ಸಮಾಜಕ್ಕೆ ಶಿಕ್ಷಕರ ಕೊಡುಗೆ ಅನನ್ಯ: ನೀಲಾವರ ಸುರೇಂದ್ರ ಅಡಿಗ

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: ಸುಶಿಕ್ಷಿತ ಸಮಾಜದ ನಿರ್ಮಾಣದಲ್ಲಿ ಶಿಕ್ಷಕರ ಪಾತ್ರ ಮಹತ್ವದ್ದು. ನಮ್ಮ ಸಂಸ್ಕೃತಿಯನ್ನು ಮುಂದಿನ ತಲೆಮಾರಿಗೆ ಪರಿಚಯಿಸಿ, ಅದನ್ನು ಉಳಿಸಿ ಬೆಳೆಸುವಲ್ಲಿ ಅವರ ಪರಿಶ್ರಮ ಸಾಕಷ್ಟಿದೆ. ಗುರು ಹಿರಿಯರನ್ನು ಗುರುತಿಸಿ, ಗೌರವಿಸುವ ಕಾರ್ಯ ನಿರಂತರವಾಗಿ ನಡೆಯುತ್ತಿರಬೇಕು. ಪ್ರಾಜ್ಞರ ಮಾರ್ಗದರ್ಶನ ಗುರಿಸಾಧನೆ ಮಾಡಲು ಸಹಕಾರಿಯಾಗುತ್ತದೆ ಎಂದು ಉಡುಪಿ ಜಿಲ್ಲಾ ಕಸಾಪ ಅಧ್ಯಕ್ಷ ನೀಲಾವರ ಸುರೇಂದ್ರ ಅಡಿಗ ಹೇಳಿದರು.

Call us

Call us

Call us

ಉಪ್ಪುಂದದಲ್ಲಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಹಮ್ಮಿಕೊಂಡಿದ್ದ ಆದರ್ಶ ಶಿಕ್ಷಕ ದಂಪತಿಗಳಾದ ವೆಂಕಪ್ಪ ಐತಾಳ್ ಮತ್ತು ಶಾರದಾರವರ ಸನ್ಮಾನ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು. ತಮ್ಮ ಮಕ್ಕಳನ್ನು ಬೇರೆಯವರ ಕೈಯಲ್ಲಿಟ್ಟು, ಬೇರೆಯವರ ಮಕ್ಕಳಿಗೆ ವಿದ್ಯಾದಾನ ಮಾಡುವ ಶಿಕ್ಷಕ ದಂಪತಿಗಳು ನಿಜವಾಗಲೂ ಅನುಕರಣೀಯರು. ನಿಸ್ವಾರ್ಥದಿಂದ ವಿದ್ಯಾರ್ಥಿಗಳಿಗೆ ಜ್ಞಾನವನ್ನು ಧಾರೆಯೆರೆದು ಅವರ ಉನ್ನತಿಯನ್ನು ಕಂಡು ಸಂಭ್ರಮಿಸುವ ಅಧ್ಯಾಪಕರಿಂದಲೇ ನಮ್ಮ ಶಿಕ್ಷಣ ವ್ಯವಸ್ಥೆ ಮೇಲ್‌ಸ್ತರದಲ್ಲಿದೆ. ನಮ್ಮ ಜಿಲ್ಲೆಯಲ್ಲಿ ಸೇವೆ ಸಲ್ಲಿಸಿ, ನಿವೃತ್ತರಾದ ಶಿಕ್ಷಕ ದಂಪತಿಗಳ ಕುರಿತಾದ ಪುಸ್ತಕವನ್ನು ಹೊರತರುವ ಉದ್ದೇಶ ಪರಿಷತ್ತಿಗೆ ಇದ್ದು, ಆ ನಿಟ್ಟಿನಲ್ಲಿ ಕೆಲಸ ನಡೆಯುತ್ತಿದೆ. ಇದರಿಂದ ಇಂದಿನ ಹಾಗೂ ಮುಂದಿನ ಶಿಕ್ಷಕರಿಗೆ ಮತ್ತು ಮಕ್ಕಳಿಗೆ ಆದರ್ಶ ಅಧ್ಯಾಪಕರ ಬಗ್ಗೆ ತಿಳಿಯಲು ಸಾಧ್ಯವಾಗುತ್ತದೆ ಎಂದರು.

ಸನ್ಮಾನ ಸ್ವೀಕರಿಸಿದ ವೆಂಕಪ್ಪ ಐತಾಳ್ ದಂಪತಿಗಳು ಪರಿಷತ್ತಿನ ಕಾರ್ಯ ಶ್ಲಾಘನೀಯ ಎಂದು ಕೃತಜ್ಞತೆ ವ್ಯಕ್ತ ಪಡಿಸಿದರು. ಕುಂದಾಪುರ ತಾಲೂಕು ಕಸಾಪ ಅಧ್ಯಕ್ಷ ಡಾ. ಸುಬ್ರಹ್ಮಣ್ಯ ಭಟ್, ಬೈಂದೂರು ಕ್ಷೇತ್ರ ಶಿಕ್ಷಣಾಧಿಕಾರಿ ನಾಗೇಶ ನಾಯ್ಕ್, ತಾಲೂಕು ಕಸಾಪ ಗೌರವ ಕಾರ್ಯದರ್ಶಿ ಡಾ. ಕಿಶೋರ ಶೆಟ್ಟಿ ಹಕ್ಲಾಡಿ, ಗೌರವ ಕೋಶಾಧಿಕಾರಿ ರವೀಂದ್ರ ಎಚ್., ಬೈಂದೂರು ಹೋಬಳಿ ಅಧ್ಯಕ್ಷ ಗಣಪತಿ ಹೋಬಳಿದಾರ, ಪ್ರಕಾಶ ಹೆಬ್ಬಾರ್ ಮತ್ತಿತರರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

two × four =