ಸರಸ್ವತಿ ವಿದ್ಯಾಲಯದಲ್ಲಿ ಅಪರಾಧ ತಡೆ ಮಾಸಾಚರಣೆ

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ನಮ್ಮ ಕಾನೂನು ಮತ್ತು ನೀತಿ ನಿಯಮಗಳ ಬಗೆಗೆ ಪ್ರತೀ ನಾಗರಿಕರಲ್ಲಿಯೂ ಕನಿಷ್ಠ ಪ್ರಜ್ಞೆ ಇರಬೇಕು.ಮತ್ತು ಈ ಕುರಿತಂತೆ ಸಮಾಜದಲ್ಲಿನ ಜನರಲ್ಲೂ ಜಾಗೃತಿ ಮೂಡಿಸುವಲ್ಲಿ ಎಲ್ಲರೂ ಪ್ರಯತ್ನಿಸಬೇಕು ಎಂದು ಗಂಗೊಳ್ಳಿ ಕರಾವಳಿ ಕಾವಲು ಪೋಲಿಸ್ ಠಾಣೆಯ ನಿರೀಕ್ಷಕರಾದ ಜಿ.ಎಮ್ ನಾಯ್ಕರ್ ಅಭಿಪ್ರಾಯಪಟ್ಟರು.

Call us

Call us

ಅವರು ಅಪರಾಧ ತಡೆ ಮಾಸಾಚರಣೆ ಅ೦ಗವಾಗಿ ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿನಲ್ಲಿ ಗಂಗೊಳ್ಳಿಯ ಕರಾವಳಿ ಕಾವಲು ಪೋಲಿಸ್ ಠಾಣೆಯು ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಘಟಕದ ಸಹಯೋಗದೊಂದಿಗೆ ಹಮ್ಮಿಕೊಳ್ಳಲಾಗಿದ್ದ ಕಾರ‍್ಯಕ್ರಮದಲ್ಲಿ ಕಾಲೇಜಿನ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದರು.

Call us

Call us

ಅಪರಾಧ ಕೃತ್ಯಗಳ ಬಗೆಗೆ ಕೆಟ್ಟ ಕುತೂಹಲವನ್ನು ಬೆಳೆಸಿಕೊಳ್ಳಬೇಡಿ. ಈ ವಿಷಯದಲ್ಲಿ ಒಮ್ಮೆ ಇಡುವ ತಪ್ಪು ಹೆಜ್ಜೆ ನಮ್ಮ ಇಡೀ ಜೀವನವನ್ನೇ ಬಲಿತೆಗೆದುಕೊಳ್ಳಬಹುದು. ಸ್ನೇಹಿತರನ್ನು ಆರಿಸಿಕೊಳ್ಳುವಾಗಲೂ ಎಚ್ಚರಿಕೆಯಿರಲಿ. ಎಂದು ಅವರು ಕಿವಿಮಾತು ಹೇಳಿದರು.

ಕಾರ‍್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಭಾರ ಪ್ರಾ೦ಶುಪಾಲರಾದ ಥಾಮಸ್ ಪಿ ಎ ವಹಿಸಿದ್ದರು. ರಾಷ್ಟ್ರೀಯ ಸೇವಾ ಯೋಜನಾಧಿಕಾರಿ ನಾರಾಯಣ್ ನಾಯ್ಕ್ ಗಂಗೊಳ್ಳಿ ಕರಾವಳಿ ಕಾವಲು ಪೋಲಿಸ್ ಠಾಣೆಯ ಸುರೇಂದ್ರ , ರಾಜೇಶ್, ಯುವರಾಜ ಮತ್ತು ಸಂತೋಷ್ ಉಪಸ್ಥಿತರಿದ್ದರು.

ವಿದ್ಯಾರ್ಥಿಗಳು ಮತ್ತು ಉಪನ್ಯಾಸಕ ವೃ೦ದದವರು ಭಾಗವಹಿಸಿದ್ದರು. ಉಪನ್ಯಾಸಕ ರಾಘವೇಂದ್ರ ಭಟ್ ಸ್ವಾಗತಿಸಿದರು.ಕನ್ನಡ ಉಪನ್ಯಾಸಕ ಸುಜಯೀಂದ್ರ ಹಂದೆ ಕಾರ‍್ಯಕ್ರಮ ನಿರ್ವಹಿಸಿದರು. ವಿದ್ಯಾರ್ಥಿನಿ ಅಕ್ಷತಾ ಧನ್ಯವಾದಗೈದರು.

 

Leave a Reply

Your email address will not be published. Required fields are marked *

2 × three =