ಸಮಾಜದ ಕಟ್ಟಕಡೆಯ ಜನರನ್ನು ಮುಖ್ಯವಾಹಿನಿಗೆ ತರುವಲ್ಲಿ ಸಂಘ ಸಂಸ್ಥೆಗಳು ಶ್ರಮಿಸಬೇಕು

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಗಂಗೊಳ್ಳಿ : ಸಂಘ ಸಂಸ್ಥೆಗಳು ಸಮಾಜಮುಖಿ ಕಾರ್ಯಗಳನ್ನು ನಡೆಸುತ್ತಿರಬೇಕು. ಪರಿಸರದ ಜನರಿಗೆ ಅನುಕೂಲವಾಗುವಂತಹ ಕಾರ್ಯಕ್ರಮಗಳನ್ನು ರೂಪಿಸುವುದರ ಮೂಲಕ ಜನರ ಅಭಿವೃದ್ಧಿಗೆ ಸಹಕಾರ ನೀಡಬೇಕು. ಸಮಾಜದ ಕಟ್ಟಕಡೆಯ ಜನರನ್ನು ಗುರುತಿಸುವ ಮತ್ತು ಅವರನ್ನು ಸಮಾಜದ ಮುಖ್ಯವಾಹಿನಿಗೆ ಕರೆತರುವಲ್ಲಿ ಸಂಘ ಸಂಸ್ಥೆಗಳು ಶ್ರಮಿಸಬೇಕು ಎಂದು ಕುಂದಾಪುರ ತಾಲೂಕು ಪಂಚಾಯತ್ ಅಧಿಕಾರಿ ಕೆ.ರಾಮಚಂದ್ರ ಮಯ್ಯ ಹೇಳಿದರು.

Call us

Call us

Call us

ಅವರು ಕೊಡಪಾಡಿ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯ ವಠಾರದಲ್ಲಿ ಜರಗಿದ ಕೊಡಪಾಡಿಯ ಸವ್ಯಸಾಚಿ ಯುವಕ ಮಂಡಲದ ೧೬ನೇ ವಾರ್ಷಿಕೋತ್ಸವ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಮುಖ್ಯ ಅತಿಥಿಗಳಾದ ಪತ್ರಕರ್ತ ಬಿ.ರಾಘವೇಂದ್ರ ಪೈ, ಉಡುಪಿ ಸವಿತಾ ಸಮಾಜದ ಸಂಘಟನಾ ಕಾರ್ಯದರ್ಶಿ ಮಂಜುನಾಥ ಸಾಲಿಯಾನ್, ಗಂಗೊಳ್ಳಿಯ ಉದ್ಯಮಿ ಜಿ.ವಿಠಲ ಭಾಸ್ಕರ ಶೆಣೈ ಶುಭಾಶಂಸನೆಗೈದರು. ಇದೇ ಸಂದರ್ಭ ನಿವೃತ್ತ ಮುಖ್ಯೋಪಾಧ್ಯಾಯ ನಾರಾಯಣ ಬೈಂದೂರು ಅವರನ್ನು ಸನ್ಮಾನಿಸಿ ಗೌರವಿಸಲಾಯಿತು. ಶಾಲೆಯ ಪ್ರಭಾರ ಮುಖ್ಯೋಪಾಧ್ಯಾಯಿನಿ ವೀಣಾ, ತಾಯಿ ಮಾರಿಕಾಂಬಾ ಮಹಿಳಾ ಮಂಡಳಿ ಅಧ್ಯಕ್ಷೆ ಕವಿತಾ ಗಾಣಿಗ, ಶಾಲೆಯ ಎಸ್‌ಡಿಎಂಸಿ ಅಧ್ಯಕ್ಷ ರಾಮಚಂದ್ರ ಗಾಣಿಗ, ಸವ್ಯಸಾಚಿ ಯುವಕ ಮಂಡಲದ ಅಧ್ಯಕ್ಷ ಸುಧೀರ ಗಾಣಿಗ ಉಪಸ್ಥಿತರಿದ್ದರು. ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಹಾಗೂ ಶಾಲಾ ವಿದ್ಯಾರ್ಥಿಗಳಿಗೆ ಬಹುಮಾನ ನೀಡಿ ಗೌರವಿಸಲಾಯಿತು. ಸಂಘದ ಸಲಹೆಗಾರ ಭಾಸ್ಕರ ಗಾಣಿಗ ಸ್ವಾಗತಿಸಿದರು. ಸಂಗೀತಾ ಪೂಜಾರಿ ಸನ್ಮಾನಿತರನ್ನು ಪರಿಚಯಿಸಿದರು. ಶಿಕ್ಷಕಿ ಸುಚಿತ್ರಾ ಪೂಜಾರಿ ಬಹುಮಾನ ವಿಜೇತರ ಪಟ್ಟಿ ವಾಚಿಸಿದರು. ಸುನೀತಾ ಪೂಜಾರಿ ಕಾರ್ಯಕ್ರಮ ನಿರೂಪಿಸಿದರು. ಸಹಶಿಕ್ಷಕಿ ಶೀಲಾವತಿ ವಂದಿಸಿದರು.

Leave a Reply

Your email address will not be published. Required fields are marked *

seven + nineteen =