‘ಸ್ಪೂರ್ತಿ’ ರೋಟರಿ ವಲಯ ಕ್ರೀಡಾಕೂಟ; ಬಹುಮಾನ ವಿತರಣೆ

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ರೋಟರಿ ಕ್ಲಬ್ ಕುಂದಾಪುರದ ಆಶ್ರಯದಲ್ಲಿ ರೋಟರಿ ವಲಯ೧ರ ಕ್ರೀಡಾಕೂಟ ಸ್ಪೂರ್ತಿ-೨೦೧೬ರ ಬಹುಮಾನ ವಿತರಣಾ ಸಮಾರಂಭ ಕುಂದಾಪುರದ ಬಸ್ರೂರು ಮೂರುಕೈ ಬಳಿಯಿರುವ ಆಶೀರ್ವಾದ ಹಾಲ್‌ನಲ್ಲಿ ಜರುಗಿತು.

Call us

Call us

ನಿಯೋಜಿತ ರೋಟರಿ ಜಿಲ್ಲಾ ಗವರ್ನರ್ ಅಭಿನಂದನ ಶೆಟ್ಟಿ ಬಹುಮಾನ ವಿತರಿಸಿ, ಕ್ರೀಡಾ ಮನೋಭಾವ ಭಾಂಧವ್ಯದ ವೃದ್ಧಿಗೆ ಸಹಕಾರಿಯಾಗಿದೆ ಎಂದು ವಿಜೇತರನ್ನು ಅಭಿನಂದಿಸಿದರು.

ರೋಟರಿ ಕ್ಲಬ್ ಕುಂದಾಪುರದ ಅಧ್ಯಕ್ಷ ಉದಯಕುಮಾರ್ ಶೆಟ್ಟಿ ಅಧ್ಯಕ್ಷತೆವಹಿಸಿ ಅತ್ಯುತ್ತಮ ರೀತಿಯಲ್ಲಿ ಕ್ರೀಡಾಕೂಟದಲ್ಲಿ ಭಾಗವಹಿಸಿದ ರೋಟರಿ ಸದಸ್ಯರನ್ನು ಅಭಿನಂದಿಸಿ, ಕಾರ್ಯಕ್ರಮವನ್ನು ಯಶಸ್ವಿಯಾಗಿ ಸಂಘಟಿಸಲು ಸಹಕರಿಸಿದ ಸದಸ್ಯರಿಗೆ ಕೃತಜ್ಞತೆ ಸಲ್ಲಿಸಿದರು.

Call us

Call us

ಈ ಸಂದರ್ಭದಲ್ಲಿ ಇಂಡಿಯನ್ ಅಕಾಡೆಮಿ ಆಫ್ ಪಿಡಿಯಾಟ್ರಿಕ್ಸ್‌ನ ನಿಯೋಜಿತ ರಾಷ್ಟ್ರೀಯ ಅಧ್ಯಕ್ಷ ಡಾ. ಸಂತೋಷ್ ಟಿ. ಸೋನ್ಸ್ ಅವರನ್ನು ಸನ್ಮಾನಿಸಲಾಯಿತು. ಮುಖ್ಯ ಅತಿಥಿಗಳಾಗಿ ರೋಟರಿ ಮಾಜಿ ಜಿಲ್ಲಾ ಗವರ್ನರ್ ಕೃಷ್ಣಯ್ಯ ಶೆಟ್ಟಿ, ರೋಟರಿ ಸಹಾಯಕ ಗವರ್ನರ್ ಮಧುಕರ ಹೆಗ್ಡೆ, ಜೋನಲ್ ಲೆಫ್ಟಿನೆಂಟ್ ಡಾ. ರವಿಕಿರಣ್, ರೋಟರಿ ಕುಂದಾಪುರ ಸ್ಥಾಪಕ ಸದಸ್ಯ ಸೋಲೋಮನ್ ಸೋನ್ಸ್ ಇನ್ನಿತರರು ಉಪಸ್ಥಿತರಿದ್ದರು. ರೋಟರಿ ವಲಯ ಕ್ರೀಡಾ ಸಂಯೋಜಕ ಮನೋಜ್ ನಾಯರ್ ಪ್ರಾಸ್ತಾವಿಕ ಮಾತುಗಳನ್ನಾಡಿದರು. ರಾಘವೇಂದ್ರಚರಣ ನಾವಡ ವಿಜೇತರ ಪಟ್ಟಿ ವಾಚಿಸಿದರು. ಕ್ರೀಡಾಕೂಟ ಸಂಚಾಲಕ ರಂಜಿತ್ ಶೆಟ್ಟಿ ವಂದಿಸಿದರು. ಉಷಾ ಕೆ.ಸಿ. ಶೆಟ್ಟಿ ಸಹಕರಿಸಿದರು.

Leave a Reply

Your email address will not be published. Required fields are marked *

18 + fifteen =