ಶ್ರೀ ವೆಂಕಟರಮಣ ಪದವಿಪೂರ್ವ ಕಾಲೇಜುಳ ತಾಲೂಕು ಮಟ್ಟದ ತ್ರೋಬಾಲ್ ಪಂದ್ಯಾಟ

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಶ್ರೀ ವೆಂಕಟರಮಣ ಪದವಿಪೂರ್ವ ಕಾಲೇಜು ಮತ್ತು ಪದವಿಪೂರ್ವ ಶಿಕ್ಷಣ ಇಲಾಖೆ, ಉಡುಪಿ ಜಿಲ್ಲೆ ಇವರ ಜಂಟಿ ಆಶ್ರಯದಲ್ಲಿ ಪದವಿಪೂರ್ವ ಕಾಲೇಜುಗಳ ಕುಂದಾಪುರ ತಾಲೂಕು ಮಟ್ಟದ ಬಾಲಕ ಹಾಗೂ ಬಾಲಕಿಯರ ತ್ರೋಬಾಲ್ ಪಂದ್ಯಾಟ ಶ್ರೀ ವೆಂಕಟರಮಣ ಪದವಿಪೂರ್ವ ಕಾಲೇಜಿನ ಆಟದ ಮೈದಾನದಲ್ಲಿ ನಡೆಯಿತು.

Call us

Call us

ಪಂದ್ಯಾಟಗಳನ್ನು ದೀಪ ಪ್ರಜ್ವಲನೆಯ ಮೂಲಕ ಉದ್ಘಾಟಿಸಿದ ವಸಂತ ಬಂಗೇರ ವಿದ್ಯಾರ್ಥಿಗಳು ಶಾಲಾ ಜೀವನದಲ್ಲೇ ನಿರಂತರ ಅಭ್ಯಾಸ ಮಾಡಿದಲ್ಲಿ ಉತ್ತಮ ಸಾಧನೆ ಮಾಡಲು ಸಾಧ್ಯ ಎಂದರು.

ವೆಂಕಟರಮಣ ದೇವ ಶೈಕ್ಷಣಿಕ ಮತ್ತು ಸಾಂಸ್ಕೃತಿಕ ಟ್ರಸ್ಟಿನ ಕಾರ್ಯದರ್ಶಿ ಕೆ. ರಾಧಾಕೃಷ್ಣ ಶೆಣೈ ಕ್ರೀಡಾ ಚಟುವಟಿಕೆಗಳಿಗೆ ಆಡಳಿತ ಮಂಡಳಿ ಪೂರಕವಾಗಿ ಸ್ಪಂದಿಸುತ್ತದೆ ಮತ್ತು ವಿದ್ಯಾರ್ಥಿಗಳಿಗಾಗಿ ಉತ್ತಮ ಕ್ರೀಡಾಂಗಣ ಸಧ್ಯದಲ್ಲೆ ಸಜ್ಜುಗೊಳ್ಳಲಿದೆ ಎಂದರು. ಅತಿಥಿಗಳಾಗಿ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಪದವಿಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕರಾದ ಆರ್. ಬಿ. ನಾಯಕ್ ಕ್ರೀಡಾಳುಗಳನ್ನು ಪ್ರೋತ್ಸಾಹಿಸುತ್ತಾ ಪಂದ್ಯಾಟ ಯಶಸ್ವಿಯಾಗಲೆಂದು ಶುಭ ಹಾರೈಸಿದರು. ಪದವಿಪೂರ್ವ ಶಿಕ್ಷಣ ಇಲಾಖೆಯ ಕ್ರೀಡಾ ಸಂಯೋಜಕ ಶ್ರೀಧರ ಶೆಟ್ಟಿ, ವಲಯ ಸಂಯೋಜಕ ನಾಗರಾಜ ಶೆಟ್ಟಿ ಮತ್ತು ಶ್ರೀ ವೆಂಕಟರಮಣ ಆಂಗ್ಲಮಾಧ್ಯಮ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯಿನಿ ಜಯಶೀಲಾ ನಾಯಕ್ ಉಪಸ್ಥಿತರಿದ್ದ ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲ ನಾಗೇಶ್ ಶ್ಯಾನುಭಾಗ್ ಸ್ವಾಗತಿಸಿದರು ಮತ್ತು ಶ್ರೀ ವೆಂಕಟರಮಣ ಆಂಗ್ಲಮಾಧ್ಯಮ ಪ್ರೌಢಶಾಲೆಯ ಪ್ರಾಂಶುಪಾಲೆ ರೂಪಾ ಶೆಣೈ ಧನ್ಯವಾದ ಸಮರ್ಪಿಸಿದರು.

Call us

Call us

Leave a Reply

Your email address will not be published. Required fields are marked *

2 × four =