ಸರಕಾರದ ಯೋಜನೆಗಳು ಸಮಾಜದ ಕಟ್ಟಕಡೆಯ ವ್ಯಕ್ತಿಗೆ ತಲುಪಬೇಕು

ಕುಂದಾಪುರ: ಸರಕಾರದ ಎಲ್ಲಾ ಯೋಜನೆಗಳನ್ನು ಸಮಾಜದ ಕಟ್ಟ ಕಡೆಯ ಪ್ರಜೆಯೂ ದೊರಕಬೇಕೆಂಬುದು ಸ್ವಾತಂತ್ರ್ಯದ ಪರಮ ಗುರಿಯಾಗಿದೆ ಎಂದು ಕುಂದಾಪುರ ಉಪವಿಭಾಗದ ಸಹಾಯಕ ಆಯುಕ್ತೆ ಚಾರುಲತಾ ಸೋಮಲ್ ಹೇಳಿದರು.

ಅವರು ಕುಂದಾಪುರ ತಾಲೂಕು ಆಡಳಿತದ ವತಿಯಿಂದ ಇಲ್ಲಿನ ಗಾಂಧಿ ಮೈದಾನದಲ್ಲಿ ಜರುಗಿದ 69ನೇ ಸ್ವಾಂತಂತ್ರೋತ್ಸವದಲ್ಲಿ ಧ್ವಜಾರೋಹಣಗೈದು ಮಾತನಾಡಿದರು.

ದೇಶದ ಸ್ವಾತಂತ್ರ್ಯಕ್ಕಾಗಿ ನಮ್ಮ ಪೂರ್ವಿಕರು ಮಾಡಿದ ತ್ಯಾಗ-ಬಲಿದಾನಗಳನ್ನು ನೆನೆದು ನಮ್ಮ ಸ್ವಾತಂತ್ರ್ಯವನ್ನು ಉಳಿಸಿಕೊಳ್ಳುವುದರೊಂದಿಗೆ ರಾಷ್ಟ್ರವನ್ನು ಅಭಿವೃದ್ಧಿಯ ಪಥದೆಡೆಗೆ ಕೊಂಡೊಯ್ಯಬೇಕಾಗಿದೆ ಎಂದರು.

ಕುಂದಾಪುರ ತಾಲೂಕು ಪಂಚಾಯತ್ ಅಧ್ಯಕ್ಷ ಭಾಸ್ಕರ ಬಿಲ್ಲವ, ಕುಂದಾಪುರ ತಹಶೀಲ್ದಾರರಾದ ಗಾಯತ್ರಿ ನಾಯಕ್, ಪುರಸಭಾ ಅಧ್ಯಕ್ಷೆ ಕಲಾವತಿ ಯು.ಎಸ್, ಕುಂದಾಪುರ ಉಪವಿಭಾಗದ ಪೊಲೀಸ್ ಉಪಾಧೀಕ್ಷಕ ಎಂ. ಮಂಜುನಾಥ ಶೆಟ್ಟಿ, ಜಿಲ್ಲಾ ಪಂಚಾಯತ್ ಸದಸ್ಯ ಗಣಪತಿ ಶ್ರೀಯಾನ್, ತಾಲೂಕು ಪಂಚಾಯತ್, ಪುರಸಭಾ ಸದಸ್ಯರುಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಕುಂದಾಪುರದ ಪೊಲೀಸ್ ಇಲಾಖೆ, ಅಗ್ನಿಶಾಮಕ ದಳ, ಗೃಹರಕ್ಷಕ ದಳ ಹಾಗೂ ವಿವಿಧ ಕಾಲೇಜುಗಳ ಎಸಿಸಿ, ಸೌಟ್ಕ-ಗೈಡ್, ಸೇವಾದಲದಿಂದ ಆಕರ್ಪಕ ಪಥಸಂಚಲನ ನಡೆಯಿತು.

Leave a Reply

Your email address will not be published. Required fields are marked *

seven − three =