ಸರಸ್ವತಿ ವಿದ್ಯಾಲಯ ಆಂಗ್ಲ ಮಾಧ್ಯಮ ಶಾಲೆಯ ವಾರ್ಷಿಕೋತ್ಸವ

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಗಂಗೊಳ್ಳಿ: ವಿದ್ಯಾರ್ಥಿಗಳಿಗೆ ಶಿಕ್ಷಕರ ಮೇಲೆ ವಿಶ್ವಾಸವಿರಬೇಕು. ತರಗತಿಗಳಲ್ಲಿ ಕಲಿಸಿದ ಪಾಠ ಪ್ರವಚನಗಳನ್ನು ದಿನನಿತ್ಯ ಅಭ್ಯಾಸ ಮಾಡಬೇಕು. ತಿಳಿಯದ ವಿಷಯಗಳನ್ನು ಅಧ್ಯಾಪಕರಲ್ಲಿ ಕೇಳಿ ತಿಳಿದುಕೊಳ್ಳಬೇಕು. ಮಕ್ಕಳಿಗೆ ಯಾವುದೇ ವಿಷಯದಲ್ಲಿ ಬಲವಂತ ಮಾಡದೆ ಅವರಿಗೆ ಕಲಿಯಲು ಪ್ರೋತ್ಸಾಹ ನೀಡಬೇಕು. ಮಕ್ಕಳನ್ನು ಟ್ಯೂಷನ್ ತರಗತಿಗಳಿಗೆ ಕಳುಹಿಸುವುದರಿಂದ ಅವರಲ್ಲಿ ಗೊಂದಲ ಇನ್ನಷ್ಟು ಹೆಚ್ಚಾಗಿ ಅವರು ವಿದ್ಯಾಭ್ಯಾಸದಲ್ಲಿ ಹಿಂದುಳಿಯುವ ಸಾಧ್ಯತೆಗಳಿದೆ ಎಂದು ಅಂಪಾರು ಸಂಜಯ ಗಾಂಧಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸಹಶಿಕ್ಷಕಿ ಯು. ಗೀತಾ ಶ್ಯಾನುಭಾಗ್ ಹೇಳಿದರು.

Call us

ಅವರು ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿನ ವಠಾರದಲ್ಲಿ ಜರಗಿದ ಸರಸ್ವತಿ ವಿದ್ಯಾಲಯ ಆಂಗ್ಲ ಮಾಧ್ಯಮ ಶಾಲೆಯ ವಾರ್ಷಿಕೋತ್ಸವ ಸಮಾರಂಭದಲ್ಲಿ ಅತಿಥಿಯಾಗಿ ಮಾತನಾಡಿದರು. ಯು. ರವೀಂದ್ರ ಶ್ಯಾನುಭಾಗ್ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ಶಾಲೆಯ ಪ್ರಾಕ್ತನ ವಿದ್ಯಾರ್ಥಿ ಶ್ರೀಕಾಂತ ಶ್ಯಾನುಭಾಗ್ ಬೆಂಗಳೂರು ಸ್ವಸ್ಥಿವಾಚನಗೈದರು. ಗಂಗೊಳ್ಳಿಯ ಜಿಎಸ್‌ವಿಎಸ್ ಅಸೋಸಿಯೇಶನ್ ಅಧ್ಯಕ್ಷ ಡಾ.ಕಾಶೀನಾಥ ಪೈ, ಕಾರ್ಯದರ್ಶಿ ಎಚ್.ಗಣೇಶ ಕಾಮತ್, ಎಸ್.ವಿ.ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲೆ ಕವಿತಾ ಎಂ.ಸಿ., ಶಾಲೆಯ ಶಿಕ್ಷಕ-ರಕ್ಷಕ ಸಮಿತಿಯ ಉಪಾಧ್ಯಕ್ಷ ಬಿ.ರಾಘವೇಂದ್ರ ಪೈ ಶುಭ ಹಾರೈಸಿದರು. ಇದೇ ಸಂದರ್ಭ ಅನಘಾ ಪೈ ಮತ್ತು ಸುಕೇಶ ವಿ.ದೇವಾಡಿಗ ಅವರಿಗೆ ಉತ್ತಮ ಹೊರಹೋಗುವ ವಿದ್ಯಾರ್ಥಿ ಪುರಸ್ಕಾರ ನೀಡಿ ಗೌರವಿಸಲಾಯಿತು. ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ಮತ್ತು ವಿವಿಧ ಕ್ರೀಡಾಕೂಟಗಳಲ್ಲಿ ಭಾಗವಹಿಸಿದ ವಿದ್ಯಾರ್ಥಿಗಳಿಗೆ ಬಹುಮಾನ ನೀಡಿ ಗೌರವಿಸಲಾಯಿತು.ಸರಸ್ವತಿ ವಿದ್ಯಾಲಯ ಆಂಗ್ಲ ಮಾಧ್ಯಮ ಕಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕಿ ಶಾಂತಿ ಡಿ’ಕೋಸ್ತಾ, ಶಾಲೆಯ ವಿದ್ಯಾರ್ಥಿ ನಾಯಕ ವಿಖೇಶ್ ಉಪಸ್ಥಿತರಿದ್ದರು.

ಶಾಲೆಯ ಸಂಚಾಲಕ ಎನ್.ಸದಾಶಿವ ನಾಯಕ್ ಸ್ವಾಗತಿಸಿದರು. ಶಾಲೆಯ ಮುಖ್ಯಶಿಕ್ಷಕ ರಾಘವೇಂದ್ರ ಶೇರುಗಾರ್ ವರದಿ ವಾಚಿಸಿದರು. ವಿದ್ಯಾರ್ಥಿಗಳಾದ ಪ್ರಿಯಾ ಜಿ.ಪೈ ಸಂದೇಶ ವಾಚಿಸಿದರು. ಪ್ರಥ್ವಿಶ್ರೀ, ನಾಗಶ್ರೀ ಮತ್ತು ಪ್ರಸನ್ನಾ ಪೈ ಅತಿಥಿಗಳನ್ನು, ನೇಹಾ ನಾಯಕ್ ಮತ್ತು ನೀಲ್ ಕ್ರಿಸ್ಟಿ ಉತ್ತಮ ವಿದ್ಯಾರ್ಥಿಗಳನ್ನು ಪರಿಚಯಿಸಿದರು. ಅನಘಾ ಪೈ ಮತ್ತು ಸ್ನೇಹಾ ಕಾರ್ಯಕ್ರಮ ನಿರೂಪಿಸಿದರು. ಸಾಗರ್ ವಂದಿಸಿದರು.

Leave a Reply

Your email address will not be published. Required fields are marked *

11 + 3 =