ಸುಗಮ ಚುನಾವಣೆಗೆ ಆಯೋಗದ ಮಾರ್ಗಸೂಚಿಗಳನ್ನು ಪಾಲಿಸಿ: ಜಿಲ್ಲಾಧಿಕಾರಿ ಜಿ.ಜಗದೀಶ್

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಉಡುಪಿ: ಜಿಲ್ಲೆಯಲ್ಲಿ ಡಿಸೆಂಬರ್ 22 ಮತ್ತು 27 ರಂದು ನಡೆಯುವ ಎರಡು ಹಂತದ ಗ್ರಾಮ ಪಂಚಾಯತ್ ಸಾರ್ವತ್ರಿಕ ಚುನಾವಣೆಯು, ಸುಗಮವಾಗಿ ಮತ್ತು ಯಾವುದೇ ಲೋಪಗಳಿಲ್ಲದೇ ನಡೆಸಲು ಚುನಾವಣಾ ಆಯೋಗ ಸೂಚಿಸಿರುವ ಮಾರ್ಗಸೂಚಿಯಂತೆ ಕಾರ್ಯ ನಿರ್ವಹಿಸುವಂತೆ ಜಿಲ್ಲಾಧಿಕಾರಿ ಜಿ.ಜಗದೀಶ್ ಸೂಚಿಸಿದರು.

Click Here

Call us

Call us

ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ , ಗ್ರಾಮ ಪಂಚಾಯತ್ ಸಾರ್ವತ್ರಿಕ ಚುನಾವಣೆಯ ಪೂರ್ವ ಸಿದ್ದತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

Click here

Click Here

Call us

Visit Now

ಡಿಸೆಂಬರ್ 22 ರಂದು ನಡೆಯುವ ಮೊದಲನೇ ಹಂತದಲ್ಲಿ ಉಡುಪಿ, ಹೆಬ್ರಿ, ಬೈಂದೂರು ಮತ್ತು ಬ್ರಹ್ಮಾವರ ವ್ಯಾಪ್ತಿಯ 67 ಗ್ರಾಮ ಪಂಚಾಯತ್ ಗಳ 415 ಕ್ಷೆತ್ರಗಳಿಗೆ , ಒಟ್ಟು 553 ಮತಗಟ್ಟೆಗಳಲ್ಲಿ ಮತದಾನ ನಡೆಯಲಿದ್ದು, 377308 ಮಂದಿ ಮತದಾರರ ಮತ ಚಲಾಯಿಸಲಿದ್ದಾರೆ. ಡಿಸೆಂಬರ್ 27 ರಂದು ನಡೆಯುವ ಎರಡನೇ ಹಂತದಲ್ಲಿ ಕುಂದಾಪುರ, ಕಾರ್ಕಳ ಮತ್ತು ಕಾಪು ವ್ಯಾಪ್ತಿಯ 87 ಗ್ರಾಮ ಪಂಚಾಯತ್ ಗಳ 451 ಕ್ಷೆತ್ರಗಳಿಗೆ , ಒಟ್ಟು 576 ಮತಗಟ್ಟೆಗಳಲ್ಲಿ ಮತದಾನ ನಡೆಯಲಿದ್ದು, 794872 ಮಂದಿ ಮತದಾರರ ಮತ ಚಲಾಯಿಸಲಿದ್ದಾರೆ. ಜಿಲ್ಲೆಯಲ್ಲಿ ಒಟ್ಟು 154 ಗ್ರಾಮ ಪಂಚಾಯತ್ ಗಳ 866 ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದ್ದು, 382528 ಪುರುಷ ಮತ್ತು 412335 ಮಹಿಳಾ ಮತ್ತು 9 ಇತರೆ ಮತದಾರರು ಸೇರಿದಂತೆ 794872 ಮಂದಿ ಮತದಾರರು ಚುನಾವಣೆಯಲ್ಲಿ ಭಾಗವಹಿಸಲಿದ್ದಾರೆ ಎಂದರು.

ಎಲ್ಲಾ ಮತಗಟ್ಟೆಗಳಲ್ಲಿ ಅಗತ್ಯ ಮೂಲಭೂತ ಸೌಕರ್ಯಗಳು ಇರುವ ಬಗ್ಗೆ ತಹಸೀಲ್ದಾರ್ ಗಳು ಪರಿಶೀಲಿಸಿ ವರದಿ ನೀಡಿ, ಅಗತ್ಯ ದುರಸ್ತಿ ಕಾರ್ಯಗಳನ್ನು ಕೈಗೊಳ್ಳುವಂತೆ ಸೂಚಿಸಿದ ಜಿಲ್ಲಾಧಿಕಾರಿ ಜಿ.ಜಗದೀಶ್, ಕೋವಿಡ್ ಸುರಕ್ಷಾ ಕ್ರಮಗಳೊಂದಿಗೆ ಚುನಾವಣೆಯನ್ನು ನಡೆಸುವಂತೆ ತಿಳಿಸಿದರು, ಚುನಾವಣಾ ಕಾರ್ಯಕ್ಕಾಗಿ 155 ಚುನಾವಣಾಧಿಕಾರಿಗಳು ಮತ್ತು 166 ಸಹಾಯಕ ಚುನಾವಣಾಧಿಕಾರಿಗಳನ್ನು ನೇಮಿಸಿದ್ದು, ಇತರೆ ಅಗತ್ಯವಿರುವ ಸಿಬ್ಬಂದಿಗಳ ಕುರಿತಂತೆ ಸಮಗ್ರ ಮಾಹಿತಿ ನೀಡುವಂತೆ ಸೂಚಿಸಿದರು.

ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ನಡೆಯುವ ಅನಿರೀಕ್ಷಿತ ಸಮಾರಂಭಗಳ ಕುರಿತ ಪರಿಶೀಲಿಸಿ, ಸಮಾರಂಭಗಳಲ್ಲಿ ನೀತಿ ಸಂಹಿತೆ ಉಲ್ಲಂಘನೆಯಾಗಿದ್ದಲ್ಲಿ ಕೂಡಲೇ ಸಂಬಂದಪಟ್ಟವರ ವಿರುದ್ದ ಪ್ರಕರಣ ದಾಖಲಿಸುವಂತೆ ಸೂಚಿಸಿದ ಜಿಲ್ಲಾಧಿಕಾರಿಗಳು, ಮದ್ಯ ಮಾರಾಟದ ಪ್ರಮಾಣ ಕುರಿತಂತೆ ಪ್ರತಿದಿನ ಪರಿಶೀಲಿಸುವಂತೆ ಅಬಕಾರಿ ಮತ್ತು ಪೊಲೀಸ್ ಇಲಾಖೆಯ ಅಧಿಕಾರಿಗಳಿಗೆ ಕಟ್ಟುನಿಟ್ಟಾಗಿ ಜಿಲ್ಲಾಧಿಕಾರಿ ಜಿ.ಜಗದೀಶ್ ಸೂಚನೆ ನೀಡಿದರು.

Call us

ಗ್ರಾಮ ಪಂಚಾಯತ್ ಚುನಾವಣೆಗಳು ಪಕ್ಷ ರಹಿತವಾಗಿ ನಡೆಯಲಿದ್ದು, ಗ್ರಾಮಗಳಲ್ಲಿ ಯಾವುದೇ ರಾಜಕೀಯ ಪಕ್ಷ ಅಥವಾ ವ್ಯಕ್ತಿಗಳ ಪ್ರಚಾರ ಫಲಕ, ಕಟೌಟ್ ಗಳು ಇದ್ದಲ್ಲಿ ಸಂಬಂಧಪಟ್ಟ ಗ್ರಾಮ ಪಂಚಾಯತ್ ವತಿಯಿಂದ ತಕ್ಷಣವೇ ತೆಗೆಯಬೇಕು, ತಪ್ಪಿದಲ್ಲಿ ಆಯಾ ಗ್ರಾಮ ಪಂಚಾಯತ್ ಗಳ ಪಿಡಿಓ ಗಳ ಮೇಲೆ ಕ್ರಮ ಕೈಗೊಳ್ಳುವಂತೆ ಜಿಲ್ಲಾ ಪಂಚಾಯತ್ ಸಿಇಓಗೆ ಡಿಸಿ ತಿಳಿಸಿದರು.

ಸಾಮಾಜಿಕ ಮಾಧ್ಯಮಗಳಲ್ಲಿ ಯಾವುದೇ ರಾಜಕೀಯ ಪಕ್ಷ ಅಥವಾ ವ್ಯಕ್ತಿಯ ಬೆಂಬಲಿಗ ಎಂದು ಜಾಹೀರಾತು ನೀಡುವುದು ನೀತಿ ಸಂಹಿತೆಯ ಸ್ಪಷ್ಟ ಉಲ್ಲಂಘನೆಯಾಗಲಿದ್ದು, ಅಂತಹ ವ್ಯಕ್ತಿಗಳ ವಿರುದ್ದ ಪ್ರಕರಣ ದಾಖಲಿಸುವಂತೆ ತಹಸೀಲ್ದಾರ್ ಗಳಿಗೆ ಜಿಲ್ಲಾಧಿಕಾರಿ ಜಿ.ಜಗದೀಶ್ ಸೂಚಿಸಿದರು.

ಜಿಲ್ಲೆಯಲ್ಲಿರುವ ಸೂಕ್ಷö್ಮ ಮತ್ತು ಅತೀ ಸೂಕ್ಷ್ಮ ಮತಗಟ್ಟೆಗಳನ್ನು ಗುರುತಿಸಿ ಅಲ್ಲಿಗೆ ಅಗತ್ಯವಿರುವ ಪೊಲೀಸ್ ಸಿಬ್ಬಂದಿ ನೇಮಕ ಮಾಡುವ ಕುರಿತಂತೆ ವಿವರವಾದ ಬಂದೂಬಸ್ತ್ ಪ್ಲಾನ್ ಸಲ್ಲಿಸಿ, ಗ್ರಾಮಗಳಲ್ಲಿ ಯಾವುದೇ ಗಲಾಟೆ, ಘರ್ಷಣೆಗಳು ನಡೆಯದಂತೆ ಎಚ್ಚರವಹಿಸಿ, ನೀತಿ ಸಂಹಿತೆ ಉಲ್ಲಂಘಿಸುವವರ ವಿರುದ್ದ ಪ್ರಕರಣ ದಾಖಲಿಸಿ ಎಂದು ಪೊಲೀಸ್ ಇಲಾಖೆಗೆ ಡಿಸಿ ಸೂಚನೆ ನೀಡಿದರು.

ಚುನಾವಣಾ ಕಾರ್ಯಕ್ಕೆ ಅಗತ್ಯವಿರುವ ವಾಹನಗಳನ್ನು ಒದಗಿಸುವಂತೆ ಪ್ರಾದೇಶಿಕ ಸಾರಿಗೆ ಅಧಿಕಾರಿಗೆ ಸೂಚಿಸಿದ ಜಿಲ್ಲಾಧಿಕಾರಿ, ನೀತಿ ಸಂಹಿತೆಯ ವಿವರಗಳನ್ನು ಎಲ್ಲಾ ಅಧಿಕಾರಿಗಳು ಅಥೈಸಿಕೊಂಡು ಅದರಂತೆ ಕಾರ್ಯ ನಿರ್ವಹಿಸುವಂತೆ ಜಿಲ್ಲಾಧಿಕಾರಿ ಜಿ.ಜಗದೀಶ್ ತಿಳಿಸಿದರು.

ಸಭೆಯಲ್ಲಿ ಜಿಲ್ಲಾ ಪಂಚಾಯತ್ ಸಿಇಓ ಡಾ.ನವೀನ್ ಭಟ್, ಎಸ್ಪಿ ವಿಷ್ಣುವರ್ಧನ್, ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು, ಕುಂದಾಪುರ ಉಪ ವಿಭಾಗಾಧಿಕಾರಿ ರಾಜು ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

2 × 5 =