ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಇಲ್ಲಿನ ಸಮೀಪದ ಬಸ್ರೂರು ಸಂತ ಫಿಲಿಪ್ ನೇರಿ ಚರ್ಚ್ ಸಭಾ ಭವನದಲ್ಲಿ ಕುಂದಾಪುರ ವಲಯ ಸಮಿತಿ ಹಾಗೂ ಶೆವೊಟ್ ಪ್ರತಿಷ್ಠಾನದ ವತಿಯಿಂದ ಸೌಹಾರ್ದ ಕ್ರಿಸ್ಮಸ್ ಆಚರಣೆ ನಡೆಯಿತು.
ಉಡುಪಿ ಧರ್ಮಪ್ರಾಂತ್ಯದ ಲ್ಯಾಟಿನ್ ಕೆಥೊಲಿಕ್, ಸೀರೊ ಮಲಬಾರ್ ಕೆಥೊಲಿಕ್, ಸಿಎಸ್ಐ, ಅರ್ಥೊಡೆಕ್ಸ್, ಸೀರಿಯನ್ ಸಮಾಜ ಬಾಂಧವರು ಭಾಗವಹಿಸಿದ್ದರು. ಬಸ್ರೂರು ಸಂತ ಫಿಲಿಪ್ ನೇರಿ ಚರ್ಚಿನ ಧರ್ಮಗುರು ಚಾರ್ಲ್ಸ್ ನೊರೋನ್ಹಾ ಅವರು ಕಾರ್ಯಕ್ರಮ ಉದ್ಘಾಟಿಸಿದರು.
ಉಡುಪಿ ಸಿಎಸ್ಐ ಸಭೆಯ ಮಾಜಿ ವಲಯಾಧ್ಯಕ್ಷ ಸ್ಟೀವನ್ ಸರ್ವೋತ್ತಮ, ತೆಂಕನಿಡಿಯೂರು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಹ ಪ್ರಾಧ್ಯಾಪಕ ಜಯಪ್ರಕಾಶ್ ಶೆಟ್ಟಿ, ಬಸ್ರೂರು ಸರ್ಕಾರಿ ಉರ್ದು ಶಾಲೆಯ ಅಧ್ಯಕ್ಷ ಅಬ್ದುಲ್ ಅಜೀಜ್ ಕ್ರಿಸ್ಮಸ್ ಸಂದೇಶ ನೀಡಿದರು.
ಕುಂದಾಪುರ ವಲಯ ವ್ಯಾಪ್ತಿಯ 7 ಕುಟುಂಬಗಳಿಗೆ ವೈದ್ಯಕೀಯ ಹಾಗೂ ಮನೆ ಕಟ್ಟಲು ನೆರವನ್ನು ಹಸ್ತಾಂತರಿಸಲಾಯಿತು
ಕುಂದಾಪುರ ಕೆಥೊಲಿಕ್ ಸಭಾ ವಲಯ ಅಧ್ಯಕ್ಷೆ ಮೇಬಲ್ ಡಿಸೋಜಾ ಅಧ್ಯಕ್ಷತೆ ವಹಿಸಿದ್ದರು. ಕುಂದಾಪುರ ಕೃಪಾ ಚರ್ಚ್ ನ ಉಸ್ತುವಾರಿ ಜೊಯೆಲ್ ಸುಹಾಸ್, ಕೆಥೊಲಿಕ್ ಸಭಾ ಕುಂದಾಪುರ ವಲಯ ಕಾರ್ಯದರ್ಶಿ ಮೆಲ್ವಿನ್ ಫುರ್ಟಾಡೊ, ಪ್ರೀತಮ್ ಡಿಸೋಜಾ. ಸಹ ಸಂಚಾಲಕ ಜೀವನ್ ಸಾಲಿನ್ಸ್, ಮಾಜಿ ಅಧ್ಯಕ್ಷ ವಿನೋದ್ ಕ್ರಾಸ್ಟೋ, ಹೆರಿಕ್ ಗೊನ್ಸಾಲ್ವಿಸ್ ಇದ್ದರು.