ಸಂಶೋಧಕ ಬಿ. ಶ್ರೀಕಾಂತ್ ಪೈಗೆ ಸಚಿವರಿಂದ ಅಭಿನಂದನೆ

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಗಂಗೊಳ್ಳಿ
: ಬ್ಲ್ಯಾಕ್ ಫಂಗಸ್‌ಗೆ ಔಷಧಿಯನ್ನು ಸಂಶೋಧಿಸಿ ಸಮಾಜಕ್ಕೆ ಸಮರ್ಪಿಸಿದ ಗಂಗೊಳ್ಳಿ ಮೂಲದ ಸಂಶೋಧಕ ಬಿ.ಶ್ರೀಕಾಂತ ಪೈ ಮುಂಬೈ ಅವರು ರಾಜ್ಯದ ಹಿಂದುಳಿದ ವರ್ಗಗಳ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರನ್ನು ಕೋಟದಲ್ಲಿರುವ ಅವರ ಗೃಹ ಕಛೇರಿಯಲ್ಲಿ ಭೇಟಿ ಮಾಡಿದರು.

Call us

Call us

ಬ್ಲ್ಯಾಕ್ ಫಂಗಸ್ ಔಷಧ ಸಂಶೋಧನೆ ಬಗ್ಗೆ ಮಾಹಿತಿ ಪಡೆದುಕೊಂಡ ಸಚಿವರು, ಬಿ. ಶ್ರೀಕಾಂತ ಪೈ ಅವರನ್ನು ಅಭಿನಂದಿಸಿ ಗೌರವಿಸಿದರು. ಸರಕಾರದಿಂದ ಏನಾದರು ನೆರವು ಬೇಕಾದಲ್ಲಿ ಅದನ್ನು ಒದಗಿಸಿಕೊಡುವ ಭರವಸೆ ನೀಡಿ ಶುಭ ಹಾರೈಸಿದರು. ಪತ್ರಕರ್ತ ಬಿ.ರಾಘವೇಂದ್ರ ಪೈ, ಸಚಿವ ಆಪ್ತ ಸಹಾಯಕ ಹರೀಶ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.

Call us

Call us

Leave a Reply

Your email address will not be published. Required fields are marked *

20 − twelve =