ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಭಾರತಕ್ಕೆ ಅವಿಚ್ಛಿನ್ನವಾದ ಸಾಂಸ್ಕೃತಿಕ ಪರಂಪರೆಯಿದೆ. ಆದರೆ ಇತ್ತೀಚಿನ ದಿನಗಳಲ್ಲಿ ಬದಲಾಗುತ್ತಿರುವ ಜೀವನ ಶೈಲಿ, ಕೊಳ್ಳುಬಾಕ ಸಂಸ್ಕೃತಿ, ಕೈಗಾರೀಕರಣ, ಪರಿಸರ ಮಾಲಿನ್ಯಕ್ಕೆ ಮುಖ್ಯ ಕಾರಣವಾಗುತ್ತಿದೆ ಎಂದು ಕುಂದಾಪುರ ಪುರಸಭೆಯ ಮುಖ್ಯಾಧಿಕಾರಿ ಗೋಪಾಲಕೃಷ್ಣ ಶೆಟ್ಟಿ ಹೇಳಿದರು.
ಇದೇ ಸಂದರ್ಭದಲ್ಲಿ ಪ್ಲಾಸ್ಟಿಕ್ ನಿರ್ಮೂಲನೆ, ತ್ಯಾಜ್ಯ ನಿರ್ವಹಣೆ, ಸ್ವಚ್ಛ ಭಾರತ ಯೋಜನೆ, ಪೌರ ಕಾರ್ಮಿಕರ ಸಮಸ್ಯೆ ಮತ್ತು ಸವಾಲುಗಳು, ದೃಶ್ಯ ಮಾಲಿನ್ಯ ಈ ವಿಷಯದ ಕುರಿತು ವಿದ್ಯಾರ್ಥಿಗಳ ಜೊತೆ ಸಂವಾದ ನಡೆಸಿದರು. ತ್ಯಾಜ್ಯ ವಿಲೇವಾರಿ ಮಾಡಲು ನಾಗರಿಕರ ಸಹಕಾರ ಅನಿವಾರ್ಯ ಮತ್ತು ಸ್ವಚ್ಛ ಕುಂದಾಪುರಕ್ಕೆ ಯುವ ಜನತೆಯ ಪಾತ್ರ ಬಹುಮುಖ್ಯ ಎಂದು ಹೇಳಿದರು.
ಕಾಲೇಜಿನ ಪ್ರಾಂಶುಪಾಲ ಚೇತನ್ ಶೆಟ್ಟಿ ಕೋವಾಡಿ ಅಧ್ಯಕ್ಷತೆ ವಹಿಸಿದ್ದರು. ಎನವೈರ‍್ನಮೆಂಟ್ ಎಂಜಿನಿಯರ್ ಮದನ್ ನಾಯ್ಡು, ಪ್ರಭಾರ ಪ್ರಾಂಶುಪಾಲ ರಾಜೇಶ್ ಶೆಟ್ಟಿ ಉಪಸ್ಥಿತರಿದ್ದರು. ಎನ್.ಎಸ್.ಎಸ್. ಯೋಜನಾಧಿಕಾ ರಕ್ಷಿತ್ ರಾವ್ ಗುಜ್ಜಾಡಿ ಸ್ವಾಗತಿಸಿದರು, ಸಹ ಯೋಜನಾಧಿಕಾರಿ ಕು. ಪ್ರೀತಿ ಹೆಗ್ಡೆ ವಂದಿಸಿದರು. ವಿದ್ಯಾರ್ಥಿನಿ ಪುಷ್ಪಲತಾ ಅತಿಥಿಗಳನ್ನು ಪರಿಚಯಿಸಿದರು. ವಿದ್ಯಾರ್ಥಿ ಲೋಕೇಶ್ ಕಾರ್ಯಕ್ರಮ ನಿರೂಪಿಸಿದರು.