ಸಿ.ಬಿ.ಎಸ್.ಸಿ ಫಲಿತಾಂಶ: ವಕ್ವಾಡಿ ಗುರುಕುಲ ಪಬ್ಲಿಕ್ ಶಾಲೆಗೆ ಸತತ 8ನೇ ಬಾರಿ 100% ಫಲಿತಾಂಶ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಇಲ್ಲಿನ ಗುರುಕುಲ ಪಬ್ಲಿಕ್ ಶಾಲೆ ಸತತ 8ನೇ ಬಾರಿ ಸಿ.ಬಿ.ಎಸ್.ಸಿ 10ನೇ ತರಗತಿಯಲ್ಲಿ ಶೇ.100 ಫಲಿತಾಂಶ ಪಡೆದಿದೆ. ಪರೀಕ್ಷೆಗೆ ಹಾಜರಾದ 79 ವಿದ್ಯಾರ್ಥಿಗಳಲ್ಲಿ 02 ವಿದ್ಯಾರ್ಥಿಗಳು ವಿಶಿಷ್ಠ ಶ್ರೇಣಿಯಲ್ಲಿ ( 92% ಕ್ಕಿಂತ ಅಧಿಕ ಅಂಕ) 10 ವಿದ್ಯಾರ್ಥಿಗಳು ಅತ್ಯುತ್ತಮ ಶ್ರೇಣಿಯಲ್ಲಿ ( 85% ಕ್ಕಿಂತ ಅಧಿಕ ಅಂಕ) ಅಲ್ಲದೇ ೦5 ವಿದ್ಯಾರ್ಥಿಗಳು 80% ಕ್ಕಿಂತ ಹೆಚ್ಚು ಅಂಕ ಪಡೆದು ಪಾಲಕರ ಮತ್ತು ಸಂಸ್ಥೆಯ ಪ್ರಶಂಸೆಗೆ ಪಾತ್ರರಾಗಿದ್ದಾರೆ. ಹಾಗೂ ಉಳಿದ ಎಲ್ಲಾ ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾಗಿ ಉತ್ತಮ ಸಾಧನೆ ಮಾಡಿದ್ದಾರೆ.

ವಿದ್ಯಾರ್ಥಿಗಳನ್ನು ಗುರುಕುಲ ಪಬ್ಲಿಕ್ ಶಾಲೆಯ ಜಂಟಿ ಆಡಳಿತ ನಿರ್ದೇಶಕರುಗಳಾದ ಬಾಂಡ್ಯ ಸುಬಾಶ್ಚಂದ್ರ ಶೆಟ್ಟಿ ಹಾಗೂ ಅನುಪಮ ಎಸ್. ಶೆಟ್ಟಿ, ಶಾಲೆಯ ಪ್ರಾಂಶುಪಾಲರು, ಶಿಕ್ಷಕ ವೃಂದ ಅಭಿನಂದಿಸಿದ್ದಾರೆ.

 

Leave a Reply

Your email address will not be published. Required fields are marked *

three + eighteen =