ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಸುದ್ದಿ ಹರಿಬಿಟ್ಟವರ ವಿರುದ್ದ ಕಾನೂನು ಕ್ರಮಕ್ಕೆ ಜಿಲ್ಲಾಡಳಿದಿಂದ ದೂರು

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಉಡುಪಿ,ಜು.7:
ಹವಾಮಾನ ಇಲಾಖೆಯ ಮುನ್ಸೂಚನೆ ಹಾಗೂ ಜಿಲ್ಲೆಯಲ್ಲಿ ಆಗುತ್ತಿರುವ ಮಳೆಯ ಪರಿಸ್ಥಿತಿಯ ಅನುಗುಣವಾಗಿ ಶಾಲಾ ಕಾಲೇಜುಗಳಿಗೆ ಜಿಲ್ಲಾ ದಂಡಾಧಿಕಾರಿ ಹಾಗೂ ಜಿಲ್ಲಾಧಿಕಾರಿಗಳು ರಜೆಯನ್ನು ಘೋಷಿಸಿ, ಆದೇಶಿಸುತ್ತಿರುವ ಆದೇಶ ಪ್ರತಿಯಲ್ಲಿನ ದಿನಾಂಕಗಳನ್ನು ತಿದ್ದುಪಡಿ ಮಾಡಿ , ಸಾಮಾಜಿಕ ಜಾಲ ತಾಣಗಳಲ್ಲಿ ಸುಳ್ಳು ಸುದ್ದಿಗಳನ್ನು ಹಬ್ಬಿಸುತ್ತಿರುವ ಕಿಡಿಗೇಡಿಗಳ ವಿರುದ್ದ ಕಾನೂನಿನಡಿಯಲ್ಲಿ ಪ್ರಕರಣ ದಾಖಲಿಸಿ ಕ್ರಮ ಕೈಗೊಳ್ಳಲು ಜಿಲ್ಲಾಡಳಿತ ನಗರದ ಸೈಬರ್ ಠಾಣೆಯಲ್ಲಿ ದೂರು ದಾಖಲಿಸಿದೆ.

Call us

Call us

ಜಿಲ್ಲಾ ದಂಡಾಧಿಕಾರಿಗಳು ದಿನಾಂಕ.1-7-2022 ರಂದು ಜಿಲ್ಲಾ ವ್ಯಾಪ್ತಿಯಲ್ಲಿ ಮಳೆ ಹೆಚ್ಚಳವಾಗಿರುವ ಕಾರಣ ಹಾಗೂ ಹವಾಮಾನ ಇಲಾಖೆಯ ಮುನ್ಸೂಚನೆ ಆಧರಿಸಿ ರಜೆಯನ್ನು ಘೋಷಿಸಿ 2022 ರ ಜೂನ್ 30 ರಂದು ಸಂಜೆ ಹೊರಡಿಸಿದ್ದ ಆದೇಶದ ಪ್ರತಿಯನ್ನು ಸಮಾಜದಲ್ಲಿನ ಕೆಲವು ಕಿಡಗೇಡಿಗಳು ಆದೇಶದ ದಿನಾಂಕವನ್ನು ಡಿಜಿಟಲೀಕರಣದಿಂದ ತಿದ್ದುಪಡಿ ಮಾಡಿ 5-7-2022 ರಂದು ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ ಎಂಬ ಆದೇಶದ ಕಾನೂನುಬಾಹಿರ ನಕಲಿ ತಿದ್ದುಪಡಿ ಪತ್ರವನ್ನು 4-7-2022 ರ ಸಂಜೆ ಸಾಮಾಜಿಕ ಜಾಲತಾಣದಲ್ಲಿ ಪ್ರಸರಣಗೊಳಿಸಿ ಸಾರ್ವಜನಿಕರಲ್ಲಿ ಗೊಂದಲ ಸೃಷ್ಠಿಸಿರುತ್ತಾರೆ. ಆದರೆ ಅಂದು ಸಂಜೆ ಹೆಬ್ರಿ ತಾಲೂಕಿನ ವ್ಯಾಪ್ತಿಗೆ ಮಾತ್ರ ರಜೆ ಘೋಷಿಸಿ ಜಿಲ್ಲಾಡಳಿದಿಂದ ರಜೆ ಘೋಷಿಸಲಾಗಿತ್ತು.

Call us

Call us

ಇಂತಹ ಸಮಾಜಘಾತುಕ ವ್ಯಕ್ತಿಗಳ ವಿರುದ್ದ ಪ್ರಕರಣ ದಾಖಲಿಸಿ, ತನಿಖೆ ನಡೆಸಿ, ಕಾನೂನಿನಡಿ ಕ್ರಮ ಕೈಗೊಳ್ಳಲು ಜಿಲ್ಲಾ ಸೆನ್ ಪೊಲೀಸ್ ಠಾಣೆಗೆ ದೂರು ದಾಖಲಿಸಲಾಗಿದ್ದು, ಎಫ್.ಐ.ಆರ್. ದಾಖಲಾಗಿದೆ. ಈ ಪ್ರಕರಣ ಬಗ್ಗೆ ಅನುಮಾನಾಸ್ಪದ ವ್ಯಕ್ತಿಗಳಿದ್ದಲ್ಲಿ ಮಾಹಿತಿಯನ್ನು ಸೆನ್ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ದೂ.ಸಂ – 9480805410 ಗೆ ನೀಡುವಂತೆ ಕೋರಿದೆ.

Leave a Reply

Your email address will not be published. Required fields are marked *

seventeen − 12 =