ಸಮಗ್ರ ಗುಣಮಟ್ಟ ನಿರ್ವಹಣೆ-ಒಂದು ದಿನದ ರಾಜ್ಯ ಮಟ್ಟದ ಕಾರ್ಯಗಾರ

ಕುಂದಾಪ್ರ ಡಾಟ್ ಕಾಂ ಸುದ್ದಿ
ಬೈಂದೂರು: ಬೈಂದೂರು ಇಲ್ಲಿನ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಐಕ್ಯೂಎಸಿ ಮತ್ತು ಅರ್ಥಶಾಸ್ತ್ರ ವಿಭಾಗದ ವತಿಯಿಂದ ಪ್ರಥಮ ದರ್ಜೆ ಕಾಲೇಜುಗಳ ಪ್ರಾಧ್ಯಾಪಕರಿಗಾಗಿ ಸಮಗ್ರ ಗುಣಮಟ್ಟ ನಿರ್ವಹಣೆಯ ಒಂದು ದಿನದ ರಾಜ್ಯ ಮಟ್ಟದ ಕಾರ್ಯಗಾರ ನಡೆಯಿತು. ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ಡಾ.ಜಿ ಶಂಕರ ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಕೇಂದ್ರ ಇಲ್ಲಿನ ಡಾ.ಉಮೇಶ ಮಯ್ಯ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿ ಪ್ರಾಧ್ಯಾಪಕರುಗಳಲ್ಲಿ ಗುಣಮಟ್ಟ ನಿರ್ವಹಣೆ ಅವಶ್ಯಕತೆಯ ಬಗೆಗೆ ಕಿವಿ ಮಾತು ಹೇಳಿದರು.

ಕಾರ್ಯಗಾರದಲ್ಲಿ ಕಲಾ, ವಾಣಿಜ್ಯ ಮತ್ತು ಸ್ನಾತಕೋತ್ತರ ಕಾಲೇಜು ಸ್ವಾಯತ್ತ ಹಾಸನ ಇಲ್ಲಿನ ಪ್ರಾಂಶುಪಾಲರಾದ ಡಾ.ಡಿ.ಜಿ ಕೃಷ್ಣೇಗೌಡ ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿದ್ದರು. ನಾವು ಹೇಗೆ ಗುಣಮಟ್ಟವನ್ನು ಕಾಯ್ದುಕೊಳ್ಳಬೇಕು ಎನ್ನುವುದರ ಬಗೆಗೆ ವಿವಿಧ ಚಟುವಟಿಕೆಗಳ ಮೂಲಕ ಅರಿವು ಮೂಡಿಸಿದರು. ಕಾರ್ಯಗಾರದಲ್ಲಿ ಮತ್ತೋರ್ವ ಮುಖ್ಯ ಅತಿಥಿಗಳಾಗಿ ಮಹಿಳಾ ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಗಂಧದ ಕೋಠಿ ಹಾಸನ ಇಲ್ಲಿನ ಪ್ರಾಂಶುಪಾಲರಾದ ಪ್ರೊ. ಸುಲೋಚನಾ ಅವರು ಭಾಗವಹಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಕಾಲೇಜಿನ ಪ್ರಾಂಶುಪಾಲರಾದ ಶ್ರೀ ಬಿ.ಎ ಮೇಳಿ ಇವರು ಮಾತನಾಡಿ ಕಾಲೇಜಿಗಳಲ್ಲಿ ಉತ್ತಮ ಗುಣಮಟ್ಟದ ವಿದ್ಯಾರ್ಥಿಗಳು ರೂಪುಗೊಳ್ಳಬೇಕಾದರೆ ಉತ್ತಮ ಗುಣಮಟ್ಟದ ಪ್ರಾಧ್ಯಾಪಕರು ಇರುವುದು ಅವಶ್ಯಕ ಎಂದರು. ಐಕ್ಯೂಎಸಿ ಸಂಚಾಲಕರು ಹಾಗೂ ಅರ್ಥಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಡಾ.ಅಶ್ವತ್ಥ ದೇವರಾಯ ನಾಯ್ಕ ಮತ್ತು ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ಶ್ರೀ ಗಿರೀಶ ಕುಮಾರ್ ಹಾಗೂ ಎಲ್ಲಾ ವಿಭಾಗದ ಸಹಾಯಕ ಪ್ರಾಧ್ಯಾಪಕರುಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ವಿವಿಧ ಜಿಲ್ಲೆಗಳ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಿಂದ ಪ್ರಾಧ್ಯಾಪಕರು ಭಾಗವಹಿಸಿದ್ದರು. ಡಾ.ಸೋಮೇಶ್ವರಿ ಕಾರ್ಯಕ್ರಮವನ್ನು ನಿರೂಪಣೆ ಮಾಡಿದರು. ಶ್ರೀ ಗಿರೀಶ್ ಕುಮಾರ್ ಎಲ್ಲರನ್ನೂ ಸ್ವಾಗತಿಸಿದರು. ಪ್ರಾಧ್ಯಾಪಕರಾದ ಕುಮಾರಿ ಲತಾ ಪೂಜಾರಿ ವಂದನಾರ್ಪಣೆ ಗೈದರು.

 

Leave a Reply

Your email address will not be published. Required fields are marked *

3 × 5 =