ಸಿಂಡಿಕೇಟ್ ಬ್ಯಾಂಕ್ ಉದ್ಯೋಗಿ, ಜನಾನುರಾಗಿ ಕೊಲ್ಲೂರು ಅರುಣ್ ಅಡಿಗ ನಿಧನ

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ,ಜು.4: ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಳದಲ್ಲಿ ಪಾರಂಪರಿಕವಾಗಿ ಪೂಜೆ ನಡೆಸುವ ಅರ್ಚಕ ಕುಟುಂಬದ, ಪ್ರಸ್ತುತ ಬ್ರಹ್ಮಾವರದಲ್ಲಿ ನೆಲೆಸಿದ್ದ ಅರುಣ ಅಡಿಗ ಅಸೌಖ್ಯದಿಂದ ನಿಧನರಾಗಿದ್ದಾರೆ. ಒಂದು ವರ್ಷದ ಹಿಂದೆ ಬ್ರಹ್ಮಾವರದ ತಮ್ಮ ನಿವಾಸಿದಿಂದ ಬ್ಯಾಂಕಿಗೆ ತೆರಳುತ್ತಿದ್ದ ಸಂದರ್ಭ ನಡೆದ ಅಪಘಾತದಲ್ಲಿ ತೀವ್ರ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದ ಅವರು ಇಂದು ಚಿಕಿತ್ಸೆಗೆ ಸ್ಪಂದಿಸದೇ ನಿಧನರಾಗಿದ್ದಾರೆ. ಕುಂದಾಪ್ರ ಡಾಟ್ ಕಾಂ ಸುದ್ದಿ.

Call us

ಸಿಂಡಿಕೇಟ್ ಬ್ಯಾಂಕಿನ ಹಿರಿಯ ಉದ್ಯೋಗಿಯಾಗಿ ಬೈಂದೂರು, ಬ್ರಹ್ಮಾವರ ಮುಂತಾದೆಡೆ ಸೇವೆ ಸಲ್ಲಿಸುತ್ತಲೇ ತಮ್ಮ ಸಾಮಾಜಿಕ, ಧಾರ್ಮಿಕ ಸೇವಾ ಕಾರ್ಯಗಳ ಮೂಲಕ ಅಪಾರ ಜನಮನ್ನಣೆ ಗಳಿಸಿದ್ದರು. ದಿವಂಗತ ವಿ.ಎಸ್. ಆಚಾರ್ಯ ಅವರ ಪರಮಾಪ್ತರಲ್ಲಿ ಓರ್ವರಾಗಿದ್ದ ಅಡಿಗರು ಅಭಿವೃದ್ಧಿಯ ವಿಷಯದಲ್ಲಿ ಪಕ್ಷಾತೀತ ನಿಲುವು ತಳೆದಿದ್ದರು. ಬೈಂದೂರು ಒತ್ತಿನಣೆ ಶ್ರೀ ರಾಘವೇಂದ್ರ ಸ್ವಾಮಿ ಮಠದ ಜೀರ್ಣೋದ್ಧಾರದಲ್ಲಿ ವಿಶೇಷ ಮುತುವರ್ಜಿ ವಹಿಸಿದ್ದ ಅವರು ಧಾರ್ಮಿಕ, ಸಾಮಾಜಿಕ ಕಾರ್ಯಗಳಲ್ಲಿ ಸಕ್ರೀಯವಾಗಿ ತೊಡಗಿಸಿಕೊಂಡಿದ್ದರು/ಕುಂದಾಪ್ರ ಡಾಟ್ ಕಾಂ ಸುದ್ದಿ/

Leave a Reply

Your email address will not be published. Required fields are marked *

6 + 8 =