ಶ್ರೀ ರಾಮ ಸೌಹಾರ್ದ ಕ್ರೆಡಿಟ್ ಕೋ-ಆಪರೇಟಿವ್: ಬೈಂದೂರು ಆಸ್ಪತ್ರೆ ಸಿಬ್ಬಂದಿಗಳಿಗೆ ಕಿಟ್ ವಿತರಣೆ

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: ಇಲ್ಲಿನ ಶ್ರೀ ರಾಮ ಸೌಹಾರ್ದ ಕ್ರೆಡಿಟ್ ಕೋ-ಆಪರೇಟಿವ್ ವತಿಯಿಂದ ಬೈಂದೂರು ಸಮುದಾಯ ಆರೋಗ್ಯ ಕೇಂದ್ರದ ನರ್ಸ್‌ಗಳು ಹಾಗೂ ವಿವಿಧ ದರ್ಜೆ ನೌಕರರಿಗೆ ಸಂಸ್ಥೆಯ ಅಧ್ಯಕ್ಷ ಎಸ್. ರಾಜು ಪೂಜಾರಿ ಅವರು ಶುಕ್ರವಾರ ಆಹಾರ ಸಾಮಾಗ್ರಿಗಳ ಕಿಟ್ ವಿತರಿಸಿದರು.

Call us

Call us

Visit Now

ಈ ಸಂದರ್ಭ ಅವರು ಮಾತನಾಡಿ ಕೋರೋನಾದಂತಹ ಮಾರಕ ಖಾಯಿಲೆಯನ್ನು ತಡೆಗಟ್ಟುವಲ್ಲಿ ಆರೋಗ್ಯ ಸಿಬ್ಬಂದಿಗಳ ಶ್ರಮ ದೊಡ್ಡದಿದೆ. ಸರಕಾರದೊಂದಿಗೆ ಅವಿರತವಾಗಿ ಸೇವೆಯಲ್ಲಿ ತೊಡಗಿಕೊಂಡು ಜನರನ್ನು ಸುರಕ್ಷಿತವಾಗಿಡುವಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡಿದ್ದಾರೆ ಎಂದರು.

Click here

Call us

Call us

ಈ ಸಂದರ್ಭ ಬೈಂದೂರು ಸಮುದಾಯ ಆರೋಗ್ಯ ಕೇಂದ್ರ ವೈದ್ಯಾಧಿಕಾರಿ ಡಾ. ಪ್ರೇಮಾನಂದ, ಶ್ರೀ ರಾಮ ಸೌಹಾರ್ದ ಕ್ರೆಡಿಟ್ ಕೋ-ಆಪರೇಟಿವ್‌ನ ಉಪಾಧ್ಯಕ್ಷ ಎಂ. ವಿನಾಯಕ ರಾವ್, ನಿರ್ದೇಶಕ ರಾಮಕೃಷ್ಣ ಖಾರ್ವಿ, ಕಾರ್ಯನಿರ್ವಹಣಾಧಿಕಾರಿ ಸೀತಾರಾಮ ಮಡಿವಾಳ, ಶಾಖಾ ಪ್ರಬಂಧಕ ನಾಗರಾಜ ಪಿ. ಯಡ್ತರೆ, ಎಸ್‌ಸಿಡಿಸಿಸಿ ಬ್ಯಾಂಕ್ ಮೇಲ್ವಿಚಾರಕ ಶಿವರಾಮ ಪೂಜಾರಿ ಯಡ್ತರೆ ಹಾಗೂ ಆಸ್ಪತ್ರೆಯ ವಿವಿಧ ವಿಭಾಗದ ವೈದ್ಯರು ಉಪಸ್ಥಿತರಿದ್ದರು. ಸುಧಾಕರ ಪಿ. ಕಾರ್ಯಕ್ರಮ ನಿರೂಪಿಸಿದರು. 

Leave a Reply

Your email address will not be published. Required fields are marked *

nineteen + seventeen =