ಸಕಾಲ ಯೋಜನೆಯನ್ನು ಪರಿಣಾಮಕಾರಿಯಾಗಿ ಅನುಷ್ಟಾನಗೊಳಿಸಿ: ಸಚಿವ ಎಸ್. ಸುರೇಶ್ ಕುಮಾರ್

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಉಡುಪಿ: ಸಾರ್ವಜನಿಕರಿಗೆ ನಿಗದಿತ ಕಾಲವಧಿಯೊಳಗೆ ಸೇವೆಯನ್ನು ಒದಗಿಸುವ ಉದ್ದೇಶದಿಂದ ಸಕಾಲ ಯೋಜನೆ ಜಾರಿಗೆ ತರಲಾಗಿದೆ. ಇದನ್ನು ಪರಿಣಾಮಕಾರಿಯಾಗಿ ಅನುಷ್ಟಾನಗೊಳಿಸಬೇಕು ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವ ಎಸ್ ಸುರೇಶ್ ಕುಮಾರ್ ಹೇಳಿದರು.

Click Here

Call us

Call us

ಸಕಾಲ ಸಪ್ತಾಹ ಕಾರ್ಯಕ್ರಮವನ್ನು ವೀಡಿಯೋ ಕಾನ್ಪ್ರೆಸ್ಸ್ ಮೂಲಕ ಉದ್ಘಾಟಿಸಿ, ರಾಜ್ಯದ ಎಲ್ಲಾ ಇಲಾಖಾ ಕಾರ್ಯದರ್ಶಿಗಳು ಹಾಗೂ ಜಿಲ್ಲಾಧಿಕಾರಿಗಳೊಂದಿಗೆ ಮಾತನಾಡಿದರು.

Click here

Click Here

Call us

Visit Now

ಜನಸಾಮಾನ್ಯರಿಗೆ ನಿಗದಿತ ಕಾಲಮಿತಿಯೊಳಗೆ ಸರ್ಕಾರದ ಸೇವೆಗಳನ್ನು ಒದಗಿಸಬೇಕೆಂಬ ಉದ್ದೇಶದಿಂದ ಸಕಾಲ ಯೋಜನೆಯನ್ನು ಜಾರಿಗೆ ತರಲಾಗಿದೆ ಎಂದ ಅವರು ಪ್ರಾರಂಭದಲ್ಲಿ ಸಕಾಲ ಯೋಜನೆಯಡಿ 151 ಸೇವೆಗಳನ್ನು ವಿವಿಧ ಇಲಾಖೆಗಳ ಮೂಲಕ ಸಾರ್ವಜನಿಕರಿಗೆ ಒದಗಿಸಲಾಗುತ್ತಿದ್ದು, ಪ್ರಸ್ತುತ 98 ಇಲಾಖೆಗಳಲ್ಲಿ 1025 ಕ್ಕೂ ಹೆಚ್ಚು ಸೇವೆಗಳನ್ನು ಒದಗಿಸಲಾಗುತ್ತಿದೆ ಎಂದರು.

ಕೋವಿಡ್ ಸಾಂಕ್ರಾಮಿಕ ರೋಗದಿಂದಾಗಿ ಸಕಾಲದ ಕಾರ್ಯಕ್ಕೆ ಸ್ವಲ್ಪ ಹಿನ್ನೆಡೆಯಾಗಿದ್ದು, ಮತ್ತೆ ಅದನ್ನು ಚುರುಕುಗೊಳಿಸುವ ಉದ್ದೇಶದಿಂದ ಸಪ್ತಾಹ ಕಾರ್ಯಕ್ರಮವನ್ನು ನವೆಂಬರ್ 30 ರಿಂದ ಡಿಸೆಂಬರ್ 5 ರ ವರೆಗೆ ನಗರಾಭಿವೃದ್ಧಿ, ಕಂದಾಯ, ಸಾರಿಗೆ, ನಾಗರೀಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಗಳಲ್ಲಿ ನಡೆಸಲಾಗುತ್ತಿದೆ ಎಂದರು.

ಇಲಾಖೆಗಳಲ್ಲಿ ಅರ್ಜಿಗಳನ್ನು ಸ್ವೀಕರಿಸುವಾಗ ಸಕಾಲದ ಅಡಿಯಲ್ಲಿ ಅರ್ಜಿಗಳನ್ನು ಪಡೆದು, ಅರ್ಜಿಗಳನ್ನು ನಿಗದಿತಕಾಲವಾದಿಗಳಲ್ಲಿ ವಿಲೇವಾರಿ ಮಾಡಬೇಕು. ಸಣ್ಣಪುಟ್ಟ ಕಾರಣಗಳನ್ನು ನೀಡಿ ಅರ್ಜಿ ತಿರಸ್ಕರಿಸುವುದನ್ನು ಮಾಡಬಾರದು. ಬಾಕಿ ಉಳಿದ ಅರ್ಜಿಗಳನ್ನು ಶೀಘ್ರದಲ್ಲಿಯೇ ವಿಲೇವಾರಿ ಮಾಡಬೇಕು ಎಂದರು.

Call us

ಜನಸಾಮಾನ್ಯರು ನಿಗದಿತ ಕಾಲಮಿತಿಯೊಳಗೆ ಸೇವೆಯನ್ನು ಪಡೆಯಬೇಕು ಎಂಬ ಉದ್ದೇಶದಿಂದ ಸಕಾಲ ಯೋಜನೆ ಜಾರಿಗೆ ತರಲಾಗಿದೆ. ಇಲ್ಲಿಯವರೆಗೆ 22,88,81,652 ಅರ್ಜಿಗಳು ಸಲ್ಲಿಸಿದ್ದು ಅವುಗಳಲ್ಲಿ 22,82,55,866 ಅರ್ಜಿಗಳು ಇತ್ಯರ್ಥ ಪಡಿಸಲಾಗಿದೆ ಎಂದರು.

ಪ್ರಸ್ತುತ ಮಾಹೆಯಲ್ಲಿ ಕೋವಿಡ್ ಅರ್ಜಿಗಳ ವಿಲೇವಾರಿಯಲ್ಲಿ ಮಂಡ್ಯ ಜಿಲ್ಲೆ ಪ್ರಥಮ ಸ್ಥಾನ, ಚಿಕ್ಕಮಗಳೂರು ದ್ವಿತೀಯ ಸ್ಥಾನ ಪಡೆದರೆ, ಚಿಕ್ಕಬಳ್ಳಾಪುರ ತೃತೀಯ ಸ್ಥಾನದಲ್ಲಿದೆ. ಕ್ರಮವಾಗಿ ರಾಯಚೂರು, ಬೆಂಗಳೂರು ಕೊನೆಯ ಸ್ಥಾನದಲ್ಲಿದೆ ಎಂದ ಅವರು ಬೆಂಗಳೂರು ಹಾಗೂ ಬೆಳಗಾವಿ ಜಿಲ್ಲೆಯಲ್ಲಿ ಅತೀ ಹೆಚ್ಚು ಅರ್ಜಿಗಳು ಬಂದಿವೆ ಎಂದರು.

ಸಕಾಲ ಯೋಜನೆಯ ಪರಿಣಾಮಕಾರಿಯಾಗಿ ಅನುಷ್ಠಾನಕ್ಕೆ ಇಲಾಖೆಯ ಕರ‍್ಯದರ್ಶಿಗಳು, ಜಿಲ್ಲಾಧಿಕಾರಿಗಳು ಕೈಜೋಡಿಸಬೇಕು ಎಂದ ಅವರು ಸಕಾಲ ಯೋಜನೆಯ ಬಗ್ಗೆ ಇಲಾಖೆಗಳು ಕೈಗೊಳ್ಳುವ ಕರ‍್ಯಗಳ ಮೇಲುಸ್ತುವಾರಿ ತಪ್ಪದೆ ಮಾಡಬೇಕು ಎಂದರು.

ಪ್ರತಿಯೊಂದು ಇಲಾಖೆಯು ತಮ್ಮ ಕಚೇರಿಯಲ್ಲಿ ಸಕಾಲ ಸೇವೆಗಳ ಮಾಹಿತಿಯ ಬೋರ್ಡನ್ನು ಪ್ರದರ್ಶಿಸಬೇಕು ಎಂದ ಜನಸಾಮಾನ್ಯರಿಂದ ಸಕಾಲ ಸೇವೆಗಳ ಬಗ್ಗೆ ಅನಿಸಿಕೆಗಳನ್ನು ಪಡೆಯಬೇಕು ಎಂದರು.

ಸರ್ಕಾರದ ಮುಖ್ಯ ಕರ‍್ಯದರ್ಶಿ ವಿಜಯ್ ಭಾಸ್ಕರ್ ಮಾತನಾಡಿ, ಸಕಾಲದ ಯೋಜನೆಯ ಬಗ್ಗೆ ಜನಜಾಗೃತಿ ಮೂಡಿಸಿ ಹೆಚ್ಚು ಜನರು ತಮ್ಮ ಸೇವೆಗಳನ್ನು ಪಡೆಯುವ ಹಾಗೆ ಅಧಿಕಾರಿಗಳು ಕರ‍್ಯ ಪ್ರವೃತರಾಗಬೇಕು ಎಂದರು.

ಸಭೆಯಲ್ಲಿ ಅಪರ ಮುಖ್ಯ ಕಾರ್ಯದರ್ಶಿ ರಾಜೀವ್ ಚಾವ್ಲಾ, ಸಕಾಲ ಯೋಜನೆಯ ಹೆಚ್ಚುವರಿ ಮಿಷನ್ ನಿರ್ದೇಶಕಿ ಡಾ. ಬಿ.ಆರ್ ಮಮತಾ, ಜಿಲ್ಲಾಧಿಕಾರಿ ಜಿ. ಜಗದೀಶ್, ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು, ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಕಿರಣ್ ಫಡ್ನೇಕರ್ ಮತ್ತಿತರರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

eight + 16 =