ಸದಸ್ಯರ ಸಕ್ರೀಯ ಪಾಲ್ಗೊಳ್ಳುವಿಕೆಯಿಂದಲೇ ಸಹಕಾರಿ ಸಂಘಗಳು ಯಶಸ್ಸು: ಎಸ್. ರಾಜು ಪೂಜಾರಿ

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು:
ಸಾರ್ವಜನಿಕರು, ಸದಸ್ಯರ ಸಕ್ರೀಯ ಪಾಲ್ಗೊಳ್ಳುವಿಕೆಯಿಂದಲೇ ಸಹಕಾರಿ ಸಂಘಗಳು ಅಭಿವೃದ್ಧಿ ಸಾಧ್ಯ. ಗ್ರಾಮೀಣ ಭಾಗದಲ್ಲಿ ಆರ್ಥಿಕ ಸಂಸ್ಥೆಗಳು ಸೇವೆಯ ದೃಷ್ಟಿಯಿಂದ ಕಾರ್ಯಾಚರಿಸುತ್ತಿದ್ದು, ಸಂಸ್ಥೆಯ ಬೆಳವಣಿಗೆಗೂ ಇದು ಸಹಾಯವಾಗಿದೆ ಎಂದು ಶ್ರೀ ರಾಮ ಸೌಹಾರ್ದ ಕ್ರೆಡಿಟ್ ಕೋ-ಆಪರೇಟಿವ್ ಅಧ್ಯಕ್ಷ ಎಸ್. ರಾಜು ಪೂಜಾರಿ ಹೇಳಿದರು.

Call us

Call us

Call us

ಅವರು ಶನಿವಾರ ಶ್ರೀ ರಾಮ ಸೌಹಾರ್ದ ಕ್ರೆಡಿಟ್ ಕೋ-ಆಪರೇಟಿವ್ ನಿ. ಬೈಂದೂರು ಇದರ ಗೋಳಿಹೊಳೆ ಶಾಖೆಯ ವಾರ್ಷಿಕೋತ್ಸವದ ಅಂಗವಾಗಿ ಗೊಳಿಹೊಳೆ ಶ್ರೀ ಮಹಿಷಾಮರ್ದಿನಿ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಗ್ರಾಹಕರ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

Call us

Call us

ಸ್ವ-ಸಹಾಯ ಸಂಘದ ಸದಸ್ಯರು ಸಂಸ್ಥೆಯ ಅಭಿವೃದ್ಧಿಯಲ್ಲಿ ಪ್ರಮುಖ ಪಾತ್ರ ವಹಿಸಿದ್ದು, ಅವರು ಸಾಲ ಪಡೆಯುವ ಜೊತೆಗೆ ಉಳಿತಾಯ ಮಾಡುವ ಮನೋಭಾವನೆಯನ್ನು ರೂಡಿಸಿಕೊಳ್ಳುವುದು ಅಗತ್ಯ. ಅದು ತುರ್ತು ಸಂದರ್ಭದಲ್ಲಿ ನೆರವಿಗೆ ಬರುವುದಲ್ಲದೇ ಬದುಕಿನಲ್ಲಿಯೂ ಭದ್ರತೆ ಭಾವ ಮೂಡುವಂತೆ ಮಾಡುತ್ತದೆ ಎಂದ ಅವರು ಸಂಸ್ಥೆಯ ಮೂಲಕ ಸಾಕಷ್ಟು ಸೇವಾ ಕಾರ್ಯಗಳನ್ನು ಮಾಡಲಾಗುತ್ತಿದೆ. ವಿದ್ಯಾರ್ಥಿವೇತನ, ಅಶಕ್ತರಿಗೆ ನೆರವು ಮೊದಲಾದ ಕಾರ್ಯವನ್ನು ನಿರಂತರವಾಗಿ ಮಾಡಲಾಗುತ್ತಿದೆ ಎಂದರು.

ಗೋಳಿಹೊಳೆ ಗ್ರಾಮ ಪಂಚಾಯತ್ ಅಧ್ಯಕ್ಷೆ ಇಂದಿರಾ, ಕೊಲ್ಲೂರು ದೇವಳದ ವ್ಯವಸ್ಥಾಪನಾ ಸಮಿತಿ ಮಾಜಿ ಸದಸ್ಯ ಚುಚ್ಚಿ ನಾರಾಯಣ ಶೆಟ್ಟಿ, ನಿವೃತ್ತ ಮುಖ್ಯ ಶಿಕ್ಷಕ ರತ್ನಾಕರ ಶೆಟ್ಟಿ, ಎಸ್ಸಿಡಿಸಿ ಬ್ಯಾಂಕ್ ಮೇಲ್ವಿಚಾರಕ ಶಿವರಾಮ ಪೂಜಾರಿ, ಪ್ರಭಾರ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕಿಟ್ಟಣ್ಣ ರೈ ಉಪಸ್ಥಿತರಿದ್ದರು.

ಈ ಸಂದರ್ಭ ಸಂಸ್ಥೆಯ ವ್ಯಾಪ್ತಿಯ ಮೂರೂರು ಹಾಗೂ ಏಳಜಿತದ ಕೊರಗ ಸಮುದಾಯದ ಮಕ್ಕಳಿಗೆ ಬಟ್ಟೆ ವಿತರಿಸಲಾಯಿತು. ಕಾರ್ಯಕ್ರಮದಲ್ಲಿ ಭಾಗವಹಿಸಿದ ಅದೃಷ್ಟಶಾಲಿ ಗ್ರಾಹಕ ವಿಜೇತರುಗಳಿಗೆ ಬಹುಮಾನ ನೀಡಲಾಯಿತು.

ರಾಮಕೃಷ್ಣ ಆಚಾರ್ ಪ್ರಾರ್ಥಿಸಿದರು. ಸಂಸ್ಥೆಯ ಉಪಾಧ್ಯಕ್ಷ ವಿನಾಯಕ ರಾವ್ ಸ್ವಾಗತಿಸಿ, ಶಾಖಾ ಪ್ರಬಂಧಕ ರಾಘವೇಂದ್ರ ಪೂಜಾರಿ ವಂದಿಸಿದರು. ಪತ್ರಕರ್ತ ಸುಬ್ರಹ್ಮಣ್ಯ ಪಡುಕೋಣೆ ಕಾರ್ಯಕ್ರಮ ನಿರೂಪಿಸಿದರು.

Leave a Reply

Your email address will not be published. Required fields are marked *

thirteen + eighteen =