ಸಾಮೂಹಿಕ ಸರಳ ವಿವಾಹವಾಗುವ ಪ.ಜಾತಿಯ ಯುವಕ, ಯುವತಿಯರಿಗೆ ಪ್ರೋತ್ಸಾಹಧನ: ಅರ್ಜಿ ಆಹ್ವಾನ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಉಡುಪಿ: ಸಮಾಜ ಕಲ್ಯಾಣ ಇಲಾಖೆಯ ಮೂಲಕ ಪರಿಶಿಷ್ಟ ಜಾತಿಯ ಯುವಕ/ ಯುವತಿಯರು ಸಾಮೂಹಿಕ ಸರಳ ವಿವಾಹ ಕಾರ್ಯಕ್ರಮದಡಿ ವಿವಾಹವಾದಲ್ಲಿ ಪ್ರೋತ್ಸಾಹಧನ ನೀಡುವ ಕಾರ್ಯಕ್ರಮವನ್ನು ಅನುಷ್ಟಾನ ಮಾಡಲಾಗುತ್ತಿದ್ದು, ಈ ಯೋಜನೆಯ ಅರ್ಹ ಫಲಾನುಭವಿಗಳಿಗೆ ತಲಾ 50,000 ರೂ. ಗಳ ಪ್ರೋತ್ಸಾಹಧನ ನೀಡಲು ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿಯನ್ನು ಇಲಾಖಾ ವೆಬ್ಸೈಟ್ https://www.sw.kar.nic.in/ ನಲ್ಲಿ ಸಲ್ಲಿಸಿ, ಸಂಬಂಧಿಸಿದ ಸೂಕ್ತ ದಾಖಲೆಗಳನ್ನು ಉಪ ನಿರ್ದೇಶಕರ ಕಚೇರಿ, ಸಮಾಜ ಕಲ್ಯಾಣ ಇಲಾಖೆ, ರಜತಾದ್ರಿ, ಮಣಿಪಾಲ, ಉಡುಪಿ (ದೂ.ಸಂಖ್ಯೆ: 0820-2574892) ಕಚೇರಿಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರನ್ನು ಸಂಪರ್ಕಿಸುವಂತೆ ಇಲಾಖೆಯ ಪ್ರಕಟಣೆ ತಿಳಿಸಿದೆ.

ಮರು ಮದುವೆಯಾಗುವ ಪ.ಜಾತಿಯ ವಿಧವೆಯರಿಗೆ ಪ್ರೋತ್ಸಾಹ ಧನ: ಅರ್ಜಿ ಆಹ್ವಾನ
ಸಮಾಜ ಕಲ್ಯಾಣ ಇಲಾಖೆಯ ಮೂಲಕ ಮರು ಮದುವೆಯಾಗುವ ಪರಿಶಿಷ್ಟ ಜಾತಿಯ ವಿಧವೆಯರಿಗೆ ಪ್ರೋತ್ಸಾಹಧನ ನೀಡುವ ಕಾರ್ಯಕ್ರಮವನ್ನು ಅನುಷ್ಟಾನ ಮಾಡಲಾಗುತ್ತಿದ್ದು, ಈ ಯೋಜನೆಯಡಿಯಲ್ಲಿ ಅರ್ಹ ಫಲಾನುಭವಿಗಳಿಗೆ ತಲಾ 3 ಲಕ್ಷ ರೂ.ಗಳ ಪ್ರೋತ್ಸಾಹಧನ ನೀಡಲು ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿಯನ್ನು ಇಲಾಖಾ ವೆಬ್ಸೈಟ್ https://www.sw.kar.nic.in/ ನಲ್ಲಿ ಸಲ್ಲಿಸಿ, ಸಂಬಂಧಿಸಿದ ಸೂಕ್ತ ದಾಖಲೆಗಳನ್ನು ಉಪ ನಿರ್ದೇಶಕರ ಕಚೇರಿ, ಸಮಾಜ ಕಲ್ಯಾಣ ಇಲಾಖೆ, ರಜತಾದ್ರಿ, ಮಣಿಪಾಲ (ದೂರವಾಣಿ ಸಂಖ್ಯೆ: 0820-2574892) ಕಚೇರಿಗೆ ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗಾಗಿ ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರನ್ನು ಸಂಪರ್ಕಿಸುವಂತೆ ಇಲಾಖೆಯ ಪ್ರಕಟಣೆ ತಿಳಿಸಿದೆ.

 

Leave a Reply

Your email address will not be published. Required fields are marked *

six + 15 =