ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಕೋವಿಡ್‌ನ ಕಠಿಣ ಪರಿಸ್ಥಿತಿಯಲ್ಲಿಯೂ ಕೂಡ ಜೀವದ ಹಂಗು ತೊರೆದು ಕೆಲಸ ಮಾಡುತ್ತಿರುವ ವೈದ್ಯರ ಕಾರ್ಯ ನಿಜಕ್ಕೂ ಶ್ಲಾಘನೀಯವಾಗಿದೆ. ಪ್ರತಿಯೊಬ್ಬ ನಾಗರಿಕನು ಕೂಡ ಸ್ವಯಂ ಜಾಗೃತಿ ವಹಿಸುವ ಅಗತ್ಯತೆ ಇವತ್ತು ಇದೆ. ವಿವಿಧತೆಯಲ್ಲಿ ಏಕತೆ ಎನ್ನುವ ಧ್ಯೇಯದಡಿಯಲ್ಲಿ ವಿಭಿನ್ನ ಸಮಾಜಮುಖಿ ಕಾರ್ಯಕ್ರಮಗಳನ್ನು ಸೌಹಾರ್ದ ಸಹಕಾರಿ ಮಾಡುತ್ತಿದೆ ಎಂದು ಬೆಂಗಳೂರಿನ ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿ ನಿ. ನಿರ್ದೇಶಕ ಮಂಜುನಾಥ ಎಸ್.ಕೆ. ಹೇಳಿದರು.
ಕುಂದಾಪುರ ಸೌಹಾರ್ದ ಕ್ರೆಡಿಟ್ ಕೊ-ಅಪರೇಟಿವ್ ಲಿ., ಕುಂದಾಪುರ ವತಿಯಿಂದ ಕೋವಿಡ್-19 ಇದರ ಸಾಮಾಜಿಕ ಕಳಕಳಿ ಪ್ರಯುಕ್ತ ಸ್ವಯಂಚಾಲಿತ ಹ್ಯಾಂಡ್ ಸ್ಯಾನಿಟೈಜರ್ ಡಿಸ್ಪೆಂಸರ್ ಮಾರುಕಟ್ಟೆಗೆ ಬಿಡುಗಡೆಗೊಳಿಸಿ ಅವರು ಮಾತನಾಡಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬೈಂದೂರಿನ ಶ್ರೀ ರಾಮ ಕ್ರೆಡಿಟ್ ಕೋ-ಆಪರೇಟಿವ್ ಅಧ್ಯಕ್ಷ ಎಸ್. ರಾಜು ಪೂಜಾರಿ ವಹಿಸಿದ್ದರು. ಕುಂದಾಪುರ ಚಿನ್ಮಯಿ ಆಸ್ಪತ್ರೆಯ ಆಡಳಿತ ನಿರ್ದೇಶಕ ಡಾ. ಉಮೇಶ್ ಪುತ್ರನ್ ಅವರನ್ನು ಸನ್ಮಾನಿಸಲಾಯಿತು. ಕುಂದಾಪುರದ ನ್ಯಾಯವಾದಿ ರವಿಕಿರಣ್ ಮುರ್ಡೆಶ್ವರ್, ಕುಂದಾಪುರ ಸೌಹಾರ್ದ ಕ್ರೆಡಿಟ್ ಕೊ-ಅಪರೇಟಿವ್ ಲಿ. ಉಪಾಧ್ಯಕ್ಷ ಸುಧಾಕರ್ ಖಾರ್ವಿ, ಕುಂದಾಪುರದ ರೋಜರಿ ಕ್ರೆಡಿಟ್ ಕೊ-ಅಪರೇಟಿವ್ ಸೊಸೈಟಿ ಅಧ್ಯಕ್ಷ ಜಾನ್ಸನ್ ಡಿ’ಆಲ್ಮೇಡಾ ಉಪಸ್ಥಿತರಿದ್ದರು.
ಕುಂದಾಪುರ ಸೌಹಾರ್ದ ಕ್ರೆಡಿಟ್ ಕೊ-ಅಪರೇಟಿವ್‌ನ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಶಿವಾನಂದ ಪೂಜಾರಿ ಸ್ವಾಗತಿಸಿ, ಪ್ರಾಸ್ತಾವಿಕ ನುಡಿಗಳ್ನಾಡಿದರು.