ಹಟ್ಟಿಯಂಗಡಿಯಲ್ಲಿ ಶತಚಂಡಿಕಾ ಯಾಗ, ಅತಿರುದ್ರ ಯಾಗ ಸಂಪನ್ನ

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಹಟ್ಟಿಯಂಗಡಿಯ ಶ್ರೀ ಸಿದ್ಧಿವಿನಾಯಕ ದೇವಸ್ಥಾನದಲ್ಲಿ ಶತಚಂಡಿಕಾಯಾಗ ಮತ್ತು ಅತಿರುದ್ರ ಮಹಾಯಾಗ ಸಾಂಗವಾಗಿ ನೆರವೇರಿತು.

Call us

Call us

Call us

ಯಾಗದ ಅಂಗವಾಗಿ ವಿವಿಧ ಧಾರ್ಮಿಕ ವಿಧಿವಿದಾನಗಳು ಅಚ್ಚುಕಟ್ಟಾಗಿ ನಡೆದು, ಭಕ್ತ ಸಮೂಹದ ನಡುವೆ ದೇವಳದ ಆಡಳಿತ ಧರ್ಮದರ್ಶಿ ಹೆಚ್. ರಾಮಚಂದ್ರ ಭಟ್ ದಂಪತಿಗಳು ಯಾಗದ ಪೂರ್ಣಾಹುತಿಯಲ್ಲಿ ಪಾಲ್ಗೊಂಡರು. ದೇವಳದ ಪ್ರದಾನ ಅರ್ಚಕ ಬಾಲಚಂದ್ರ ಭಟ್, ಶ್ರೀ ಸಿದ್ದಿವಿನಾಯಕ ವಸತಿ ಶಾಲೆಯ ಪ್ರಾಂಶುಪಾಲ ಶರಣ್‌ಕುಮಾರ್ ಇನ್ನಿತರರು ಉಪಸ್ಥಿತರಿದ್ದರು. ನಾಡಿನ ವಿವಿಧ ಭಾಗಗಳಿಂದ ಆಗಮಿಸಿದ ಭಕ್ತ ಸಮೂಹ ಯಾಗದಲ್ಲಿ ಭಾಗವಹಿಸಿ ಕೃತಾರ್ಥರಾದರು.

ಶ್ರೀಗಳ ಆಗಮನ : ಹೊಸನಗರದ ಶ್ರೀರಾಮಚಂದ್ರಾಪುರ ಮಠದ ಶ್ರೀ ರಾಘವೇಶ್ವರ ಭಾರತಿ ಸ್ವಾಮೀಜಿಯವರು ಹಟ್ಟಿಯಂಗಡಿಯ ಶ್ರೀ ಸಿದ್ಧಿವಿನಾಯಕ ದೇವಳಕ್ಕೆ ಆಗಮಿಸಿ, ಯಾಗದಲ್ಲಿ ಪಾಲ್ಗೊಂಡರು. ದೇವಳದ ಆಡಳಿತ ಧರ್ಮದರ್ಶಿ ಹೆಚ್. ರಾಮಚಂದ್ರ ಭಟ್ ದಂಪತಿಗಳು ಶ್ರೀಗಳನ್ನು ವಿದ್ಯುಕ್ತವಾಗಿ ಸ್ವಾಗತಿಸಿದರು.

Leave a Reply

Your email address will not be published. Required fields are marked *

3 × five =