ಸರಸ್ವತಿ ವಿದ್ಯಾಲಯದಲ್ಲಿ ರಾಷ್ಟ್ರೀಯ ಸೇವಾ ಯೋಜನೆ ವಾರ್ಷಿಕ ಚಟುವಟಿಕೆಗಳ ಉದ್ಘಾಟನೆ

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಗಂಗೊಳ್ಳಿ:
ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ಚಟುವಟಿಕೆಗಳು ಉದ್ಘಾಟನಾ ಕಾರ್ಯಕ್ರಮವು ಇತ್ತೀಚೆಗೆ ಗಂಗೊಳ್ಳಿಯ ಗುಜ್ಜಾಡಿ ಗೋಪಾಲ ನಾಯಕ್ ರೋಟರಿ ಇಂಡೋರ್ ಸ್ಟೇಡಿಯಂನಲ್ಲಿ ಜರಗಿತು.

Click Here

Call us

Call us

ಕಾರ್ಯಕ್ರಮದ ಉದ್ಘಾಟನೆಯನ್ನು ರೋಟರಿ ಕ್ಲಬ್ ಗಂಗೊಳ್ಳಿಯ ಅಧ್ಯಕ್ಷರಾದ ರಾಜೇಶ್ ಎಂ. ಜಿ ನೆರವೇರಿಸಿದರು.

Click here

Click Here

Call us

Visit Now

ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ್ದ ಲಯನ್ಸ್ ಅಕ್ಷಯ ಹೆಗ್ಡೆ ಮೊಳಹಳ್ಳಿ ಸ್ವಯಂಸೇವಕರನ್ನುಉದ್ದೇಶಿಸಿ ರಾಷ್ಟ್ರೀಯ ಸೇವಾ ಯೋಜನೆ ಯಲ್ಲಿ ತೊಡಗಿಸಿಕೊಳ್ಳುವ ಮೂಲಕ ವಿದ್ಯಾರ್ಥಿಗಳು ಸಹಬಾಳ್ವೆ ಭಾವೈಕ್ಯತೆ ಜಾತ್ಯಾತೀತ ಮನೋಭಾವ ಮತ್ತು ನಾಯಕತ್ವ ಗುಣಗಳನ್ನು ಬೆಳೆಸಿಕೊಳ್ಳಲು ಸಾಧ್ಯ. ವ್ಯಕ್ತಿತ್ವ ನಿರ್ಮಾಣದಲ್ಲಿ ರಾಷ್ಟ್ರೀಯ ಸೇವಾ ಯೋಜನೆಯ ಪ್ರಮುಖ ಪಾತ್ರವನ್ನು ವಹಿಸುತ್ತದೆ ಎಂದು ಹೇಳಿದರು.

ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲೆ ಕವಿತಾ ಎಂ.ಸಿ ಅಧ್ಯಕ್ಷತೆ ವಹಿಸಿದ್ದರು. ಸಂಸ್ಕೃತ ಉಪನ್ಯಾಸಕರಾದ ವೆಂಕಟೇಶಮೂರ್ತಿ ಎನ್.ಸಿ, ಶ್ರೀಪತಿ ಭಟ್, ವಿದ್ಯಾರ್ಥಿ ಪ್ರತಿನಿಧಿಗಳಾದ ಪ್ರಭಾಕರ್ ಪೈ ಮತ್ತು ದೀಕ್ಷಾ ಉಪಸ್ಥಿತರಿದ್ದರು.

ರಾಷ್ಟ್ರೀಯ ಸೇವಾ ಯೋಜನಾಧಿಕಾರಿ ಸುಗುಣ ಆರ್ ಕೆ ಪ್ರಾಸ್ತಾವಿಕ ನುಡಿಗಳನ್ನಾಡಿದರು. ರಕ್ಷಿತಾ ಆರ್ ಪೂಜಾರಿ ಹಾಗೂ ಪೂಜಾ ಡಿ ಪುತ್ರನ್ ಅತಿಥಿಗಳನ್ನು ಪರಿಚಯಿಸಿದರು .ಪ್ರತೀಕ್ಷಾ, ಮಂಜುಳಾ ಮತ್ತು ಶ್ರೇಯಾ ಎನ್ಎಸ್ಎಸ್ ಗೀತೆಯನ್ನು ಹಾಡಿದರು. ಸ್ವಯಂಸೇವಕಿ ಧನ್ಯ ಸ್ವಾಗತಿಸಿದರು. ಸೌಮ್ಯ ಪೂಜಾರಿ ನಿರೂಪಿಸಿದರು. ಸೌಮ್ಯ ವಂದಿಸಿದರು.

Call us

Leave a Reply

Your email address will not be published. Required fields are marked *

fifteen − 15 =