ಸರಕಾರಿ ಶಾಲೆಗಳಲ್ಲಿ ಆಂಗ್ಲ ಮಾಧ್ಯಮ ಶಿಕ್ಷಣ ಆರಂಭಿಸುವ ಗುರಿ: ಶಾಸಕ ಬಿ. ಎಂ. ಸುಕುಮಾರ ಶೆಟ್ಟಿ

Call us

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು:
ಕ್ಷೇತ್ರ ವ್ಯಾಪ್ತಿಯಲ್ಲಿ ಎಲ್ಲಾ ಸರಕಾರಿ ಶಾಲೆಗಳಲ್ಲಿ ಇಂಗ್ಲೀಷ್ ಮೀಡಿಯಂ ಆರಂಭಿಸುವ ಗುರಿ ಇರಿಸಿಕೊಂಡಿದ್ದೇವೆ. ಕಳೆದ ವರ್ಷ ಹಾಗೂ ಈ ವರ್ಷ ಸೇರಿ ಈಗಾಗಲೆ 10 ಸರಕಾರಿ ಶಾಲೆಗಳಲ್ಲಿ ಇಂಗ್ಲೀಷ್ ಮೀಡಿಯಂ ಆರಂಭಿಸಲಾಗಿದೆ. ಕೋವಿಡ್ ಕಳೆದ ಒಂದೂವರೆ ವರ್ಷಗಳಿಂದ ಮಕ್ಕಳ ಶಿಕ್ಷಣವನ್ನು ಹಾಳು ಮಾಡಿದೆ. ಕೋವಿಡ್‌ನಿಂದ ಹೋಟೆಲ್ ಉದ್ಯಮಕ್ಕೆ, ಬಸ್ ಉದ್ಯಮಕ್ಕೆ ಹಾಗೂ ಶಾಲೆಗಳಿಗೆ ತುಂಬಲಾರದ ನಷ್ಟವಾಗಿದೆ. ಹೋಟೆಲ್ ಹಾಗೂ ಬಸ್ ಉದ್ಯಮ ಸರಿಪಡಿಸಿಕೊಳ್ಳಬಹುದು. ಆದರೆ ಮಕ್ಕಳ ಶಿಕ್ಷಣದಲ್ಲಾದ ನಷ್ಟ ಸರಿಪಡಿಸಿಕೊಳ್ಳುವುದೇ ಕಷ್ಟ ಎಂಬಂತಾಗಿದೆ. ಈ ನಷ್ಟವನ್ನು ಶಿಕ್ಷಕರು ವಿಶೇಷ ಕಾಳಜಿ ಇಟ್ಟು ಸರಿಪಡಿಸಬೇಕು. ಎಲ್ಲಾ ಶಿಕ್ಷಕರು ಮುಂದಿನ ಎರಡು ವರ್ಷಗಳಲ್ಲಿ ಮಕ್ಕಳನ್ನು ಪುನರ್ ಸಿದ್ದಪಡಿಸಬೇಕು. ಸಮಾಜದ ಕಟ್ಟಕಡೆಯ ಮಗು ಕೂಡ ಯೋಗ್ಯ ಶಿಕ್ಷಣ ಪಡೆದಲ್ಲಿ ದೇಶ ಬದಲಾಗಲಿದೆ ಎಂದು ಬೈಂದೂರು ಶಾಸಕ ಬಿ. ಎಂ. ಸುಕುಮಾರ ಶೆಟ್ಟಿ ನುಡಿದರು.

Call us

Click Here

Click here

Click Here

Call us

Visit Now

Click here

ಅವರು ಚಿತ್ತೂರು ಸರಕಾರಿ ಹಿರಿಯ ಪ್ರಥಮಿಕ ಶಾಲೆಯಲ್ಲಿ ನೋಟ್ ಪುಸ್ತಕ ವಿತರಣೆ, ಸುಸಜ್ಜಿತ ಶೌಚಾಲಯ, ಆಂಗ್ಲ ಮಾಧ್ಯಮ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದರು.

ನೂತನ ಶೌಚಾಲಯ ಕಟ್ಟಡಕ್ಕೆ4,55,000 ಚೆಕ್‌ನ್ನು ಕರ್ನಾಟಕ ಬ್ಯಾಂಕ್ ವತಿಯಿಂದ ಶಾಲೆಗೆ ಹಸ್ತಾಂತರಿಸಿದ ಕರ್ನಾಟಕ ಬ್ಯಾಂಕಿನ ವ್ಯವಸ್ಥಾಪಕರಾದ ಮಹಾಬಲೇಶ್ವರ ಎಂ. ಎಸ್. ಮಾತನಾಡಿ ದೇವಾಲಯಕ್ಕೆ ನೀಡುವ ಪ್ರ್ರಾಶಸ್ತ್ಯಕ್ಕೆ ಅನುಗುಣವಾಗಿ ಊರಿನ ಶಿಕ್ಷಣ ಸಂಸ್ಥೆಗಳನ್ನು ಅಭಿವೃದ್ಧಿ ಮಾಡುವ ಜವಾಬ್ದಾರಿ ಊರಿನ ನಾಗರಿಕರದ್ದಾಗಿದ್ದು ದಾನಿಗಳು ಸರಕಾರಿ ಶಾಲೆಗಳನ್ನು ಅಭಿವೃದ್ಧಿ ಪಡಿಸಬೇಕು. ಚಿತ್ತೂರಿನ ಶಾಲೆಗೆ ದೂರದಿಂದ ಆಗಮಿಸುವ ಮಕ್ಕಳ ಅನುಕೂಲಕ್ಕೆ ಬೇಕಾದ ವಾಹನ ವ್ಯವಸ್ಥೆಯನ್ನು ಕರ್ನಾಟಕ ಬ್ಯಾಂಕ್ ವತಿಯಿಂದ ಮಾಡಲಾಗುವುದು ಎಂದು ಹೇಳಿದರು.

ಸಮಾರಂಭದ ಅಧ್ಯಕ್ಷತೆಯನ್ನು ಚಿತ್ತೂರು ಗ್ರಾಮ ಪಂಚಾಯತ್ ಅಧ್ಯಕ್ಷೆ ಜಯಂತಿ ಪೂಜಾರಿ ವಹಿಸಿದ್ದು ಶಾಲೆಯ ಅಭಿವೃದ್ಧಿಗೆ ಗ್ರಾಮ ಪಂಚಾಯತ್‌ನ ಪೂರ್ಣ ಸಹಕಾರದ ಭರವಸೆ ನೀಡಿದರು.

ಎಂ.ಎಸ್. ಮಂಜ ಚಾರಿಟೇಬಲ್ ಟ್ರಸ್ಟ್ ವತಿಯಿಂದ ನೋಟ್ ಪುಸ್ತಕ ವಿತರಿಸಿದ ಟ್ರಸ್ಟ್ ಅಧ್ಯಕ್ಷ, ಹೈದರಬಾದ್ ಹೋಟೆಲ್ ಉದ್ಯಮಿ ಮಾರಣಕಟ್ಟೆ ಕೃಷ್ಣಮೂರ್ತಿ ಮಂಜ ಅವರು ಮಾತನಾಡಿ, ಮಕ್ಕಳು ಆನ್‌ಲೈನ್ ಶಿಕ್ಷಣ ಪಡೆಯುತ್ತಿರುವ ಸಂದರ್ಭ ಇಡೀ ದಿನ ಮೊಬೈಲ್‌ನಲ್ಲಿ ಏನು ಮಾಡುತ್ತಿದ್ದಾರೆಂಬುದರ ಬಗ್ಗೆ ಪೋಷಕರು ಗಮನ ಹರಿಸಬೇಕು. ಮೊಬೈಲ್ ಸದ್ಬಳಕೆ ಆಗಬೇಕೇ ಹೊರತು ದುರ್ಬಳಕೆ ಆಗಬಾರದು. ಎಂ.ಎಸ್. ಮಂಜ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಶಾಲೆಯ ಅಭಿವೃದ್ಧಿಗೆ ಸಹಕಾರ ನೀಡುತ್ತಿದ್ದು ಊರಿನ ಶಾಲೆಯ ಅಭಿವೃದ್ದಿಗೆ ಪೋಷಕರು, ಶಿಕ್ಷಣಾಭಿಮಾನಿಗಳು ಕೂಡ ಗಮನ ಹರಿಸಬೇಕೆಂದರು.

Call us

ಈ ಸಂದರ್ಭ ಸಾಮಾಜಿಕ ಚಿಂತಕ, ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಸದಸ್ಯರಾದ ಡಾ. ಅತುಲ್‌ಕುಮಾರ್ ಶೆಟ್ಟಿ, ಮಾರಣಕಟ್ಟೆ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನದ ಅನುವಂಶೀಯ ಆಡಳಿತ ಮೊಕ್ತೇಸರ ಸದಾಶಿವ ಶೆಟ್ಟಿ, ತಾಲೂಕು ಪಂಚಾಯತ್ ಮಾಜಿ ಸದಸ್ಯ ಉದಯ ಜಿ.ಪೂಜಾರಿ, ಸರಕಾರಿ ಪ್ರೌಢಶಾಲೆ ಚಿತ್ತೂರು ಕಾರ್ಯಾಧ್ಯಕ್ಷ ರವೀಂದ್ರ ಶೆಟ್ಟಿ, ಚಿತ್ತೂರು ಪ್ರೌಢಶಾಲೆಯ ಪ್ರಭಾರ ಮುಖ್ಯ ಶಿಕ್ಷಕ ಜಗದೀಶ್ ಶೆಟ್ಟಿ, ಗ್ರಾಮ ಪಂಚಾಯತ್ ಮಾಜಿ ಸದಸ್ಯ ರಾಮಚಂದ್ರ ಮಂಜ ಮಾರಣಕಟ್ಟೆ, ಉದ್ಯಮಿ ಶಂಕರ ಭಟ್ ಮಾರಣಕಟ್ಟೆ, ಕರ್ನಾಟಕ ಬ್ಯಾಂಕ್ ಎಜಿಎಮ್ ರಾಜಗೋಪಾಲ, ಶಿಕ್ಷಣ ಸಂಯೋಜಕ ನಿತ್ಯಾನಂದ ಶೆಟ್ಟಿ, ಕ್ಷೇತ್ರ ಸಂಪನ್ಮೂಲ ವ್ಯಕ್ತಿ ನಾಗರಾಜ ಶೆಟ್ಟಿ ಪಸ್ಥಿತರಿದ್ದರು.

ನೂತನ ಶೌಚಾಲಯ ಕಟ್ಟಡಕ್ಕೆ 4,55,000 ಚೆಕ್‌ನ್ನು ಕರ್ನಾಟಕ ಬ್ಯಾಂಕ್ ವತಿಯಿಂದ ನೀಡಿದ ವ್ಯವಸ್ಥಾಪಕ ಮಹಾಬಲೇಶ್ವರ ಎಂ.ಎಸ್. ಅವರನ್ನು ಶಾಲಾ ವತಿಯಿಂದ ಸನ್ಮಾನಿಸಲಾಯಿತು.

ಎಸ್.ಡಿ.ಎಂ.ಸಿ ಅಧ್ಯಕ್ಷ ದಿವಾಕರ ಆಚಾರ್ಯ ಮಾರಣಕಟ್ಟೆ ಇವರು ಪ್ರಾಸ್ತಾವಿಕ ಮಾತುಗಳನ್ನಾಡಿದರು. ಶಾಲೆಯ ಪ್ರಭಾರ ಮುಖ್ಯ ಶಿಕ್ಷಕ ಬಾಲಕೃಷ್ಣ ಶೆಟ್ಟಿ ಸ್ವಾಗತಿಸಿ ವಂದಿಸಿದರು. ಸಹಶಿಕ್ಷಕ ಗುರುಪ್ರಸಾದ್ ಕಾರ್ಯಕ್ರಮ ನಿರೂಪಿಸಿದರು. ನಂತರ ಶಿಕ್ಷಕರಾದ ಗಣಪತಿ ಕಿಣಿ, ಗೋವಿಂದ ಶೆಟ್ಟಿ, ಗೀತಾ ಹಾಗೂ ಗೌರವ ಶಿಕ್ಷಕರುಗಳು ಆನ್‌ಲೈನ್ ತರಗತಿಯ ಕುರಿತು ಪೋಷಕರಿಗೆ ಮಾಹಿತಿ ನೀಡಿದರು.

Leave a Reply

Your email address will not be published. Required fields are marked *

ten − eight =