ಸರಕಾರಿ ಪ್ರಥಮ ದರ್ಜೆ ಕಾಲೇಜು, ಬೈಂದೂರು: ವೇದಗಣಿತ ತರಬೇತಿ ಕಾರ್ಯಗಾರ

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ
ಬೈಂದೂರು: ವಿದ್ಯಾರ್ಥಿಗಳಿಗೆ ತಮ್ಮ ಸ್ಪರ್ಧಾತ್ಮಕ ಪರೀಕ್ಷೆಯನ್ನು ಎದುರಿಸಲು ಉಪಯೋಗವಾಗುವಂತಹ ವೇದ ಗಣಿತದ ಸೂತ್ರಗಳಾದ ಎಕಾಧಿಕೇನ, ಪೂರ್ವೇಣ, ಏಕನ್ಯೂನೇನ ಪೂರ್ವೇಣ, ಯುವಧನಂ, ನಿಖಿಲಂ, ನವತಾಶ್ಚರ್‌ಮಾಮ್ ದಶತಾಹ್‌ವನ್ನು ಹಾಗೂ ವೇದಗಣಿತದ ಮಹತ್ವದ ಬಗ್ಗೆ ಸರಕಾರಿ ಪ್ರಥಮ ದರ್ಜೆ ಕಾಲೇಜು, ಕೊಟೇಶ್ವರದ ಗಣಿತಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ಡಾ. ಶ್ರೀಮತಿ ಅಡಿಗರವರು ವಿವರಿಸಿದರು.

Call us

Call us

Call us

ಸರಕಾರಿ ಪ್ರಥಮ ದರ್ಜೆ ಕಾಲೇಜು, ಬೈಂದೂರಿನ ಗಣಿತಶಾಸ್ತ್ರ ವಿಭಾಗ ಮತ್ತು ಆಂತರಿಕ ಗುಣಮಟ್ಟ ಮತ್ತು ಭರವಶಾ ಕೋಶ ಏರ್ಪಡಿಸಿದ ವೇದಗಣಿತ ತರಬೇತಿ ಕಾರ್ಯಗಾರ ಉದ್ದೇಶಿಸಿ ವಿವರಿಸಿದರು.

Call us

Call us

ಕಾಲೇಜಿನ ಪ್ರಾಂಶುಪಾಲರಾದ ಡಾ. ರಘು ನಾಯ್ಕರವರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು. ಐ.ಕ್ಯೂ.ಎ.ಸಿ ಸಂಚಾಲಕರಾದ ಡಾ.ಅಶ್ವತ್ಥ ದೇವರಾಯ ನಾಯ್ಕ ಉಪಸ್ಥಿತರಿದ್ದರು. ಗಣಿತಶಾಸ್ತ್ರ ವಿಭಾಗದ ಉಪನ್ಯಾಸಕಿಯಾದ ಕು. ಪ್ರೀಯಾ ಜೋಸೆಫ್‌ರವರು ಸ್ವಾಗತಿಸಿದರು. ದ್ವಿತೀಯ ಬಿ.ಎಸ್ಸಿ ವಿದ್ಯಾರ್ಥಿನಿಯಾದ ಮೈತ್ರಿಯವರು ಕಾರ್ಯಕ್ರಮ ನಿರೂಪಿಸಿದರು. ಗಣಿತಶಾಸ್ತ್ರ ವಿಭಾಗ ಮುಖ್ಯಸ್ಥರಾದ ಕು. ಸಂಗೀತಾ ವಂದಿಸಿದರು.

Leave a Reply

Your email address will not be published. Required fields are marked *

16 − twelve =