ಸಖಿ ಕೇಂದ್ರದಲ್ಲಿ ನೊಂದ ಮಹಿಳೆಯರಿಗೆ ನೆರವು ದೊರೆಯುವಂತೆ ಕ್ರಮ ವಹಿಸಿ: ಜಿಲ್ಲಾಧಿಕಾರಿ ಜಿ. ಜಗದೀಶ್

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಉಡುಪಿ: ದೌರ್ಜನ್ಯಕ್ಕೆ ಒಳಗಾಗುವ ಮಹಿಳೆಯರಿಗೆ ಸಖಿ ಒನ್ ಸ್ಟಾಪ್ ಕೇಂದ್ರದಲ್ಲಿ ದೊರೆಯುವ ನೆರವು ಮತ್ತು ಸೌಲಭ್ಯಗಳ ಕುರಿತಂತೆ, ಹೆಚ್ಚಿನ ಅರಿವು ಕಾರ್ಯಕ್ರಮಗಳನ್ನು ಆಯೋಜಿಸಿ, ನೊಂದ ಮಹಿಳೆಯರಿಗೆ ಸಕಾಲದಲ್ಲಿ ಅಗತ್ಯ ನೆರವು ದೊರಕುವಂತೆ ಕ್ರಮ ಕೈಗೊಳ್ಳಿ ಎಂದು ಜಿಲ್ಲಾಧಿಕಾರಿ ಜಿ. ಜಗದೀಶ್ ಹೇಳಿದರು.

Call us

Click here

Click Here

Call us

Call us

Visit Now

Call us

ಅವರು ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಸಖಿ ಒನ್ ಸ್ಟಾಪ್ ಸೆಂಟರ್ ಯೋಜನೆಯ ಜಿಲ್ಲಾ ಮಟ್ಟದ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಸಖಿ ಒನ್ ಸ್ಟಾಪ್ ಕೇಂದ್ರದಲ್ಲಿ ದಾಖಲಾಗುವ ದೂರುಗಳನ್ನು ಆದಷ್ಟು ಬೇಗ ಇತ್ಯರ್ಥಗೊಳಿಸುವಂತೆ ತಿಳಿಸಿದ ಜಿಲ್ಲಾಧಿಕಾರಿಗಳು, ಸಮಾಲೋಚನೆ ಹಂತದಲ್ಲಿರುವ ಪ್ರಕರಣಗಳನ್ನು ಬೇಗ ಮುಕ್ತಾಯಗೊಳಿಸಿ, ನ್ಯಾಯಾಲಯದಲ್ಲಿರುವ ಪ್ರಕರಣಗಳ ಕುರಿತು ಆಗಾಗ್ಗೆ ವಿಚಾರಿಸಿ, ಕೇಂದ್ರದಲ್ಲಿ ದಾಖಲಾಗುವ ಮಹಿಳೆಯರಿಗೆ ಚಿಕಿತ್ಸೆಯ ಅಗತ್ಯವಿದ್ದಲ್ಲಿ ಜಿಲ್ಲಾಸ್ಪತ್ರೆಗೆ ದೂರವಾಣಿ ಕರೆ ಮಾಡುವ ಮೂಲಕ ಶುಶ್ರೂಷಕರ ಸೇವೆಯನ್ನು ಪಡೆಯುವಂತೆ ತಿಳಿಸಿದ ಜಿಲ್ಲಾಧಿಕಾರಿ ಜಿ. ಜಗದೀಶ್, ರಾಷ್ಟ್ರೀಯ ಹೆದ್ದಾರಿಯಿಂದ ಬರಲು ಅನುಕೂಲವಾಗುವಂತೆ ಕೇಂದ್ರಕ್ಕೆ ಕಾಂಕ್ರೀಟ್ ಅಥವಾ ಇಂಟರ್ಲಾಕ್ ರಸ್ತೆ ನಿರ್ಮಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ತಿಳಿಸಿದರು.

ಸಖಿ ಕೇಂದ್ರದಲ್ಲಿ ದೌರ್ಜನ್ಯಕ್ಕೆ ಒಳಗಾಗುವ ಮಹಿಳೆಯರನ್ನು ಮಾತ್ರ ದಾಖಲು ಮಾಡುವ ಅವಕಾಶವಿದ್ದು, ಇತರೆ ಮಾನಸಿಕ ಸಮಸ್ಯೆಯಿಂದ ರಸ್ತೆ ಬದಿ ಅಲೆದಾಡುವ ಮಹಿಳೆಯರನ್ನು ದಾಖಲು ಮಾಡಲು ಪ್ರತ್ಯೇಕ ಕೇಂದ್ರ ಇಲ್ಲವಾಗಿದ್ದು, ಈ ಕುರಿತು ಜಿಲ್ಲೆಯಲ್ಲಿ ಪ್ರತ್ಯೇಕ ಕೇಂದ್ರ ತೆರೆಯುವ ಕುರಿತಂತೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಗೆ ಪತ್ರ ಬರೆಯುವಂತೆ ತಿಳಿಸಿದ ರಾಷ್ಟ್ರೀಯ ಮಹಿಳಾ ಆಯೋಗದ ಸದಸ್ಯೆ ಶ್ಯಾಮಲಾ ಕುಂದರ್, ಸಖಿ ಕೇಂದ್ರದ ಕುರಿತಂತೆ ಗ್ರಾಮೀಣ ಪ್ರದೇಶದಲ್ಲಿ ಹೆಚ್ಚು ಅರಿವು ಮೂಡಿಸಿ ಎಂದರು.

ಸಖಿ ಕೇಂದ್ರದಲ್ಲಿ ಫೆಬ್ರವರಿ 2021 ರಿಂದ ಜೂನ್ ವರೆಗೆ 42 ಕೌಟುಂಬಿಕ ದೌರ್ಜನ್ಯ, 1 ಸೈಬರ್ ಅಪರಾಧ, 2 ಕಾಣೆಯಾದ ಪ್ರಕರಣ ಹಾಗೂ ಇತರೆ 33 ಸೇರಿದಂತೆ ಒಟ್ಟು 78 ಪ್ರಕರಣಗಳು ದಾಖಲಾಗಿದ್ದು, 27 ಪ್ರಕರಣ ಇತ್ಯರ್ಥಗೊಂಡಿದ್ದು, ಉಳಿದ ಪ್ರಕರಣಗಳು ನ್ಯಾಯಾಲಯದಲ್ಲಿ ಮತ್ತು ಸಮಾಲೋಚನೆಯಲ್ಲಿವೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ಶೇಷಪ್ಪ ಮಾಹಿತಿ ನೀಡಿದರು.

Call us

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು, ಎಎಸ್ಪಿ ಕುಮಾರಚಂದ್ರ ಮತ್ತಿತರರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

19 − three =