ಸಾಲಿಗ್ರಾಮ: ಕಾರು ಢಿಕ್ಕಿಯಾಗಿ ಸೈಕಲ್ ಸವಾರನ ಸಾವು

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕೋಟ: ಸಾಲಿಗ್ರಾಮ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಬೆಳಂಬೆಳಿಗ್ಗೆ ರಸ್ತೆ ಅಪಘಾತ ಸಂಭವಿಸಿದ್ದು, ಹಂಗಾರಕಟ್ಟೆ ಮೂಲದ ವ್ಯಕ್ತಿಯೋರ್ವರು ಮೃತರಾಗಿದ್ದಾರೆ. ಸಾಸ್ತಾನ ಕಡೆಯಿಂದ ಸಾಲಿಗ್ರಾಮದ ಕಡೆಗೆ ಸೈಕಲ್‌ನಲ್ಲಿ ಸಾಗುತ್ತಿದ್ದ ಕೃಷ್ಣ (45) ಅವರಿಗೆ ಹಿಂದಿನಿಂದ ಬಂದ ಕಾರು ಢಿಕ್ಕಿ ಹೊಡೆದ ಪರಿಣಾಮ, ಸೈಕಲ್ ಸವಾರ ಸ್ಥಳದಲ್ಲೆ ಮೃತಪಟ್ಟಿದ್ದಾರೆ.

Call us

Call us

Call us

ಪದ್ಮನಾಭ ಹಾಗೂ ಕೃಷ್ಣ ಎಂಬುವವರೊಂದಿಗೆ ಹಂಗಾರಕಟ್ಟೆಯಿಂದ ಪಾರಂಪಳ್ಳಿಗೆ ಮೀನು ಹಿಡಿಯುವ ಉದ್ದೇಶಕ್ಕೆ ಶನಿವಾರ ಮುಂಜಾನೆ ೬ರ ಸುಮಾರಿಗೆ ಸೈಕಲಿನಲ್ಲಿ ಹೋಗುತ್ತಿದ್ದಾಗ, ವಿಶ್ವಕರ್ಮ ಸಭಾಭವನದ ಎದುರುಗಡೆ ಏಕಮುಖ ಸಂಚಾರದ ರಾಪ್ಟ್ರೀಯ ಹೆದ್ದಾರಿ ೬೬ ರ ಪಶ್ಚಿಮ ಬದಿಯ ರಸ್ತೆಯಲ್ಲಿ ಉಡುಪಿ ಕಡೆಯಿಂದ ಅತೀ ವೇಗದಿಂದ ಬಂದ ಶೆರ್ವಲೆ ಬೀಟ್ ಕಾರು, ರಸ್ತೆಯ ಎಡಭಾಗದಲ್ಲಿ ದ್ವಿಚಕ್ರ ವಾಹನ ಸವಾರರು ಸಂಚರಿಸುವ ಬಂದು ಕೃಷ್ಣ ಎನ್ನುವವರ ಸೈಕಲ್‌ಗೆ ಢಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ಪರಿಣಾಮ ಕೃಷ್ಣ ಅವರು ಸೈಕಲ್ ಸಮೇತ ಡಾಂಬರು ರಸ್ತೆಗೆ ಬಿದ್ದು ತಲೆಗೆ ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೆ ಮೃತಪಟ್ಟಿದ್ದಾರೆ. ಸೈಕಲ್‌ಗೆ ಢಿಕ್ಕಿ ಹೊಡೆದ ಕಾರು ಸಭಾಭವನ ಮುಂದಿರುವ ಆಲದ ಮರದ ಬದಿಗೆ ಢಿಕ್ಕಿ ಹೊಡೆದು ಕೆಳಗೆ ಬಂದು ನಿಂತಿತ್ತು. ಕೇರಳ ಮೂಲದ ಮಹಮ್ಮದ್ ಇಬ್ರಾಹಿಂ ಕಾರು ಚಲಾಯಿಸುತ್ತಿದ್ದು, ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

seven + seven =