ಸರಸ್ವತಿ ವಿದ್ಯಾಲಯದಲ್ಲಿ ಪರಿಸರ ಜಾಗೃತಿ ಕಾರ‍್ಯಕ್ರಮ

Call us

ಗಂಗೊಳ್ಳಿ: ಪರಿಸರ ರಕ್ಷಣೆ ಎನ್ನುವದು ಕೇವಲ ವೇದಿಕೆಗಳಿಗೆ ಸೀಮಿತವಾಗಬಾರದು. ನಮ್ಮ ಕಾಳಜಿ ಎಚ್ಚರಿಕೆ ಎಲ್ಲವೂ ಕಾರ‍್ಯರೂಪದಲ್ಲಿ ಮೂಡಿಬರಬೇಕು.ಪ್ರಕೃತಿಯೊಂದಿಗೆ ಅಭಿವೃದ್ಧಿಯ ಚಿಂತನೆ ಮತ್ತು ನಡೆಗಳು ನಮ್ಮದಾಗಬೇಕು ಎಂದು ಎಂದು ಸರಸ್ವತಿ ವಿದ್ಯಾಲಯದ ಆಡಳಿತ ಮಂಡಳಿಯ ಕಾರ‍್ಯದರ್ಶಿ ಎನ್ ಸದಾಶಿವ ನಾಯಕ್ ಅಭಿಪ್ರಾಯಪಟ್ಟರು.

Call us

ಅವರು ಇತ್ತೀಚೆಗೆ ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿನಲ್ಲಿ ಪದವಿಪೂರ್ವ ಶಿಕ್ಷಣ ಇಲಾಖೆ ಮತ್ತು ಇಲ್ಲಿನ ರಾಷ್ಟ್ರೀಯ ಸೇವಾ ಯೋಜನಾ ಘಟಕದ ಜಂಟಿ ಆಶ್ರಯದಲ್ಲಿ ನಡೆದ ಪರಿಸರ ಜಾಗೃತಿ ಕುರಿತಾದ ಕಾರ‍್ಯಕ್ರಮದಲ್ಲಿ ಮಾತನಾಡಿದರು.

Call us

ಸರಸ್ವತಿ ವಿದ್ಯಾಲಯ ಕಾಲೇಜಿನ ಪ್ರಾಂಶುಪಾಲ ಆರ್ ಎನ್ ರೇವಣ್‌ಕರ್ ಅಧ್ಯಕ್ಷತೆ ವಹಿಸಿದ್ದರು. ರಾಷ್ಟ್ರೀಯ ಸೇವಾ ಯೋಜನಾಧಿಕಾರಿ ನಾರಾಯಣ ನಾಯ್ಕ್ ಅವರು ಪ್ರಾಸ್ತಾವಿಕ ಮಾತುಗಳನ್ನಾಡಿದರು.ವಿದ್ಯಾರ್ಥಿನಿ ವಿದ್ಯಾ ಸ್ವಾಗತಿಸಿದರು. ನವ್ಯಶ್ರೀ ಪ್ರಾರ್ಥಿಸಿದರು. ಅನುಷಾ ಕಾರ‍್ಯಕ್ರಮ ನಿರೂಪಿಸಿದರು.ನಿಖಿಲ್ ಧನ್ಯವಾದ ಅರ್ಪಿಸಿದರು.

ವರದಿ ; ನರೇಂದ್ರ ಎಸ್ ಗಂಗೊಳ್ಳಿ

Leave a Reply

Your email address will not be published. Required fields are marked *

fourteen − four =