ಸಿದ್ಧಾಪುರ: ಹೆಚ್ಚುವರಿ ಶಿಕ್ಷಕರ ವರ್ಗಾವಣೆ ಆದೇಶ ಹಿಂಪಡೆಯುವಂತೆ ಆಗ್ರಹಿಸಿ ಮೂರು ದಿನಗಳಿಂದ ಪ್ರತಿಭಟನೆ

Click Here

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಸಿದ್ದಾಪುರ: ಸಿದ್ದಾಪುರದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಗ್ರಾಮೀಣ ಭಾಗದ ವಿದಾರ್ಥಿಗಳು ವ್ಯಾಸಂಗ ಮಾಡುತ್ತಿದ್ದು ಎಲ್ಲಾ ಮಕ್ಕಳಿಗೂ ಸರ್ಕಾರಿ ಸೌಲಭ್ಯದೊಂದಿಗೆ ಉತ್ತಮ ಶಿಕ್ಷಣವನ್ನು ನೀಡಲಾಗುತ್ತಿದೆ. ಮಕ್ಕಳ ಸಂಖ್ಯೆಗನುಗುಣವಾಗಿಯೇ ಶಿಕ್ಷಕರಿದ್ದಾರೆ. ಆದರೆ ಹೆಚ್ಚುವರಿ ನೆಪದಲ್ಲಿ ಇಲ್ಲಿನ ಶಿಕ್ಷಕರನ್ನು ವರ್ಗಾವಣೆಗೊಳಿಸಿದರೇ ವಿದ್ಯಾರ್ಥಿಗಳ ಶಿಕ್ಷಣಕ್ಕೆ ತೊಂದರೆಯಾಗುವುದು. ಇಲಾಖೆ ಈ ಆದೇಶವನ್ನು ಹಿಂಪಡೆಯಬೇಕು ಎಂದು ಆಗ್ರಹಿಸಿ ಶಾಲಾಭಿವೃದ್ದಿ ಸಮಿತಿ, ಪೋಷಕರು ಹಾಗೂ ಗ್ರಾಮಸ್ಥರು ಕಳೆದ ಮೂರು ದಿನಗಳಿಂದ ಪ್ರತಿಭಟನೆ ಮೂರನೇ ದಿನ ತಲುಪಿದ್ದು, ತರಗತಿಗೆ ಕೊಠಡಿಗೆ ಬೀಗ ಜಡಿದು ಪ್ರತಿಭಟನೆ ಮುಂದುವರಿಸಿದ್ದಾರೆ.

Call us

Call us

Visit Now

ಶಿಕ್ಷಣ ಇಲಾಖೆಯು ಹೆಚ್ಚುವರಿಯಾಗಿ ಶಿಕ್ಷಕರನ್ನು ವರ್ಗಾವಣೆಗೊಳಿಸುವುದರಿಂದ ಶಾಲೆಗೆ ವ್ಯಾಸಂಗ ಮಾಡುತ್ತಿರುವ 219 ಮಕ್ಕಳ ವಿದ್ಯಾಭ್ಯಾಸಕ್ಕೆ ಸಮಸ್ಯೆಯಾಗಲಿದ್ದು, ಹೆಚ್ಚುವರಿ ಶಿಕ್ಷಕರ ವರ್ಗಾವಣೆಯನ್ನು ಹಿಂಪಡೆಯಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದ್ದಾರೆ.

Click Here

Click here

Click Here

Call us

Call us

ಎರಡನೇ ದಿನ ಕುಂದಾಪುರದ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿಯ ಎದುರು ಪ್ರತಿಭಟನೆ ನಡೆಸಿ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಮನವಿ ಸಲ್ಲಿಸಲಾಗಿತ್ತು. ಆದಾಗ್ಯೂ ಮೂರನೇ ದಿನವೂ ಪ್ರತಿಭಟನೆಯನ್ನು ಮುಂದುವರಿಸಿದ್ದು, ಶಾಲಾ ಮಕ್ಕಳು, ಎಸ್‌ಡಿಎಂಸಿ ಸದಸ್ಯರು, ಜನಪ್ರತಿನಿಧಿಗಳು ಸಿದ್ದಾಪುರ ಪೇಟೆಯ ಮುಖ್ಯ ರಸ್ತೆ ಹಾಗೂ ಬಸ್ಸು ತಂಗುದಾಣದಲ್ಲಿ ನೂರಾರೂ ಸಂಖ್ಯೆಯಲ್ಲಿ ಸೇರಿ ಪ್ರತಿಭಟನೆ ನಡೆಸಿದ್ದಾರೆ. ಇಬ್ಬರು ಶಿಕ್ಷಕಿಯರ ವರ್ಗಾವಣೆಯನ್ನು ಹಿಂಪಡೆಯದಿದ್ದಲ್ಲಿ ಶಾಲೆಗೆ ಹಾಕಿದ ಬೀಗವನ್ನು ತೆಗೆಯಲು ಬೀಡದೇ ಉಗ್ರ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಸಿದ್ದಾರೆ.

ಜಿ.ಪಂ ಸದಸ್ಯ ಹಾಲಾಡಿ ತಾರನಾಥ ಶೆಟ್ಟಿ, ಸಿದ್ದಾಪುರ ತಾ.ಪಂ.ಸದಸ್ಯ ಎಸ್.ಕೆ. ವಾಸುದೇವ ಪೈ, ಸಿದ್ದಾಪುರ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಡಿ.ಭರತ್ ಕಾಮತ್, ಗ್ರಾ.ಪಂ ಸದಸ್ಯ ಸತೀಶ್ ಶೆಟ್ಟಿ ಕಡ್ರಿ, ಮಾಜಿ ಸದಸ್ಯ ಭೋಜ ಶೆಟ್ಟಿ, ಹರ್ಕೆಬಾಳು ಸುಧಾಕರ ಶೆಟ್ಟಿ, ಎಸ್‌ಡಿಎಮ್‌ಸಿ ಅಧ್ಯಕ್ಷ ಉದಯ ಕೂಡ್ಗಿ, , ಕೃಷ್ಣ ಪೂಜಾರಿ, ವೈ.ಎಸ್.ಶೆಟ್ಟಿ, ಭಾಸ್ಕರ್ ಹಾಗೂ ಸಮಿತಿ ಸದಸ್ಯರು, ಊರಿನ ಪ್ರಮುಖರು ಶಾಲಾ ಮಕ್ಕಳು ಹಾಗೂ ಪೋಷಕರು ಗ್ರಾಮಸ್ಥರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ಮುನ್ನೆಚ್ಚರಿಕೆ ಕ್ರಮವಾಗಿ ಪ್ರತಿಭಟನೆಯಲ್ಲಿ ಅಹಿತಕರ ಘಟನೆಗಳು ನಡೆಯದಂತೆ ಶಂಕರನಾರಾಯಣ ಠಾಣಾ ಪೋಲಿಸ್ ಸಿಬ್ಬಂದಿ ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದ್ದರು.

ಹೆಚ್ಚುವರಿ ಶಿಕ್ಷಕರ ವರ್ಗಾವಣೆಯಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಗಳಿಂದ ಏನನ್ನು ಮಾಡಲು ಸಾಧ್ಯವಿಲ್ಲ. ಇದು ಇಲಾಖೆಯ ಆದೇಶ. ಪ್ರತಿಭಟನೆಯ ಬಗ್ಗೆ ಜಿಲ್ಲಾ ವಿದ್ಯಾಂಗ ಉಪನಿರ್ದೇಶಕರಿಗೆ ತಿಳಿಸಿದ್ದೇವೆ. ಅವರಿಂದ ಯಾವುದೇ ಮಾಹಿತಿ ಬಂದಿಲ್ಲ. ಅವರು ಶಿಕ್ಷಕರ ಕೌಸ್ಸಿಲಿಂಗ್‌ನಲ್ಲಿ ಇದ್ದಾರೆ. ಪೋಷಕರು ಆ.೪ರಂದು ಪುನ್ನ ಪ್ರತಿಭಟನೆ ನಡೆಸುವ ಅಗತ್ಯತೆ ಇರಲ್ಲಿಲ್ಲ. ನಾನು ಹೋಗಿ ಮತ್ತೇ ಹೇಳಬೇಕಾದದ್ದನ್ನು ಆ.೩ರಂದು ಕುಂದಾಪುರ ಕ್ಷೇತ್ರ ಶಿಕ್ಷಣಾಧಿಕಾರಿಗಳ ಮುಂದೆ ಪ್ರತಿಭಟನೆ ನಡೆಸಿದ್ದಾಗಲೇ ಹೇಳಿದ್ದೇನೆ. – ಶೋಭಾ ಶೆಟ್ಟಿ, ಕ್ಷೇತ್ರ ಶಿಕ್ಷಣಾಧಿಕಾರಿ ಕುಂದಾಪುರ.

news_Siddapura Pratibhatane news_Siddapura Pratibhatane1

????????????????????????????????????
????????????????????????????????????

Leave a Reply

Your email address will not be published. Required fields are marked *

1 + 18 =