ಸೂರ‍್ಗೋಳ್ಳಿ ಶಾಲೆಗೆ ಪರಿಸರ ಮಿತ್ರ ಪ್ರಶಸ್ತಿ

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ತಾಲೂಕಿನ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಉಡುಪಿ ಜಿಲ್ಲಾ ಮಟ್ಟದ ಪರಿಸರ ಮಿತ್ರ ಹಸಿರು ಶಾಲೆ ಪ್ರಶಸ್ತಿ ಎರಡನೇ ಬಾರಿಗೆ ಪಡೆದುಕೊಂಡಿದೆ.

Call us

Call us

ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಜಿಲ್ಲಾಡಳಿತ ಜಿಲ್ಲಾ ಕಾನೂನು ಸೇವೆಗಳ ಪ್ರಾದಿಕಾರ ಸಾರ್ವಜನಿಕ ಶಿಕ್ಷಣ ಇಲಾಖೆ ಮತ್ತು ರಾಜ್ಯ ವಿಜ್ಞಾನ ಪರಿಷತು ಉಡುಪಿ ಸಹಯೋಗದಲ್ಲಿ ಮಣಿಪಾಲ ರಜತಾದ್ರಿ ಜಿಲ್ಲಾದಿಕಾರಿ ಕಛೇರಿ ಸಭಾಂಗಣದಲ್ಲಿ ಆಯೋಜಿಸಿದ ಕಾರ್ಯಕ್ರಮದಲ್ಲಿ ಉಡುಪಿ ಜಿಲ್ಲಾಪಂಚಾಯತ್ ಅದ್ಯಕ್ಷ ದಿನಕರ ಬಾಬು ಪ್ರಶಸ್ತಿ ಪ್ರಧಾನ ಮಾಡಿದರು.

ಶಾಲಾ ಮುಖ್ಯ ಶಿಕ್ಷಕ ಸದಾನಂದ ನಾಯಕ, ಸಹಶಿಕ್ಷಕ ಪ್ರಭಾಕರ ಶೆಟ್ಟಿ , ಚಂದ್ರಶೇಖರ ಶೆಟ್ಟಿ ಹಾಗೂ ವಿದ್ಯಾರ್ಥಿ ವೃಂದದೊಂದಿಗೆ ಪ್ರಶಸ್ತಿ ಸ್ವೀಕರಿಸಿದರು .ಹಿರಿಯ ಸಿವಿಲ್ ನ್ಯಾಯಧೀಶರಾದ ಲತಾ, ಅಪರ ಜಿಲ್ಲಾದಿಕಾರಿ ಅನುರಾದ , ಹಿರಿಯ ಪರಿಸರ ಅಧಿಕಾರಿ ರಾಜಶೇಖರ ಪುರಾಣಿಕ , ಡಿ.ಡಿ.ಪಿ.ಐ. ದಿವಕರ ಶೆಟ್ಟಿ ಉಪಸ್ತಿತರಿದ್ದರು.

Call us

Call us

Leave a Reply

Your email address will not be published. Required fields are marked *

4 × five =