಿದ ಜಿ.ಎಸ್ ಆಚಾರ್ ಅವರನ್ನು ನೆನಪಿಸಿಕೊಳ್ಳುವುದು ಬಹಳ ಮುಖ್ಯ. ಅವರು ಸಹಕಾರಿ ಕ್ಷೇತ್ರಕ್ಕೆ ನೀಡಿದ ಕೊಡುಗೆ ಮರೆಯುವಂತಿಲ್ಲ. ತನ್ನ ಸಹಕಾರಿ ಸಂಸ್ಥೆಯಲ್ಲಿ ಅವರ ನೆನಪು ಚಿರಸ್ಥಾಯಿಯಾಗುವಲ್ಲಿ ಅವರ ಭಾವಚಿತ್ರವನ್ನು ಅನಾವರಣಗೊಳಿಸಿದ್ದಕ್ಕಾಗಿ ಸಂಸ್ಥೆಯ ಅಧ್ಯಕ್ಷ ಎಸ್. ರಾಜು ಪೂಜಾರಿ ಅಭಿನಂದನಾರ್ಹರು ಎಂದರು.

Call us

ಈ ಸಂದರ್ಭದಲ್ಲಿ ದ.ಕ.ಜಿಲ್ಲಾ ಕೇಂದ್ರ ಬ್ಯಾಂಕ್ ನಿರ್ದೇಶಕ ಬಿ. ರಘುರಾಮ ಶೆಟ್ಟಿ, ರಾಜ್ಯ ಕಾಂಗ್ರೆಸ್‌ನ ಕಾರ್ಯದರ್ಶಿ ಎಂ.ಎ ಗಫೂರ್, ತಾಪಂ ಮಾಜಿ ಸದಸ್ಯ ಹೆಚ್. ವಿಜಯ ಶೆಟ್ಟಿ, ಬೈಂದೂರು-ಉಪ್ಪುಂದ ಲಯನ್ಸ್ ಕ್ಲಬ್ ಅಧ್ಯಕ್ಷ ಜಿ. ಗೋಕುಲ್ ಶೆಟ್ಟಿ, ಕಿರಿಮಂಜೇಶ್ವರ ಗ್ರಾಪಂ ಮಾಜಿ ಅಧ್ಯಕ್ಷ ಈಶ್ವರ ದೇವಾಡಿಗ, ಸುಬ್ಬಣ್ಣ ಶೆಟ್ಟಿ, ನಾರಾಯಣ ಪೂಜಾರಿ, ಆನಂದ ಪೂಜಾರಿ ಮೊದಲಾದವರು ಉಪಸ್ಥಿತರಿದ್ದರು. ಇದೇ ಸಂದರ್ಭದಲ್ಲಿ ಜಿಲ್ಲಾ ಪರಿಷತ್ ಮಾಜಿ ಸದಸ್ಯ ದಿ. ರಾಮ ಪೂಜಾರಿ ಅವರ ಭಾವಚಿತ್ರವನ್ನು ಸಹ ಅನಾವರಣಗೊಳಿಸಲಾಯಿತು.

ಶ್ರೀರಾಮ್ ಸೌಹಾರ್ದದ ಅಧ್ಯಕ್ಷ ಎಸ್. ರಾಜು ಪೂಜಾರಿ ಸ್ವಾಗತಿಸಿದರು. ಸಂಸ್ಥೆಯ ಉಪಾಧ್ಯಕ್ಷ ಎಂ.ವಿನಾಯಕ ರಾವ್, ಸಹಕಾರಿಯ ಮುಖ್ಯಕಾರ್ಯನಿರ್ವಹಣಾಧಿಕಾರಿ ನಾಗರಾಜ ಯಡ್ತರೆ ಶಾಖಾ ವ್ಯವಸ್ಥಾಪಕ ರಾಜೇಂದ್ರ ದೇವಾಡಿಗ, ದ.ಕ. ಜಿಲ್ಲಾ ಸಹಕಾರಿ ಬ್ಯಾಂಕಿನ ಮೇಲ್ವಿಚಾರಕ ಶಿವರಾಮ ಯಡ್ತರೆ ಅತಿಥಿಗಳನ್ನು ಬರಮಾಡಿಕೊಂಡರು. ಸುಬ್ರಹ್ಮಣ್ಯ ಪಡುಕೋಣೆ ಕಾರ್ಯಕ್ರಮ ನಿರೂಪಿಸಿದರು.

Leave a Reply

Your email address will not be published. Required fields are marked *

seventeen − three =