ಸಮಾಜದ ಅಭಿವೃದ್ಧಿಯಲ್ಲಿ ಸಂಘಟನೆ ಪಾತ್ರ ಮಹತ್ವ : ಅಂಜಲಿ ಚಂದ್ರಕಾಂತ

ಕುಂದಾಪುರ: ಯುವಜನತೆ ಉತ್ತಮ ಉದ್ದೇಶದೊಂದಿಗೆ ಸಂಘಟನೆಗಳಲ್ಲಿ ತೊಡಗಿಸಿಕೊಂಡು ಗುರುತಿಸಿಕೊಳ್ಳಬೇಕು. ಸಂಘಟನೆಗಳು ಸಮಾಜದ ಅಭಿವೃದ್ಧಿಯನ್ನೇ ಮುಖ್ಯ ಉದ್ದೇಶವನ್ನಾಗಿಟ್ಟುಕೊಂಡು ಕಾರ್ಯನಿರ್ವಹಿಸಬೇಕು. ವಿದ್ಯಾಭ್ಯಾಸಕ್ಕಾಗಿ ನೀಡುತ್ತಿರುವ ವಿದ್ಯಾರ್ಥಿವೇತನದ ಸದುಪಯೋಗವನ್ನು ವಿದ್ಯಾರ್ಥಿಗಳು ಪಡೆದುಕೊಳ್ಳಬೇಕು ಎಂದು ನ್ಯಾಯವಾದಿ ಅಂಜಲಿ ಚಂದ್ರಕಾಂತ ಹೇಳಿದರು.

ಅವರು ಇತ್ತೀಚಿಗೆ ಮೇಲ್‌ಗಂಗೊಳ್ಳಿ ಶ್ರೀ ಬಸವೇಶ್ವರ ದೇವಸ್ಥಾನದ ವತಿಯಿಂದ ಜರಗಿದ ವಿದ್ಯಾರ್ಥಿವೇತನ ವಿತರಣೆ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದ ಅಧ್ಯಕ್ಷತೆ ವಹಿಸ ಮಾತನಾಡಿದರು.

ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಮತ್ಸ್ಯೋದ್ಯಮಿ ಜಗದೀಶ ಗಂಗೊಳ್ಳಿ ಅವರು ಕುಂದಾಪುರ ತಾಲೂಕು ಮಟ್ಟದ ವಿವಿಧ ಸ್ಪರ್ಧೆಗಳ ವಿಜೇತರಿಗೆ ಬಹುಮಾನ ವಿತರಿಸಿ ಶುಭ ಹಾರೈಸಿದರು. ಶ್ರೀಧರ ಬಿ.ಟಿ., ಮಹಿಳಾ ಮಂಡಲದ ಅಧ್ಯಕ್ಷೆ ಜ್ಯೋತಿ, ಅರ್ಚಕ ರಾಮ ಬಿ. ಮೊದಲಾದವರು ಉಪಸ್ಥಿತರಿದ್ದರು. ನ್ಯಾಯವಾದಿ ಆನಂದ ಕಾರ್ಯಕ್ರಮ ನಿರೂಪಿಸಿದರು. ಜಗದೀಶ ಜಿ.ಎಂ. ವಂದಿಸಿದರು.

Leave a Reply

Your email address will not be published. Required fields are marked *

four × four =