ಕುಂದಾಪ್ರ ಡಾಟ್ ಕಾಂ ಸುದ್ದಿ
ಗಂಗೊಳ್ಳಿ : ಇಲ್ಲಿನ ಪೇಟೆ ಶ್ರೀ ವಿಠಲ ರಕುಮಾಯಿ ತಥಾ ಮುಖ್ಯಪ್ರಾಣ ದೇವಸ್ಥಾನದಲ್ಲಿ ಶ್ರೀ ಹನುಮ ಜಯಂತಿ ಕಾರ್ಯಕ್ರಮ ವಿವಿಧ ಧಾರ್ಮಿಕ ಆಚರಣೆಗಳೊಂದಿಗೆ ವಿಜೃಂಭಣೆಯಿಂದ ಜರಗಿತು.
ದೇವಸ್ಥಾನದಲ್ಲಿ ಶ್ರೀ ಮುಖ್ಯಪ್ರಾಣ ದೇವರಿಗೆ ವಿಶೇಷ ಅಭಿಷೇಕ, ಪವಮಾನ ಅಭಿಷೇಕ, ರುದ್ರಾಭಿಷೇಕ ಸಹಿತ ವಿವಿಧ ಪೂಜೆಗಳನ್ನು ಸಲ್ಲಿಸಲಾಯಿತು. ಸಾವಿರಾರು ಮಂದಿ ಭಕ್ತರು ದೇವಳಕ್ಕೆ ಆಗಮಿಸಿ ದೇವರ ದರ್ಶನ ಪಡೆದು ಪ್ರಸಾದ ಸ್ವೀಕರಿಸಿದರು. ಜರಗಿದವು. ಹನುಮಜ್ಜಯಂತಿ ಪ್ರಯುಕ್ತ ರಾತ್ರಿ ಗಂಗೊಳ್ಳಿ ಬೀದಿಯಲ್ಲಿ ಶ್ರೀದೇವರ ಪಲ್ಲಕಿ ಉತ್ಸವ, ವಸಂತ ಪೂಜೆ ಮೊದಲಾದ ಧಾರ್ಮಿಕ ಕಾರ್ಯಕ್ರಮಗಳು ಜರಗಿತು ದೇವಳದ ಪ್ರಧಾನ ಅರ್ಚಕ ಜಿ.ಮೋಹನದಾಸ ಭಟ್ ನೇತೃತ್ವದಲ್ಲಿ ವಿವಿಧ ಧಾರ್ಮಿಕ ಅನುಷ್ಠಾನಗಳು ಸಂಪನ್ನಗೊಂಡಿತು.