ಕುಂದಾಪ್ರ ಡಾಟ್ ಕಾಂ ಸುದ್ದಿ.
ಗಂಗೊಳ್ಳಿ: ಗ್ರಾಮ ಪಂಚಾಯತ್‌ನ ಮಹಾತ್ಮಾ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆಯ 2020-21ನೇ ಸಾಲಿನ ಪ್ರಥಮ ಹಾಗೂ ದ್ವಿತೀಯ ಮತ್ತು 14ನೇ ಹಣಕಾಸು ಆಯೋಗದ ಸಾಮಾಜಿಕ ಪರಿಶೋಧನೆಯ ವಿಶೇಷ ಗ್ರಾಮಸಭೆ ಗಂಗೊಳ್ಳಿ ಗ್ರಾಮ ಪಂಚಾಯತ್ ಸಭಾಭನದಲ್ಲಿ ನಡೆಯಿತು.
ಕುಂದಾಪುರ ಕಾರ್ಮಿಕ ಇಲಾಖೆಯ ಕಾರ್ಮಿಕ ನಿರೀಕ್ಷಕ ಪ್ರಸನ್ನಕುಮಾರ್ ಅಧ್ಯಕ್ಷತೆ ವಹಿಸಿದ್ದರು. ಕುಂದಾಪುರ ತಾಲೂಕು ಪಂಚಾಯತ್‌ನ ಸಾಮಾಜಿಕ ಪರಿಶೋಧನೆಯ ತಾಲೂಕು ಸಂಯೋಜಕ ಸುಕುಮಾರ ಬಿ. ಮಾಹಿತಿ ನೀಡಿದರು. ಗಂಗೊಳ್ಳಿ ಗ್ರಾಮ ಪಂಚಾಯತ್ ಅಧ್ಯಕ್ಷ ಶ್ರೀನಿವಾಸ ಖಾರ್ವಿ, ಉಪಾಧ್ಯಕ್ಷೆ ಪ್ರೇಮಾ ಸಿ.ಪೂಜಾರಿ, ಜಿಪಂ ಸದಸ್ಯೆ ಶೋಭಾ ಜಿ.ಪುತ್ರನ್, ಗಂಗೊಳ್ಳಿ ಗ್ರಾಪಂ ಸದಸ್ಯರು, ಯೋಜನೆಯ ಫಲಾನುಭವಿಗಳು ಮತ್ತಿತರರು ಉಪಸ್ಥಿತರಿದ್ದರು. ಪಿಡಿಒ ಚಂದ್ರಶೇಖರ ಸ್ವಾಗತಿಸಿದರು. ಕಾರ್ಯದರ್ಶಿ ದಿನೇಶ ಶೇರುಗಾರ್ ವಂದಿಸಿದರು.