ಸೋಂಕಿತರ ಮನವೊಲಿಸಿ, ಕೋವಿಡ್ ಕೇರ್ ಸೆಂಟರ್‌ಗೆ ವರ್ಗಾಯಿಸಿ: ಸಚಿವ ಕೋಟ ಶ್ರೀನಿವಾಸ ಪೂಜಾರಿ

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಉಡುಪಿ: ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಸೋಂಕು ದೃಢಪಟ್ಟವರನ್ನು ಮನವೊಲಿಸುವುದರೊಂದಿಗೆ ಅವರುಗಳನ್ನು ಕೋವಿಡ್ ಕೇರ್ ಸೆಂಟರ್‌ಗೆ ವರ್ಗಾಯಿಸಿ, ಚಿಕಿತ್ಸೆ ನೀಡಲು ಗ್ರಾಮ ಮಟ್ಟದ ಟಾಸ್ಕ್ಫೋರ್ಸ್ ಸಮಿತಿ ಮುಂದಾಗಬೇಕು ಎಂದು ಮುಜರಾಯಿ, ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.

Call us

Call us

ಅವರು ಮಣಿಪಾಲ್ನ ರಜತಾದ್ರಿಯ ಕೆಸ್ವಾನ್ ವೀಡಿಯೋ ಕಾನ್ಫ್ರೆನ್ಸ್ ಹಾಲ್‌ನಲ್ಲಿ ಕೋವಿಡ್ ನಿಯಂತ್ರಣ ಕುರಿತು ಉಡುಪಿ ಹಾಗೂ ಕಾಪು ತಾಲೂಕಿನ ಗ್ರಾಮ ಮಟ್ಟದ ಟಾಸ್ಕ್‌ಫೋರ್ಸ್ ಸಮಿತಿ ಸದಸ್ಯರುಗಳೊಂದಿಗೆ ವೀಡಿಯೋ ಸಂವಾದದ ಮೂಲಕ ಪ್ರಗತಿ ಪರಿಶೀಲನೆ ನಡೆಸಿದರು.
ಸಾಮಾನ್ಯವಾಗಿ ಗ್ರಾಮೀಣ ಭಾಗಗಳಲ್ಲಿ ವಾಸಿಸುವ ಜನರ ಮನೆಗಳಲ್ಲಿ ಪ್ರತ್ಯೇಕವಾಗಿರಲು ಕೊಠಡಿ ಸೇರಿದಂತೆ ಶೌಚಾಲಯದ ವ್ಯವಸ್ಥೆ ಇರುವುದಿಲ್ಲ. ಗ್ರಾಮೀಣ ಜನರಿಗೆ ಸೋಂಕು ದೃಢಪಟ್ಟಾಗ ಅವರುಗಳ ರೋಗ ಲಕ್ಷಣದ ಬಗ್ಗೆ ಮಾಹಿತಿ ಹೊಂದಿ ಅವಶ್ಯವಿದ್ದಲ್ಲಿ ಆಸ್ಪತ್ರೆಗೆ ವರ್ಗಾಯಿಸಬೇಕು. ತಪ್ಪಿದ್ದಲ್ಲಿ ಅವರುಗಳನ್ನು ಕೋವಿಡ್ ಕೇರ್ ಸೆಂಟರ್ಗಳಿಗೆ ವರ್ಗಾಯಿಸಿ, ಚಿಕಿತ್ಸೆ ನೀಡುವ ಕಾರ್ಯವನ್ನು ಗ್ರಾಮ ಮಟ್ಟದ ಸ್ಥಳೀಯ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಮಾಡಬೇಕು ಎಂದರು. ಕೋವಿಡ್ ಕೇರ್ ಸೆಂಟರ್ಗೆ ರೋಗ ಪೀಡಿತರು ಹೋಗಲು ಇಚ್ಛಿಸದೇ ಇದ್ದಲ್ಲಿ ಅಧಿಕಾರಿಗಳು ನಾವು ಹೇಳಿದ್ದೆವು, ಅವರು ಕೇಳಲಿಲ್ಲ ಎಂಬಂತಾಗದೇ ಕಠಿಣ ಕ್ರಮಗಳನ್ನು ಕೈಗೊಂಡು ಅವಶ್ಯವಿದ್ದಲ್ಲಿ ರಕ್ಷಣಾ ಇಲಾಖೆಯ ಸಹಾಯದೊಂದಿಗೆ ಅವರುಗಳನ್ನು ಕೋವಿಡ್ ಕೇರ್ ಸೆಂಟರ್ಗಳಿಗೆ ವರ್ಗಾಯಿಸುವ ಕೆಲಸ ಮಾಡಬೇಕು ಎಂದರು.

ಗ್ರಾಮ ಪಡೆಯ ಸಮಿತಿಯ ಸದಸ್ಯರುಗಳು ಪ್ರತೀ ದಿನ ಸಭೆ ಸೇರಿ ಸ್ಥಳೀಯ ಸೋಂಕಿತರ ಬಗ್ಗೆ ಮಾಹಿತಿ ಹೊಂದುವುದರ ಜೊತೆಗೆ ನಿರ್ವಹಣೆ ಯಾವ ರೀತಿ ಮಾಡಬೇಕು ಎಂಬುದನ್ನು ಚರ್ಚಿಸಿ, ಅಗತ್ಯ ಕ್ರಮಗಳನ್ನು ಕೈಗೊಳ್ಳುವುದರ ಜೊತೆಗೆ ಅವರುಗಳ ಮನೆ ಸೀಲ್ಡೌನ್ ಮಾಡಿ, ದೈನಂದಿನ ನಿರ್ವಹಣೆಗೆ ಅಗತ್ಯವಿದ್ದಲ್ಲಿ ಪಡಿತರವನ್ನು ಒದಗಿಸಬೇಕು. ಆಶಾ ಕಾರ್ಯಕರ್ತೆಯರು ಪ್ರತೀ ದಿನ ಮನೆಗೆ ತೆರಳಿ ಅವರ ಆರೋಗ್ಯ ಕ್ಷೇಮವನ್ನು ವಿಚಾರಿಸಬೇಕು ಎಂದು ಹೇಳಿದರು. ಖಾಸಗಿ ಆಸ್ಪತ್ರೆಗಳಿಗೆ ಕೋವಿಡ್ ಚಿಕಿತ್ಸೆಗೆ ತೆರಳುವವರು ಆಯುಷ್ಮಾನ್ ಆರೋಗ್ಯ ಕರ್ನಾಟಕ ಯೋಜನೆ ಅಡಿಯಲ್ಲಿ ಅರ್ಹತೆಯಿರುವ ಬಡ ಜನರಿಗೆ ಅದರ ಸದುಪಯೋಗ ಪಡಿಸಿಕೊಳ್ಳುವ ಮಾಹಿತಿಯನ್ನು ನೀಡುವುದು ಟಾಸ್ಕ್ ಫೋರ್ಸ್ ಸಮಿತಿಯ ಜವಾಬ್ದಾರಿಯಾಗಿದ್ದು, ಇದನ್ನು ತಪ್ಪದೇ ಮಾಡಬೇಕು ಎಂದರು.

Click here

Click Here

Call us

Call us

Visit Now

ಸಂಸದೆ ಶೋಭಾ ಕರಂದ್ಲಾಜೆ ಮಾತನಾಡಿ, ಸೋಂಕು ದೃಢಪಟ್ಟು ಮನೆಯಲ್ಲಿ ಅಥವಾ ಕೋವಿಡ್ ಕೇರ್ ಸೆಂಟರ್ಗಳಲ್ಲಿ ಚಿಕಿತ್ಸೆ ಪಡೆಯುತ್ತಿರುವವರ ಆರೋಗ್ಯದ ಸ್ಥಿತಿ-ಗತಿಗಳನ್ನು ಪ್ರತಿ ದಿನ ವಿಚಾರಿಸಿ ಚಿಕಿತ್ಸೆ ನೀಡುವುದರೊಂದಿಗೆ ಯಾವುದೇ ಪ್ರಾಣ ಹಾನಿಯಾಗದಂತೆ ನೋಡಿಕೊಳ್ಳುವ ಜವಾಬ್ದಾರಿ ಚುನಾಯಿತ ಪ್ರತಿನಿಧಿಗಳ ಹಾಗೂ ಅಧಿಕಾರಿಗಳ ಕರ್ತವ್ಯ ಎಂದರು.

ಗ್ರಾಮೀಣ ಭಾಗದಲ್ಲಿ ನಿವೃತ್ತಿ ಹೊಂದಿದ ವೈದ್ಯರುಗಳು ಅಥವಾ ಹೊಸದಾಗಿ ವೈದ್ಯಕೀಯ ಪದವಿ ಹೊಂದಿದವರು ಇದ್ದಲ್ಲಿ ಅವರುಗಳನ್ನು ಗುರುತಿಸಿ, ಸ್ಥಳೀಯ ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ನೇಮಕಾತಿ ಮಾಡಿಕೊಳ್ಳಲು ಮನವೊಲಿಸಬೇಕು ಎಂದ ಅವರು ಪ್ರತಿಯೊಬ್ಬರಿಗೂ ಕೊರೋನಾ ನಿರೋಧಕ ಚುಚ್ಚುಮದ್ದು ನೀಡುವ ಕಾರ್ಯವನ್ನು ಆದ್ಯತೆಯ ಮೇರೆ ಕೈಗೊಳ್ಳಲಾಗುವುದು ಎಂದರು. ಶಾಸಕ ರಘುಪತಿ ಭಟ್ ಮಾತನಾಡಿ, ಟಾಸ್ಕ್ಫೋರ್ಸ್ ಸಮಿತಿಯ ಸದಸ್ಯರುಗಳು ಕೋವಿಡ್ ನಿಯಂತ್ರಣದ ತಮ್ಮ ದೈನಂದಿನ ಕಾರ್ಯದ ಜೊತೆಗೆ ಖಾಸಗಿ ವೈದ್ಯರುಗಳಿಂದ ಕೆಮ್ಮು, ಶೀತ, ಜ್ವರ ಸೇರಿದಂತೆ ಮತ್ತಿತರ ಕೋವಿಡ್ ಲಕ್ಷಣಗಳು ಹೊಂದಿರುವ ಸಾಮಾನ್ಯ ರೋಗಿಗಳು ಚಿಕಿತ್ಸೆ ಪಡೆದಲ್ಲಿ ಅವರುಗಳನ್ನು ಗುರುತಿಸಿ, ತಪ್ಪದೇ ಕೋವಿಡ್ ಪರೀಕ್ಷೆಗೆ ಒಳಪಡಬೇಕು ಎಂದರು.

Call us

ಮಣಿಪಾಲದ ಎಂ.ಐ.ಟಿಯ ವಿದ್ಯಾರ್ಥಿನಿಲಯದಲ್ಲಿ ವ್ಯವಸ್ಥಿತ ಅಗತ್ಯ ಮೂಲಭೂತ ಸೌಕರ್ಯಗಳನ್ನೊಳಗೊಂಡ ಪ್ರತಿಯೊಬ್ಬರಿಗೂ ಪ್ರತ್ಯೇಕ ಕೊಠಡಿ ಹೊಂದಿರುವ ಕೋವಿಡ್ ಕೇರ್ ಸೆಂಟರ್ನಲ್ಲಿ ಸೋಂಕಿತರಿಗೆ ಉತ್ತಮ ಗುಣಮಟ್ಟದ ಚಿಕಿತ್ಸೆ ಸೇರಿದಂತೆ, ಪೌಷ್ಟಿಕ ಆಹಾರಗಳನ್ನು ಒದಗಿಸಲಾಗುತ್ತಿದೆ. ಈ ಬಗ್ಗೆ ಗ್ರಾಮೀಣ ಭಾಗದಲ್ಲಿ ವೀಡಿಯೋ ತುಣುಕುಗಳ ಮೂಲಕ ಪ್ರಚಾರ ಪಡಿಸಿ, ಸೋಂಕಿತರು ಕೋವಿಡ್ ಕೇರ್ ಸೆಂಟರ್ಗಳಿಗೆ ಬರುವ ಹಾಗೆ ವಿಶ್ವಾಸ ತರುವ ಕೆಲಸ ಗ್ರಾಮ ಮಟ್ಟಗಳಲ್ಲಿ ಆಗಬೇಕು ಎಂದರು.

ಶಾಸಕ ಲಾಲಾಜಿ ಆರ್ ಮೆಂಡನ್ ಮಾತನಾಡಿ, ಗ್ರಾಮಗಳಲ್ಲಿ ಜನಸಾಮಾನ್ಯರು ತಮ್ಮ ದೈನಂದಿನ ಅವಶ್ಯಕಗಳನ್ನು ಖರೀದಿ ಸಮಯದಲ್ಲಿ ಜನಜಂಗುಳಿಯಾಗದತೆ ಎಚ್ಚರವಹಿಸುವುದರೊಂದಿಗೆ ಸಾಮಾಜಿಕ ಅಂತರ ಕಾಪಾಡಿಕೊಳ್ಳುವಂತೆ ನೋಡಿಕೊಳ್ಳಬೇಕು ಎಂದರು.
ಕೊರೋನಾ ನಿಯಂತ್ರಣಕ್ಕೆ ಜನಸಾಮಾನ್ಯರು ಸರ್ಕಾರದ ಮಾರ್ಗಸೂಚಿಗಳನ್ನು ತಪ್ಪದೇ ಪಾಲಿಸುವುದರೊಂದಿಗೆ ಸ್ವಯಂ ನಿಯಂತ್ರಣಗಳನ್ನು ಹಾಕಿಕೊಳ್ಳುವುದರೊಂದಿಗೆ ಸಹಕರಿಸಬೇಕು ಎಂದರು.

ಜಿಲ್ಲಾ ಪಂಚಾಯತ್ನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ನವೀನ್ ಭಟ್ ವೈ ಮಾತನಾಡಿ, ಕೋವಿಡ್ ನಿಯಂತ್ರಣಕ್ಕೆ ಗ್ರಾಮ ಮಟ್ಟದಲ್ಲಿ ಕಾರ್ಯಪಡೆ ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸಬೇಕು. ಸೋಂಕಿತರನ್ನು ಕೋವಿಡ್ ಕೇರ್ ಸೆಂಟರ್ಗಳಲ್ಲಿ ಚಿಕಿತ್ಸೆ ನೀಡುವುದು ಅತ್ಯವಶ್ಯಕವೆಂದು ಕಂಡುಬಂದಲ್ಲಿ ಅವರುಗಳನ್ನು ಕೂಡಲೇ ವರ್ಗಾಯಿಸುವ ಕಾರ್ಯವನ್ನು ಪಿ.ಡಿ.ಓ ಗಳು ಕೈಗೊಳ್ಳಬೇಕು. ಒಂದೊಮ್ಮೆ ಅವರು ನಿರಾಕರಿಸಿದರೆ ಅಂತಹ ರೋಗಿಗಳ ಮೇಲೆ ಎಪಿಡೆಮಿಕ್ ಕಾಯ್ದೆಯನ್ವಯ ಕ್ರಿಮಿನಲ್ ಪ್ರಕರಣವನ್ನು ದಾಖಲಿಸಬೇಕು. ಹೀಗೆ ಮಾಡುವುದು ತಪ್ಪಿದ್ದಲ್ಲಿ ಅಂತಹ ಪಿ.ಡಿ.ಓ ಗಳ ಹೊಣೆಗಾರಿಕೆ ಮಾಡಿ, ಅವರ ಮೇಲೆ ಪ್ರಕರಣ ದಾಖಲಿಸುವುದು ಎಂದು ತಿಳಿಸಿದರು.

ಸಭೆಯಲ್ಲಿ ಜಿಲ್ಲಾ ಪಂಚಾಯತ್ ಕಾರ್ಯದರ್ಶಿ ಕಿರಣ್ ಫಡ್ನೇಕರ್, ಗ್ರಾಮ ಪಂಚಾಯತ್ನ ಅಧ್ಯಕ್ಷರು, ಉಪಾಧ್ಯಕ್ಷರು, ಪಂಚಾಯತ್ನ ಪಿ.ಡಿ.ಓಗಳು ಹಾಗೂ ಮತ್ತಿತರರು ಉಪಸ್ಥಿರಿದ್ದರು.

Leave a Reply

Your email address will not be published. Required fields are marked *

five × 5 =