ಸರ್ಕಾರಿ ಗೋಶಾಲೆಗಳನ್ನು ಶೀಘ್ರದಲ್ಲಿ ನಿರ್ಮಿಸಲು ಜಿಲ್ಲಾಧಿಕಾರಿ ಸೂಚನೆ

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಉಡುಪಿ,ಜೂ.17:
ಜಿಲ್ಲೆಯಲ್ಲಿ ಸರ್ಕಾರಿ ಗೋಶಾಲೆಯನ್ನು ಇತರರ ಸಹಭಾಗಿತ್ವದಲ್ಲಿ ರಾಜ್ಯಕ್ಕೇ ಮಾದರಿಯಾಗುವ ರೀತಿಯಲ್ಲಿ, ಗೋವುಗಳಿಗೆ ಅಗತ್ಯವಿರುವ ಎಲ್ಲಾ ರೀತಿಯ ಸೌಲಭ್ಯಗಳನ್ನು ಒದಗಿಸುವುದರೊಂದಿಗೆ ಶೀಘ್ರದಲ್ಲಿ ನಿರ್ಮಿಸುವಂತೆ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ. ಸೂಚಿಸಿದರು.

Call us

Call us

ಅವರು ಇಂದು ಜಿಲ್ಲಾಧಿಕಾರಿ ಕಚೇರಿ ಕೋರ್ಟ್ಹಾಲ್ ನಲ್ಲಿ ನಡೆದ, ಜಿಲ್ಲಾ ಪ್ರಾಣಿದಯಾ ಸಂಘದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಪ್ರಸಕ್ತ ಆಯವ್ಯಯದಲ್ಲಿ ಗೋಶಾಲೆಯನ್ನು ಪ್ರಾರಂಭಿಸಲು ಸರ್ಕಾರ ಘೋಷಿಸಿ, ಸಾಕಷ್ಟು ಅನುದಾನವನ್ನು ನೀಡಿದೆ. ಇದಕ್ಕೆ ಪೂರಕವಾಗಿ ಜಿಲ್ಲಾಡಳಿತ ಅಗತ್ಯವಿರುವ ಭೂಮಿಯನ್ನು ಸಹ ನೀಡಿದೆ , ಗೋಶಾಲೆಯು ಆಧುನಿಕ ಶೈಲಿಯಲ್ಲಿ, ವೈಜ್ಞಾನಿಕ ರೀತಿಯ ಅಗತ್ಯ ಮೂಲಭೂತ ಸೌಕರ್ಯಗಳನ್ನು ಲಭ್ಯವಾಗುವ ಹಾಗೆ ನೀಲಿನಕ್ಷೆಯನ್ನು ತಯಾರಿಸಿ, ಗೋಶಾಲೆಯನ್ನು ನಿರ್ಮಿಸಿ, ಶೀಘ್ರದಲ್ಲಿಯೇ ಪ್ರಾರಂಭಿಸಬೇಕೆAದು ಪಶು ಸಂಗೋಪನಾ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

Call us

Call us

ಹೆಬ್ರಿ ತಾಲೂಕಿನ ಕೆರೆಬೆಟ್ಟು ಗ್ರಾಮದ ಸರ್ವೇ ನಂ.79/2 ರಲ್ಲಿ 13.24 ಎಕ್ರೆ ಜಮೀನನ್ನು ಹಾಗೂ ಕುಂದಾಪುರದ ಗೋಳಿಹೊಳೆ ಗ್ರಾಮದ ಸರ್ವೆ ನಂ.279 ರಲ್ಲಿ 9.85 ಎಕ್ರೆ ಜಮೀನನ್ನು ಸರ್ಕಾರಿ ಗೋಶಾಲೆ ನಿರ್ಮಿಸಲು ಕಾಯ್ದಿರಿಸಲಾಗಿದೆ. ಗೋಶಾಲೆಗೆ ತಡೆ ಬೇಲಿ, ಕೆರೆ ನಿರ್ಮಾಣದ ಕಾಮಗಾರಿಗಳನ್ನು ಮಹಾತ್ಮ ಗಾಂಧೀ ಉದ್ಯೋಗ ಖಾತ್ರಿ ಯೋಜನೆಯಡಿ ಕೈಗೊಳ್ಳಬೇಕೆಂದು ತಿಳಿಸಿದರು.

ಸರ್ಕಾರ ಜಾರಿಗೆ ತಂದಿರುವ ಗೋಹತ್ಯೆ ನಿಷೇಧ ಕಾಯ್ದೆಯ ಬಗ್ಗೆ ಸಾರ್ವಜನಿಕರಿಗೆ ಅರಿವು ಮೂಡಿಸುವುದರೊಂದಿಗೆ ಅದರ ಸಮರ್ಪಕ ಅನುಷ್ಠಾನಗೊಳಿಸಬೇಕು ಎಂದ ಅವರು ಜಿಲ್ಲೆಯಲ್ಲಿ ಈಗಾಗಲೇ 12 ಗೋಶಾಲೆಯನ್ನು ಖಾಸಗಿ ಸಂಸ್ಥೆಗಳು ನಡೆಸುತ್ತಿದ್ದು, ಇಲ್ಲಿ 2660 ಕ್ಕೂ ಹೆಚ್ಚು ಗೋವುಗಳು ಆಶ್ರಯ ಪಡೆದಿವೆ ಎಂದರು.

ಜಾನುವಾರುಗಳನ್ನು ರಕ್ಷಣೆ ಮಾಡುವ ರೀತಿಯಲ್ಲಿಯೇ ಇತರೆ ಪ್ರಾಣಿಗಳನ್ನು ರಕ್ಷಿಸಲು ಗೋಶಾಲೆ ಮಾದರಿಯಲ್ಲಿಯೇ ಪ್ರಾಣಿ ರಕ್ಷಣಾ ಶೆಲ್ಟರ್ ಗಳನ್ನು ಪ್ರಾರಂಬಿಸಲು ಪ್ರಾಣಿಪ್ರಿಯರು ಹಾಗೂ ಅಧಿಕಾರಿಗಳು ಚಿಂತಿಸಬೇಕು ಎಂದರು.

ಸರ್ಕಾರದಿಂದ ಜಿಲ್ಲಾ ಪ್ರಾಣಿದಯಾ ಸಂಘಕ್ಕೆ ಪ್ರಾಣಿಗಳ ಕಲ್ಯಾಣಕ್ಕೆ ಬಿಡುಗಡೆಯಾಗಿರುವ ಅನುದಾನವನ್ನು ಬಳಕೆ ಮಾಡಿಕೊಳ್ಳುವುರೊಂದಿಗೆ ಅವುಗಳ ರಕ್ಷಣೆಗಾಗಿ ಜಾರಿಗೆ ತಂದಿರುವ ಕಾಯ್ದೆಗಳು ಮತ್ತು ನಿಯಮಗಳ ಬಗ್ಗೆ ಜಾಗೃತಿ ಅಭಿಯಾನಗಳನ್ನು ಜಿಲ್ಲೆಯಾದ್ಯಂತ ಪರಿಣಾಕಾರಿಯಾಗಿ ಅನುಷ್ಠಾನಗೊಳಿಸುವಂತೆ ತಿಳಿಸಿದರು.

ಜಿಲ್ಲಾ ಪಂಚಾಯತ್ ಸಿಇಓ ಪ್ರಸನ್ನ ಹೆಚ್. ಮಾತನಾಡಿ, ಹೆಬ್ರಿಯ ಕೆರೆಬೆಟ್ಟು ವಿನ ಗೋಶಾಲೆ ಗೆ ನೀರಿನ ಸೌಲಭ್ಯವನ್ನು ಕಲ್ಪಿಸಲು ಕೊಳವೆ ಬಾವಿಯನ್ನು ಕೊರೆಸಲಾಗಿದ್ದರೂ , ನೀರು ದೊರೆತಿಲ್ಲ ಇಲ್ಲಿಗೆ ಅಗತ್ಯವಿರುವ ನೀರನ್ನು ಜಲ ಜೀವನ್ ಮಿಷನ್ ಯೋಜನೆಯಡಿ ಕಲ್ಪಿಸಲಾಗುವುದು ಎಂದರು.

ಗೋಶಾಲೆಗಳ ನಿರ್ವಹಣೆಗೆ ಸರ್ಕಾರವನ್ನು ಎದುರುನೋಡದೇ ಅಲ್ಲಿಯೇ ಬರುವ ಉತ್ಪನ್ನಗಳಿಂದ ನಿರ್ವಹಣೆಯನ್ನು ಮಾಡುವಬಗ್ಗೆ ಯೋಜನೆಗಳನ್ನು ರೂಪಿಸಿ, ಗೋಶಾಲೆಗಳು ಸ್ವಾವಲಂಬನೆಗೊಳಿಸಿಕೊಳ್ಳಬೇಕೆಂದು ಸಲಹೆ ನೀಡಿದರು.

ಸಭೆಯಲ್ಲಿ ಪಶುಪಾಲನೆ ಇಲಾಖೆ ಉಪ ನಿರ್ದೇಶಕ ಡಾ.ಶಂಕರ್ ಶೆಟ್ಟಿ , ಜಿಲ್ಲೆಯ ವಿವಿಧ ಶಾಲೆಗಳ ಮುಖ್ಯಸ್ಥರು ಜಿಲ್ಲೆಯ ಪ್ರಾಣಿದಯಾ ಸಂಘದ ಸದಸ್ಯರು ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

two × 3 =